15 ವರ್ಷದ ಪತ್ನಿಯೊಂದಿಗಿನ ದೈಹಿಕ ಸಂಬಂಧ ಅತ್ಯಾಚಾರವಲ್ಲ – ನೂತನ ತೀರ್ಪು ಎತ್ತಿ ಹಿಡಿದ ಹೈಕೋರ್ಟ್…!

15 ವರ್ಷದ ಪತ್ನಿಯೊಂದಿಗಿನ ದೈಹಿಕ ಸಂಬಂಧ ಅತ್ಯಾಚಾರವಲ್ಲ – ನೂತನ ತೀರ್ಪು ಎತ್ತಿ ಹಿಡಿದ ಹೈಕೋರ್ಟ್…!

ನ್ಯೂಸ್ ಆ್ಯರೋ : 15 ವರ್ಷದ ಪತ್ನಿಯೊಂದಿಗಿನ‌ ದೈಹಿಕ ಸಂಬಂಧವನ್ನು ಅತ್ಯಾಚಾರ ಎನ್ನಲಾಗದು ಎಂದು ಹೈಕೋರ್ಟ್ ಆದೇಶ ನೀಡಿದೆ. ದೆಹಲಿ‌ ಪೊಲೀಸರ ಮೇಲ್ಮನವಿಯನ್ನು ಕೋರ್ಟ್ ವಜಾಗೊಳಿಸಿದೆ. 15 ವರ್ಷದ ಪತ್ನಿಯ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಆಕೆಯ ಪತಿಯನ್ನು ವಿಚಾರಣ ನ್ಯಾಯಾಲಯ ಖಲಾಸೆಗೊಳಿಸಿದೆ‌. ಈ ತೀರ್ಪನ್ನು ದೆಹಲಿ ಹೈಕೋರ್ಟ್ ಎತ್ತಿಹಿಡಿದಿದೆ.

ಪ್ರಕರಣದ ಹಿನ್ನೆಲೆ

2015 ರಲ್ಲಿ ಬಾಲಕಿಯ ತಾಯಿಯು ತನ್ನ ಅಪ್ರಾಪ್ತ ವಯಸ್ಸಿನ‌ ಮಗಳ ಮೇಲೆ ವಿವಾಹಿತ ವ್ಯಕ್ತಿಯೊಬ್ಬ ಅತ್ಯಾಚಾರ ನಡೆಸಿದ್ದು, ಆಕೆ ಗರ್ಭಿಣಿಯಾಗಿದ್ದಾಳೆ ಎಂದು ದೂರು ಸಲ್ಲಿಸಿದ್ದರು. ದೂರಿನನ್ವಯ ಆರೋಪಿ ಮುಸ್ಲಿಂ ವ್ಯಕ್ತಿಯ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಲಾಗಿತ್ತು. ಆದರೆ ಆ ವ್ಯಕ್ತಿಯೊಂದಿಗೆ 2014ರಲ್ಲಿ ತಾನು ವಿವಾಹವಾಗಿದ್ದು ನಂತರ ಆತನೊಂದಿಗೆ ದೈಹಿಕ‌ ಸಂಬಂಧ ಹೊಂದಿರುವುದಾಗಿ ಬಾಲಕಿ ಹೇಳಿಕೆ ನೀಡಿದ್ದಳು.

ಈ ಹೇಳಿಕೆಯನ್ನು ಪರಿಗಣಿಸಿ ಎರಡನೇ ಪತ್ನಿ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ ಮುಸ್ಲಿಂ ವ್ಯಕ್ತಿ ತಪ್ಪಿತಸ್ಥನಲ್ಲ, ಆತ ಕಾನೂನುಬದ್ಧವಾಗಿ ಖಲಾಸೆಯಾಗಿದ್ದಾನೆ ಎಂದು ಕೋರ್ಟ್ ತಿಳಿಸಿದೆ.

ಈ ತೀರ್ಪನ್ನು ಪ್ರಶ್ನಿಸಿ ದೆಹಲಿ‌ ಪೊಲೀಸರು ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದರು. ಪ್ರಕರಣವನ್ನು ಗಮನಿಸಿದ ಹೈಕೋರ್ಟ್ ನ್ಯಾಯ ಮೂರ್ತಿಗಳಾದ ಸುರೇಶ್ ಕುಮಾರ್ ಕೈಟ್ ಹಾಗೂ ನೀನಾ ಬಾನ್ಸಲ್ ಕೃಷ್ಣ ಅವರ ಪೀಠ ಕೋರ್ಟ್ ಆದೇಶವನ್ನು ಎತ್ತಿ ಹಿಡಿದು, ಪೊಲೀಸರ ಮೇಲ್ಮನವಿಯನ್ನು ವಜಾ ಗೊಳಿಸಿದೆ‌.

ಹೈಕೋರ್ಟ್ ಹೇಳಿದ್ದೇನು?

ಈ ಬಗ್ಗೆ ತೀರ್ಪು ನೀಡಿದ ಹೈಕೋರ್ಟ್, ‘ಬಾಲಕಿ 15 ವರ್ಷ ವಯಸ್ಸಿನವಳು. ಆರೋಪಿ ಪತಿ ಹಾಗೂ ಪತ್ನಿ ನಡುವಿನ ದೈಹಿಕ ಸಂಬಂಧ ಅತ್ಯಾಚಾರವಲ್ಲ. ಐಪಿಸಿ ಸೆಕ್ಷನ್ 375ರಲ್ಲಿ ನೀಡಲಾಗಿರುವ ವಿನಾಯಿತಿಯ ಅನ್ವಯ ವ್ಯಕ್ತಿ 15 ವರ್ಷಕ್ಕಿಂತ ಕಡಿಮೆ‌ ಇಲ್ಲದ ಬಾಲಕಿ ಜೊತೆ ಲೈಂಗಿಕ ಕ್ರಿಯೆಯಲ್ಲಿ ತೊಡಗುವುದು ಅಪರಾಧವಲ್ಲ’ ಎಂದು ಆದೇಶ ನೀಡಿದೆ.

Related post

ಹಾಸನ ಪೆನ್‌ಡ್ರೈವ್ ಪ್ರಕರಣ; 16 ಬೇಡಿಕೆಗಳನ್ನು ಮುಂದಿಟ್ಟು ಸಿಎಂಗೆ ಬಂತು ಬಹಿರಂಗ ಪತ್ರ

ಹಾಸನ ಪೆನ್‌ಡ್ರೈವ್ ಪ್ರಕರಣ; 16 ಬೇಡಿಕೆಗಳನ್ನು ಮುಂದಿಟ್ಟು ಸಿಎಂಗೆ ಬಂತು ಬಹಿರಂಗ…

ನ್ಯೂಸ್ ಆರೋ: ಮಹಿಳೆಯೊಬ್ಬರ ಅಪಹರಣ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ಸಚಿವ ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು ಸಿಕ್ಕಿದೆ. ಇದರ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪ್ರಜ್ಞಾವಂತ ನಾಗರೀಕರು ಎಂಬ ಹೆಸರಿನಲ್ಲಿ…
ಯಶ್ ಮೂವಿಯಲ್ಲಿ ಶೂರ್ಪನಖಿಯಾಗಿ ಮಿಂಚಲಿದ್ದಾರೆ ರಾಕುಲ್!

ಯಶ್ ಮೂವಿಯಲ್ಲಿ ಶೂರ್ಪನಖಿಯಾಗಿ ಮಿಂಚಲಿದ್ದಾರೆ ರಾಕುಲ್!

ನ್ಯೂಸ್ ಆರೋ: ಕೆಜಿಎಫ್ ನಂತರ ಹಿಟ್ ಸಿನಿಮಾಗಳಲ್ಲಿ ಮಾತ್ರ ಕಾಣಿಸಿಕೊಳ್ಳುತ್ತಿರುವ ಯಶ್ ಇದೀಗ ಮತ್ತೊಂದು ಸಿನಿಮಾ ನಿರ್ಮಾಣಕ್ಕೆ ಕೈ ಹಾಕಿದ್ದಾರೆ. ಆ ಚಿತ್ರಕ್ಕೆ ಶೂರ್ಪನಖಿಯಾಗಿ ರಕುಲ್ ಕಾಣಿಸಿಕೊಳ್ಳಲಿದ್ದಾರೆ. ಹೌದು,ಶೂರ್ಪನಕಿಯಾಗಿ…
ಪಾಕ್ ಆಕ್ರಮಿತ ಕಾಶ್ಮೀರ ಜನರಿಗೆ ಬಂಪರ್ ಪ್ಯಾಕೇಜ್; ಆಹಾರ ಉತ್ಪನ್ನಗಳ- ವಿದ್ಯುತ್‌ ದರ ಇಳಿಕೆ ಮಾಡಿದ ಪಾಕ್‌ ಸರ್ಕಾರ

ಪಾಕ್ ಆಕ್ರಮಿತ ಕಾಶ್ಮೀರ ಜನರಿಗೆ ಬಂಪರ್ ಪ್ಯಾಕೇಜ್; ಆಹಾರ ಉತ್ಪನ್ನಗಳ- ವಿದ್ಯುತ್‌…

ನ್ಯೂಸ್ ಆರೋ: ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಜನರು ಭಾರತಕ್ಕೆ ಸೇರುತ್ತೇವೆ ಎಂದು ನಡೆಸುತ್ತಿದ್ದ ಪ್ರತಿಭಟನೆಗೆ ಪಾಕಿಸ್ತಾನದ ಸರ್ಕಾರ ಮಣಿದಿದೆ. ಹೌದು, ಜನರ ಪ್ರತಿಭಟನೆ ಬೆನ್ನಲ್ಲೇ ಪಾಕ್‌ ಆಕ್ರಮಿತ ಕಾಶ್ಮೀರದ…

Leave a Reply

Your email address will not be published. Required fields are marked *