ಮದುವೆಯಾದ ವರ್ಷದೊಳಗೆ ವಿಚ್ಛೇದನ ಕೊಡಬಹುದು – ಕೂಲಿಂಗ್ ಆಫ್ ಅವಧಿ ಕಡ್ಡಾಯವಲ್ಲ : ಹೈಕೋರ್ಟ್

ಮದುವೆಯಾದ ವರ್ಷದೊಳಗೆ ವಿಚ್ಛೇದನ ಕೊಡಬಹುದು – ಕೂಲಿಂಗ್ ಆಫ್ ಅವಧಿ ಕಡ್ಡಾಯವಲ್ಲ : ಹೈಕೋರ್ಟ್

ನ್ಯೂಸ್ ಆ್ಯರೋ : ದಂಪತಿ ಮದುವೆಯಾದ ಒಂದು ವರ್ಷದೊಳಗೆ ಡಿವೋರ್ಸ್ ಪಡೆಯಲು ಬಯಸಿದರೆ ಆ ಅರ್ಜಿಯನ್ನು ಪರಿಗಣಿಸಬಹುದು ಎಂದು ಹೈಕೋರ್ಟ್‌ ಅಭಿಪ್ರಾಯಪಟ್ಟಿದೆ. ಪರಸ್ಪರ ಒಪ್ಪಿಗೆ ವಿಚ್ಛೇದನಕ್ಕಾಗಿ ವಿಶೇಷ ವಿವಾಹ ಕಾಯಿದೆಯಡಿಯಲ್ಲಿ ಉಲ್ಲೇಖಿಸಲಾದ ಒಂದು ವರ್ಷದ ಕೂಲಿಂಗ್ ಆಫ್ ಅವಧಿಯು ಕಡ್ಡಾಯವಲ್ಲ ಎಂದು ಹೇಳಿದೆ.

ಮನವಿಯನ್ನು ಸಲ್ಲಿಸಲು ಸಮಯವಾಕಾಶ ಮತ್ತು ಅರ್ಜಿಯನ್ನು ಸಲ್ಲಿಸುವ ದಿನಾಂಕದಿಂದ ಆರು ತಿಂಗಳ ಅವಧಿಯನ್ನು ಒದಗಿಸುವ ಉದ್ದೇಶವೆಂದರೆ, ಆರು ಅವಧಿಯ ನಂತರ ಇಬ್ಬರೂ ತಮ್ಮ ಮನಸ್ಸನ್ನು ಬದಲಾಯಿಸಬಹುದು ಮತ್ತು ಅವರ ಭಿನ್ನಾಭಿಪ್ರಾಯಗಳನ್ನು ಪರಿಹರಿಸಬಹುದು ಎಂಬುದಾಗಿದೆ. ಆದರೆ ತಿಂಗಳುಗಳು ಕಳೆದ ಮೇಲೂ ಕಕ್ಷಿದಾರರು ವಿಚ್ಛೇದನ (Divorce)ದೊಂದಿಗೆ ಮುಂದುವರಿಯಲು ನಿರ್ಧರಿಸುತ್ತಾರೆ. ಹೀಗಾಗಿ ಇನ್ಮುಂದೆ ಮದುವೆ (Marriage)ಯಾದ ಒಂದೇ ವರ್ಷದೊಳಗೆ ಡಿವೋರ್ಸ್ ಕೊಡಬಹುದು ಎಂದು ನ್ಯಾಯಮೂರ್ತಿಗಳಾದ ಜಿ ನರೇಂದರ್ ಮತ್ತು ವಿಜಯಕುಮಾರ್ ಎ ಪಾಟೀಲ್ ಅವರ ವಿಭಾಗೀಯ ಪೀಠ ಹೇಳಿದೆ.

ವಿಶೇಷ ವಿವಾಹ ಕಾಯ್ದೆಯಡಿ ನವೆಂಬರ್‌ 2022ರಲ್ಲಿ ಮದುವೆಯಾಗಿದ್ದ ಜೋಡಿ ಮೂರೇ ತಿಂಗಳಲ್ಲಿ ದಾಂಪತ್ಯದಲ್ಲಿ ಸಮಸ್ಯೆ ಉಂಟಾಗಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದರು. ಆದರೆ ಮದುವೆಯಾದ ಒಂದೇ ವರ್ಷಕ್ಕೆ ‘ಕೂಲಿಂಗ್ ಆಫ್‌’ ಅವಧಿಯಲ್ಲಿ ಅರ್ಜಿ ಸಲ್ಲಿಸುವಂತಿಲ್ಲ ಎಂದು ಕಾರಣ ನೀಡಿ ಕೌಟುಂಬಿಕ ನ್ಯಾಯಾಲಯ (Family court) ಅರ್ಜಿಯನ್ನು ತಿರಸ್ಕರಿಸಿತ್ತು. ಈ ಆದೇಶ ಪ್ರಶ್ನಿಸಿ ಜೋಡಿ ಹೈಕೋರ್ಟ್‌ ಮೆಟ್ಟಿಲೇರಿತ್ತು.

ಅರ್ಜಿಯ ವಿಚಾರಣೆ ನಡೆಸಿದ ನ್ಯಾ.ಜಿ ನರೇಂದ್ರ ಮತ್ತು ನ್ಯಾ.ವಿಜಯಕುಮಾರ್ ಎ ಪಾಟೀಲ್ ಅವರ ವಿಭಾಗೀಯ ಪೀಠ ವಿವಾಹವಾದ ಒಂದು ವರ್ಷದೊಳಗೆ ವಿಚ್ಛೇದನ ಅರ್ಜಿ ಸಲ್ಲಿಸುವಂತಿಲ್ಲ ಎಂಬ ನಿಯಮ (Rules) ಕಡ್ಡಾಯವಲ್ಲ. ದಂಪತಿ ಹೊಂದಾಣಿಕೆ ಮಾಡಿಕೊಳ್ಳಲಿ ಎಂಬ ಕಾರಣಕ್ಕೆ ಈ ‘ಕೂಲಿಂಗ್ ಆಫ್ ಅವಧಿ’ ನೀಡಲಾಗಿದೆ. ಆದರೆ ಒಟ್ಟಿಗೆ ಬಾಳಲು ಸಾಧ್ಯವೇ ಇಲ್ಲ ಎಂಬ ಪರಿಸ್ಥಿತಿ ಎದುರಾದರೆ ವಿಚ್ಛೇದನ ಪರಿಗಣಿಸಬಹುದು ಎಂದು ತಿಳಿಸಿದ್ದರು.

ಮಾತ್ರವಲ್ಲ, ‘ಇಬ್ಬರೂ ಪದವೀಧರರಾಗಿದ್ದು ಹೊಂದಾಣಿಕೆ ಮಾಡಿಕೊಳ್ಳಲು ಪ್ರಯತ್ನಿಸಿ ಸಾಧ್ಯವಾಗದೆ ಪರಸ್ಪರ ಒಪ್ಪಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ. ವೃತ್ತಿಯ (Job) ಕಡೆಗೆ ಗಮನ ಹರಿಸಲು ನಿರ್ಧರಿಸಿದ್ದಾರೆ. ವಿವಾಹವಾದ ಒಂದು ವರ್ಷದಲ್ಲಿ ಹೊಂದಾಣಿಕೆಯಾಗಬಹುದು ಎಂದು ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಲು ನಿರ್ಬಂಧವಿದೆ. ಇದು ಎಲ್ಲಾ ಪ್ರಕರಣಗಳಿಗೂ ಅನ್ವಯಿಸಲ್ಲ’ ಎಂದು ಪೀಠ ಅಭಿಪ್ರಾಯ ಪಟ್ಟಿದೆ. ಹಾಗೆಯೇ ವಿಚ್ಛೇದನ ಅರ್ಜಿಯನ್ನು ಮರುಪರಿಶೀಲಿಸುವಂತೆ ಕೌಟುಂಬಿಕ ನ್ಯಾಯಾಲಯಕ್ಕೆ ನಿರ್ದೇಶನ ನೀಡಲಾಗಿದೆ.

Related post

ದಿನ‌ ಭವಿಷ್ಯ 29-09-2023 ಶುಕ್ರವಾರ | ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 29-09-2023 ಶುಕ್ರವಾರ | ಇಂದಿನ ರಾಶಿಫಲ ಹೀಗಿದೆ..

ಮೇಷಮಕ್ಕಳ ನಿಮ್ಮ ಸಂಜೆಯನ್ನು ಉಲ್ಲಾಸಮಯವಾಗಿಸುತ್ತಾರೆ. ಮಂಕು ಕವಿದ ಮತ್ತು ಒತ್ತಡದ ದಿನಕ್ಕೆ ಮಂಗಳ ಹಾಡಲು ಒಂದು ಸಂತೋಷಕೂಟವನ್ನು ಯೋಜಿಸಿ. ಮಕ್ಕಳ ಸಾಂಗತ್ಯ ನಿಮ್ಮ ದೇಹವನ್ನು ಪುನಃಶ್ಚೇತನಗೊಳಿಸುತ್ತದೆ. ನೀವು ನಿಮ್ಮನ್ನು…
ಸುಬ್ರಹ್ಮಣ್ಯ : ವಿವಾಹಿತ ಮಹಿಳೆಯ ಜೊತೆ ಲಾಡ್ಜ್ ನಲ್ಲಿ ಕಾಮಕೇಳಿ, ಫೋಟೋ ವಿಡಿಯೋ ತೆಗೆದು ಬ್ಲ್ಯಾಕ್ ಮೇಲ್ – ಗ್ರಾಮ ಪಂಚಾಯತ್ ಮಾಜಿ ಸದಸ್ಯ ಪ್ರಶಾಂತ್ ಭಟ್ ಮಾಣಿಲ ಕಾರವಾರದಲ್ಲಿ ಅರೆಸ್ಟ್…!!

ಸುಬ್ರಹ್ಮಣ್ಯ : ವಿವಾಹಿತ ಮಹಿಳೆಯ ಜೊತೆ ಲಾಡ್ಜ್ ನಲ್ಲಿ ಕಾಮಕೇಳಿ, ಫೋಟೋ…

ನ್ಯೂಸ್ ಆ್ಯರೋ : ವಿವಾಹಿತ ಮಹಿಳೆಗೆ ಆರ್ಕೆಸ್ಟ್ರಾದಲ್ಲಿ ಅವಕಾಶ ಕೊಡಿಸುವುದಾಗಿ ನಂಬಿಸಿ ಲೈಂಗಿಕವಾಗಿ ಬಳಸಿಕೊಂಡಿದ್ದಲ್ಲದೇ ಆಕೆಯ ನಗ್ನ ಚಿತ್ರ ಸೆರೆಹಿಡಿದು ಹಲವರಿಗೆ ಶೇರ್ ಮಾಡಿದ್ದು, ಲಕ್ಷಾಂತರ ರೂಪಾಯಿ ಹಣ…
ಗೂಗಲ್‌ನಲ್ಲಿ ಆತ್ಮಹತ್ಯೆಗೆ ದಾರಿ ಹುಡುಕಾಡಿದ ಯುವಕ – ಸೈಬರ್‌ ಪೊಲೀಸರ ಬಲೆಗೆ ಬಿದ್ದವನ ಕಥೆ ಮುಂದೇನಾಯ್ತು ಗೊತ್ತಾ?

ಗೂಗಲ್‌ನಲ್ಲಿ ಆತ್ಮಹತ್ಯೆಗೆ ದಾರಿ ಹುಡುಕಾಡಿದ ಯುವಕ – ಸೈಬರ್‌ ಪೊಲೀಸರ ಬಲೆಗೆ…

ನ್ಯೂಸ್‌ ಆ್ಯರೋ : ಈ ಆಧುನಿಕ ಯುಗದಲ್ಲಿ ಎಲ್ಲನೂ ತಂತ್ರಜ್ಞಾನದ ಮೂಲಕವೇ ನಡೆಯುತ್ತದೆ. ಇನ್ನೂ ಗೂಗಲ್ ಮುಖೇನಾ ನಮಗೆ ಬೇಕಾದ ಎಲ್ಲ ವಿಷಯಗಳನ್ನು ತಿಳಿದುಕೊಳ್ಳಬಹುದಾಗಿದೆ. ಯಾವ ವಿಷಯದ ಬಗ್ಗೆನೂ…

Leave a Reply

Your email address will not be published. Required fields are marked *