ಅತ್ಯಾಚಾರ ಸಂತ್ರಸ್ತೆಯ ಗರ್ಭಪಾತಕ್ಕೆ ಅನುಮತಿ ನೀಡಿದ ಸುಪ್ರಿಂ ಕೋರ್ಟ್ – ಕೋರ್ಟ್ ಕಳವಳಕ್ಕೆ ಕಾರಣವೇನು?

ಅತ್ಯಾಚಾರ ಸಂತ್ರಸ್ತೆಯ ಗರ್ಭಪಾತಕ್ಕೆ ಅನುಮತಿ ನೀಡಿದ ಸುಪ್ರಿಂ ಕೋರ್ಟ್ – ಕೋರ್ಟ್ ಕಳವಳಕ್ಕೆ ಕಾರಣವೇನು?

ನ್ಯೂಸ್ ಆ್ಯರೋ‌ : ಅತ್ಯಾಚಾರ ಸಂತ್ರಸ್ತೆಯ 27 ವಾರಗಳ ಭ್ರೂಣ ತೆಗೆಸಲು ಸುಪ್ರಿಂ ಕೋರ್ಟ್ ಅನುಮತಿ ನೀಡಿದೆ. ಜೊತೆಗೆ ವಿವಾಹೇತರ ಗರ್ಭಧಾರಣೆ ಅಪಾಯಕಾರಿ ಎಂದು ಕಳವಳ ವ್ಯಕ್ತಪಡಿಸಿದೆ.

ಸುಪ್ರಿಂ ಕೋರ್ಟ್ ಹೇಳಿದ್ದೇನು?
ನ್ಯಾ.ಬಿ.ವಿ.ನಾಗರತ್ನಾ ಮತ್ತು ನ್ಯಾ.ಉಜ್ವಲ್ ಭುಯಾನ್ ಅವರಿದ್ದ ಪೀಠ ಅತ್ಯಾಚಾರ ಸಂತ್ರಸ್ತೆಯ ವೈದ್ಯಕೀಯ ವರದಿಗಳನ್ನು ಪರಿಶೀಲಿಸಿ, ಗುಜರಾತ್ ಹೈಕೋರ್ಟ್ ಗರ್ಭಪಾತಕ್ಕೆ ನಿರಾಕರಿಸುವುದು ಸರಿಯಲ್ಲ ಎಂದಿದೆ. ವಿವಾಹೇತರ ಗರ್ಭಾವಸ್ಥೆಯು ಅಪಾಯಕಾರಿ. ಅದರಲ್ಲೂ ಲೈಂಗಿಕ ದೌರ್ಜನ್ಯದಂತಹ ಪ್ರಕರಣಗಳಲ್ಲಿ ಸಂತ್ರಸ್ತೆಗೆ ಮಾನಸಿಕ, ದೈಹಿಕ ಉತ್ತಡ ತಂದೊಡ್ಡುತ್ತದೆ ಎಂದು ಅಭಿಪ್ರಾಯಪಟ್ಟಿದೆ.

ಚರ್ಚೆ ಮತ್ತು ವೈದ್ಯಕೀಯ ವರದಿಗಳನ್ನು ಪರಿಗಣಿಸಿ ಸಂತ್ರಸ್ತೆಯ ಗರ್ಭಪಾತಕ್ಕೆ ಅನುಮತಿ ನೀಡುತ್ತಿದ್ದೇವೆ. ಆಕೆ ಆಸ್ಪತ್ರೆಗೆ ಹಾಜರಾಗುವಂತೆ ನಿರ್ದೇಶನ ನೀಡುತ್ತಿದ್ದೇವೆ ಎಂದು ಪೀಠ ಹೇಳಿದೆ.

ಒಂದು ವೇಳೆ ಭ್ರೂಣ ಬದುಕುಳಿಯುವ ಸಾಧ್ಯತೆ ಕಂಡು ಬಂದರೆ ಅದನ್ನು ಉಳಿಸಿಕೊಳ್ಳಲು ಸೂಕ್ತ ಕ್ರಮಗಳನ್ನು ಆಸ್ಪತ್ರೆ ಕೈಗೊಳ್ಳಬೇಕು. ಭ್ರೂಣ ಉಳಿದರೆ ರಾಜ್ಯ ಸರಕಾರ ಮಗುವನ್ನು ದತ್ತು ಪಡೆಯಲಿದೆ ಎಂದೂ ತಿಳಿಸಿದೆ.

ವೈದ್ಯಕೀಯ ಗರ್ಭಪಾತ (ಎಂ.ಟಿ.ಪಿ.) ಕಾಯ್ದೆಯ ಪ್ರಕಾರ ಅತ್ಯಾಚಾರ ಸೇರಿದಂತೆ ವಿಭಿನ್ನ ಪ್ರಕರಣಗಳಲ್ಲಿ ಭ್ರೂಣಕ್ಕೆ ಗರಿಷ್ಠ 24 ವಾರ ತುಂಬುವುದರೊಳಗೆ ಗರ್ಭಪಾತ ಮಾಡಿಸಿಕೊಳ್ಳಬೇಕು.

Related post

ಸಂಜೆಯ ಸ್ನ್ಯಾಕ್ಸ್‌ಗೆ ಮಾಡಿ ರುಚಿರುಚಿಯಾದ ಗೋಧಿ ಉಸ್ಲಿ; ಆರೋಗ್ಯಕ್ಕೂ ಒಳ್ಳೆಯದು, ರುಚಿನೂ ಸೂಪರ್

ಸಂಜೆಯ ಸ್ನ್ಯಾಕ್ಸ್‌ಗೆ ಮಾಡಿ ರುಚಿರುಚಿಯಾದ ಗೋಧಿ ಉಸ್ಲಿ; ಆರೋಗ್ಯಕ್ಕೂ ಒಳ್ಳೆಯದು, ರುಚಿನೂ…

ನ್ಯೂಸ್ ಆರೋ: ಆರೋಗ್ಯಕ್ಕೆ ಹಿತ ಎನಿಸುವ ಹಾಗೂ ರುಚಿಕಟ್ಟಾದ ರೆಸಿಪಿಯೊಂದನ್ನು ನಾವಿಂದು ಹೇಳಿಕೊಡುತ್ತೇವೆ. ಈ ಗೋಧಿ ಉಸ್ಲಿ ರೆಸಿಪಿಯನ್ನು ನೀವು ಬೇಕೆಂದರೆ ಸ್ನ್ಯಾಕ್ಸ್ ಆಗಿಯೂ ಬೆಳಗ್ಗಿನ ಉಪಾಹಾರವಾಗಿಯೂ ಮಾಡಿ…
ನವೋದಯ ವಿದ್ಯಾಲಯ ಸಮಿತಿ ಇಂದ ಶಿಕ್ಷಕರ ನೇಮಕ; ನೇರ ಸಂದರ್ಶನದ ಮೂಲಕ ಆಯ್ಕೆ

ನವೋದಯ ವಿದ್ಯಾಲಯ ಸಮಿತಿ ಇಂದ ಶಿಕ್ಷಕರ ನೇಮಕ; ನೇರ ಸಂದರ್ಶನದ ಮೂಲಕ…

ನ್ಯೂಸ್ ಆರೋ: ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆಯು ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ನಡೆಸುತ್ತಿದೆ. ಒಟ್ಟು 2 ಪ್ರಾಜೆಕ್ಟ್​ ಅಸೋಸಿಯೇಟ್-I ಹುದ್ದೆ ಖಾಲಿ ಇದ್ದು, ಅರ್ಹ…
ತೆಲಂಗಾಣ ಚುನಾವಣೆ; ಸರತಿ ಸಾಲಿನಲ್ಲಿ ನಿಂತು ವೋಟ್ ಮಾಡಿದ ಟಾಲಿವುಡ್ ತಾರೆಯರು…!

ತೆಲಂಗಾಣ ಚುನಾವಣೆ; ಸರತಿ ಸಾಲಿನಲ್ಲಿ ನಿಂತು ವೋಟ್ ಮಾಡಿದ ಟಾಲಿವುಡ್ ತಾರೆಯರು…!

ನ್ಯೂಸ್ ಆ್ಯರೋ : ಇಂದು  4ನೇ ಹಂತದ ಲೋಕಸಭಾ ಚುನಾವಣೆಯ ಮತದಾನ ನಡೆಯುತ್ತಿದ್ದು, ಆಂಧ್ರಪ್ರದೇಶ ಮತ್ತು ತೆಲಂಗಾಣ ಸೇರಿ ಹಲವೆಡೆ ಮತದಾನ ಪ್ರಕ್ರಿಯೆ ನಡೆಯುತ್ತಿದೆ. ಇದೀಗ ಸಾಮಾನ್ಯರಂತೆಯೇ ಸರತಿ…

Leave a Reply

Your email address will not be published. Required fields are marked *