ಸಲಿಂಗ ವಿವಾಹಕ್ಕೆ ದೇಶದಲ್ಲಿ ಕಾನೂನು ಮಾನ್ಯತೆ ಇಲ್ಲ – ಮಹತ್ವದ ತೀರ್ಪು ಪ್ರಕಟಿಸಿದ ಸುಪ್ರೀಂ ಕೋರ್ಟ್

ಸಲಿಂಗ ವಿವಾಹಕ್ಕೆ ದೇಶದಲ್ಲಿ ಕಾನೂನು ಮಾನ್ಯತೆ ಇಲ್ಲ – ಮಹತ್ವದ ತೀರ್ಪು ಪ್ರಕಟಿಸಿದ ಸುಪ್ರೀಂ ಕೋರ್ಟ್

ನ್ಯೂಸ್ ಆ್ಯರೋ : ದೇಶದಲ್ಲಿ ಸಲಿಂಗ ವಿವಾಹಕ್ಕೆ ಕಾನೂನಿನ ಮಾನ್ಯತೆ ನೀಡಲು ಸುಪ್ರೀಂ ಕೋರ್ಟ್‌ ನಿರಾಕರಿಸಿದ್ದು, ಐವರು ಜಡ್ಜ್‌ಗಳ ಸಾಂವಿಧಾನಿಕ ಪೀಠವು ಈ ಮಹತ್ವದ ತೀರ್ಪು ನೀಡಿದೆ.

ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಡಿವೈ ಚಂದ್ರಚೂಡ್ ನೇತೃತ್ವದ ಮತ್ತು ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್, ಎಸ್ ರವೀಂದ್ರ ಭಟ್, ಹಿಮಾ ಕೊಹ್ಲಿ ಮತ್ತು ಪಿಎಸ್ ನರಸಿಂಹ ಅವರನ್ನೊಳಗೊಂಡ ಐವರು ಜಡ್ಜ್‌ಗಳ ಸಾಂವಿಧಾನಿಕ ಪೀಠವು 10 ದಿನಗಳ ವಿಚಾರಣೆಯ ನಂತರ ಈ ವರ್ಷ ಮೇ 11 ರಂದು ತೀರ್ಪನ್ನು ಕಾಯ್ದಿರಿಸಿತ್ತು.

ಸಾಂವಿಧಾನಿಕ ಪೀಠ ಸತತ ಹತ್ತು ದಿನಗಳ ಕಾಲ ವಿಚಾರಣೆ ನಡೆಸಿ ಕೇಂದ್ರ ಸರ್ಕಾರ, ಅರ್ಜಿದಾರರು ಹಾಗೂ ಸಂಬಂಧಪಟ್ಟಎಲ್ಲ ಪಕ್ಷಗಾರರ ವಾದಗಳನ್ನು ಆಲಿಸಿದೆ. ಬಳಿಕ ಹಿರಿಯ ವಕೀಲರಾದ ಎ.ಎಂ.ಸಿಂಘ್ವಿ, ರಾಜು ರಾಮಚಂದ್ರನ್‌, ಕೆ.ವಿ.ವಿಶ್ವನಾಥನ್‌, ಆನಂದ್‌ ಗ್ರೋವರ್‌, ಹಾಗೂ ಸೌರಭ್‌ ಕೃಪಾಲ್‌ ಅವರ ವಾದಗಳನ್ನೂ ಆಲಿಸಿದೆ.

ಮದುವೆಯು ಹಲವಾರು ಹಕ್ಕುಗಳು, ಸವಲತ್ತುಗಳು ಮತ್ತು ಕಟ್ಟುಪಾಡುಗಳನ್ನು “ಕಾನೂನಿಂದ ಪಾಲಿಸಲಾಗಿದೆ ಮತ್ತು ರಕ್ಷಿಸುತ್ತದೆ” ಎಂದು ಅರ್ಜಿಗಳು ವಾದಿಸಿದ್ದವು. ಮಕ್ಕಳ ಹಕ್ಕುಗಳ ರಕ್ಷಣೆಗಾಗಿ ದೆಹಲಿ ಆಯೋಗವು (DCPCR) ಈ ರೀತಿಯ ಮದುವೆಗಳನ್ನು ಗುರುತಿಸುವಂತೆ ತಿಳಿಸಿದೆ. ಮಕ್ಕಳ ಮೇಲೆ ಇಂತಹ ವಿವಾಹಗಳ ಪ್ರಭಾವದ ಕುರಿತು ನ್ಯಾಯಾಲಯಕ್ಕೆ ಸಹಾಯ ಮಾಡಲು ಮಧ್ಯಸ್ಥಿಕೆ ಅರ್ಜಿಯನ್ನು ಸಲ್ಲಿಕೆ ಮಾಡಿತ್ತು.

ಮತ್ತೊಂದೆಡೆ, ಕೇಂದ್ರ ಸರ್ಕಾರ, ರಾಷ್ಟ್ರೀಯ ಮಕ್ಕಳ ಹಕ್ಕುಗಳ ಸಂಸ್ಥೆ ಎನ್‌ಸಿಪಿಸಿಆರ್ ಮತ್ತು ಜಮಿಯತ್-ಉಲಾಮಾ-ಐ-ಹಿಂದ್ ಎಂಬ ಇಸ್ಲಾಮಿಕ್ ವಿದ್ವಾಂಸರ ಮಂಡಳಿ ಸೇರಿದಂತೆ ಪ್ರತಿವಾದಿಗಳು ಅರ್ಜಿಗಳನ್ನು ವಿರೋಧಿಸಿದರು.

Related post

ಯಶ್ ಮೂವಿಯಲ್ಲಿ ಶೂರ್ಪನಖಿಯಾಗಿ ಮಿಂಚಲಿದ್ದಾರೆ ರಾಕುಲ್!

ಯಶ್ ಮೂವಿಯಲ್ಲಿ ಶೂರ್ಪನಖಿಯಾಗಿ ಮಿಂಚಲಿದ್ದಾರೆ ರಾಕುಲ್!

ನ್ಯೂಸ್ ಆರೋ: ಕೆಜಿಎಫ್ ನಂತರ ಹಿಟ್ ಸಿನಿಮಾಗಳಲ್ಲಿ ಮಾತ್ರ ಕಾಣಿಸಿಕೊಳ್ಳುತ್ತಿರುವ ಯಶ್ ಇದೀಗ ಮತ್ತೊಂದು ಸಿನಿಮಾ ನಿರ್ಮಾಣಕ್ಕೆ ಕೈ ಹಾಕಿದ್ದಾರೆ. ಆ ಚಿತ್ರಕ್ಕೆ ಶೂರ್ಪನಖಿಯಾಗಿ ರಕುಲ್ ಕಾಣಿಸಿಕೊಳ್ಳಲಿದ್ದಾರೆ. ಹೌದು,ಶೂರ್ಪನಕಿಯಾಗಿ…
ಪಾಕ್ ಆಕ್ರಮಿತ ಕಾಶ್ಮೀರ ಜನರಿಗೆ ಬಂಪರ್ ಪ್ಯಾಕೇಜ್; ಆಹಾರ ಉತ್ಪನ್ನಗಳ- ವಿದ್ಯುತ್‌ ದರ ಇಳಿಕೆ ಮಾಡಿದ ಪಾಕ್‌ ಸರ್ಕಾರ

ಪಾಕ್ ಆಕ್ರಮಿತ ಕಾಶ್ಮೀರ ಜನರಿಗೆ ಬಂಪರ್ ಪ್ಯಾಕೇಜ್; ಆಹಾರ ಉತ್ಪನ್ನಗಳ- ವಿದ್ಯುತ್‌…

ನ್ಯೂಸ್ ಆರೋ: ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಜನರು ಭಾರತಕ್ಕೆ ಸೇರುತ್ತೇವೆ ಎಂದು ನಡೆಸುತ್ತಿದ್ದ ಪ್ರತಿಭಟನೆಗೆ ಪಾಕಿಸ್ತಾನದ ಸರ್ಕಾರ ಮಣಿದಿದೆ. ಹೌದು, ಜನರ ಪ್ರತಿಭಟನೆ ಬೆನ್ನಲ್ಲೇ ಪಾಕ್‌ ಆಕ್ರಮಿತ ಕಾಶ್ಮೀರದ…
ಸಂಜೆಯ ಸ್ನ್ಯಾಕ್ಸ್‌ಗೆ ಮಾಡಿ ರುಚಿರುಚಿಯಾದ ಗೋಧಿ ಉಸ್ಲಿ; ಆರೋಗ್ಯಕ್ಕೂ ಒಳ್ಳೆಯದು, ರುಚಿನೂ ಸೂಪರ್

ಸಂಜೆಯ ಸ್ನ್ಯಾಕ್ಸ್‌ಗೆ ಮಾಡಿ ರುಚಿರುಚಿಯಾದ ಗೋಧಿ ಉಸ್ಲಿ; ಆರೋಗ್ಯಕ್ಕೂ ಒಳ್ಳೆಯದು, ರುಚಿನೂ…

ನ್ಯೂಸ್ ಆರೋ: ಆರೋಗ್ಯಕ್ಕೆ ಹಿತ ಎನಿಸುವ ಹಾಗೂ ರುಚಿಕಟ್ಟಾದ ರೆಸಿಪಿಯೊಂದನ್ನು ನಾವಿಂದು ಹೇಳಿಕೊಡುತ್ತೇವೆ. ಈ ಗೋಧಿ ಉಸ್ಲಿ ರೆಸಿಪಿಯನ್ನು ನೀವು ಬೇಕೆಂದರೆ ಸ್ನ್ಯಾಕ್ಸ್ ಆಗಿಯೂ ಬೆಳಗ್ಗಿನ ಉಪಾಹಾರವಾಗಿಯೂ ಮಾಡಿ…

Leave a Reply

Your email address will not be published. Required fields are marked *