ತಲೆ ಕೂದಲು ಬೆಳೆಸಿ ಗಿನ್ನಿಸ್ ದಾಖಲೆ ಬರೆದ ಮಹಿಳೆ – ಈಕೆಯ ತಲೆಗೂದಲು ಎಷ್ಟು ಉದ್ದ ಇದೆ ಗೊತ್ತಾ?

ತಲೆ ಕೂದಲು ಬೆಳೆಸಿ ಗಿನ್ನಿಸ್ ದಾಖಲೆ ಬರೆದ ಮಹಿಳೆ – ಈಕೆಯ ತಲೆಗೂದಲು ಎಷ್ಟು ಉದ್ದ ಇದೆ ಗೊತ್ತಾ?

ನ್ಯೂಸ್ ಆ್ಯರೋ : ಕೂದಲಿನ ಮೇಲೆ ಸಾಮಾನ್ಯವಾಗಿ ಎಲ್ಲ ಹೆಣ್ಣು ಮಕ್ಕಳಿಗೆ ಪ್ರೀತಿ ಇದ್ದೇ ಇರುತ್ತದೆ. ಆದರೆ ಉದ್ದ ಕೂದಲನ್ನು ಸಂಭಾಳಿಸೋದು ಕಷ್ಟ ಎಂದು ಕೊಂಡು ಹೆಚ್ಚಿನವರು ಕೂದಲಿಗೆ ಕತ್ತರಿ ಹಾಕುತ್ತಾರೆ.

ಆದರೆ ಇಲ್ಲೊಬ್ಬರು ತಮ್ಮ ಕೂದಲು ಉದ್ದ ಬೆಳೆಯಲು ಬಿಟ್ಟು ಈಗ ವಿಶ್ವ ದಾಖಲೆ ಬರೆದಿದ್ದಾರೆ.

46 ವರ್ಷದ ಉತ್ತರ ಪ್ರದೇಶದ ಸ್ಮಿತಾ ಶ್ರೀವಾಸ್ತವ್ ಉದ್ದನೆಯ ಕೂದಲಿಗಾಗಿ ಗಿನ್ನೆಸ್ ವಿಶ್ವ ದಾಖಲೆ ಪ್ರಶಸ್ತಿಯನ್ನು ಪಡೆದಿದ್ದಾರೆ.

ಸ್ಮಿತಾ ಅವರು 7 ಅಡಿ ಮತ್ತು 9 ಇಂಚು ಉದ್ದದ ಕೂದಲು ಬೆಳೆಸಿಕೊಂಡಿದ್ದಾರೆ. ಸಣ್ಣ ವಯಸ್ಸಿನಲ್ಲೇ ಅವರಿಗೆ ತಮ್ಮ ಕೂದಲಿನ ಮೇಲೆ ಪ್ರೀತಿ ಉಂಟಾಗಿತ್ತು. ಹೀಗಾಗಿ ಕೂದಲನ್ನು ಕತ್ತರಿಸದೆ ಹಾಗೆ ಬಿಟ್ಟಿದ್ದರು. 1980ರ ದಶಕದ ಉದ್ದ ಮತ್ತು ಸುಂದರವಾದ ಕೂದಲನ್ನು ಹೊಂದಿದ್ದ ಹಿಂದಿ ನಟಿಯರ ಶೈಲಿಯನ್ನು ಅನುಕರಿಸಲು ಪ್ರಾರಂಭಿಸಿದ ಸ್ಮಿತಾ ಅವರ ವಯಸ್ಸು ಆಗ ಕೇವಲ 14.

ಕೂದಲು ಬಿಟ್ಟರೆ ಆಯಿತೇ? ಅಷ್ಟು ಉದ್ದ ಕೂದಲನ್ನು ನೋಡಿಕೊಳ್ಳುವುದು ಸುಲಭದ ಮಾತಲ್ಲ. ಪ್ರತಿ ವಾರ ಕೂದಲನ್ನು ತೊಳೆಯಲು, ಒಣಗಿಸಲು, ತೊಡೆದುಹಾಕಲು ಮತ್ತು ಸ್ಟೈಲಿಂಗ್ ಮಾಡಲು ಸುಮಾರು 3 ಗಂಟೆ ಬೇಕಾಗುತ್ತದೆ. ಇದರಲ್ಲಿ ಕೇವಲ ಕೂದಲು ತೊಳೆಯಲು 45 ನಿಮಿಷ ತೆಗೆದುಕೊಳ್ಳುತ್ತದೆ ಎನ್ನುತ್ತಾರೆ ಅವರು.

ಇಷ್ಟೆಲ್ಲ ಕಷ್ಟವಾಗಿದ್ದರೂ ನಾನು ನನ್ನ ಕೂದಲನ್ನು ಹೆಚ್ಚು ಪ್ರೀತಿಯಿಂದ ಆರೈಕೆ ಮಾಡಿದ್ದೇನೆ. ಇದೀಗ ಅವರ ಪರಿಶ್ರಮಕ್ಕೆ ಪ್ರತಿಫಲ ಎನ್ನುವಂತೆ ಅವರು ತಮ್ಮ ಸೊಂಪಾದ ಕೂದಲಿನಿಂದ ಗಿನ್ನೆಸ್‌ ವಿಶ್ವ ದಾಖಲೆ ಬರೆದಿದ್ದಾರೆ.

Related post

11 ವರ್ಷಗಳ ದಾಂಪತ್ಯದಲ್ಲಿ ಬಿರುಕು; ಡಿವೋರ್ಸ್‌ ವಿಚಾರಕ್ಕೆ ಟ್ರೋಲ್‌ ಮಾಡಿದವರಿಗೆ ಖ್ಯಾತ ಸಂಗೀತ ನಿರ್ದೇಶಕ ಹೇಳಿದಿಷ್ಟು…!

11 ವರ್ಷಗಳ ದಾಂಪತ್ಯದಲ್ಲಿ ಬಿರುಕು; ಡಿವೋರ್ಸ್‌ ವಿಚಾರಕ್ಕೆ ಟ್ರೋಲ್‌ ಮಾಡಿದವರಿಗೆ ಖ್ಯಾತ…

ನ್ಯೂಸ್ ಆರೋ: ತಮಿಳಿನ ಖ್ಯಾತ ಮ್ಯೂಸಿಕ್ ಡೈರೆಕ್ಟರ್ ಜಿ.ವಿ ಪ್ರಕಾಶ್ ಕುಮಾರ್ ಈಗ ಸುದ್ದಿಯಲ್ಲಿದ್ದು,11 ವರ್ಷಗಳ ದಾಂಪತ್ಯಕ್ಕೆ ಅಂತ್ಯ ಹಾಡಿದ ಬೆನ್ನಲ್ಲೇ ಅವರ ವೈಯುಕ್ತಿಕ ವಿಚಾರಗಳನ್ನು ಟ್ರೋಲ್ ಮಾಡಲಾಗುತ್ತಿದೆ.…
ದೇವರ ನಾಡಿನಲ್ಲಿ ಮತ್ತೊಮ್ಮೆ ವೈರಸ್ ಆತಂಕ; ಕೊರೊನಾ, ನಿಫಾ ಬಳಿಕ ಆತಂಕ ಹೆಚ್ಚಿಸಿದ ವೆಸ್ಟ್‌ನೈಲ್‌

ದೇವರ ನಾಡಿನಲ್ಲಿ ಮತ್ತೊಮ್ಮೆ ವೈರಸ್ ಆತಂಕ; ಕೊರೊನಾ, ನಿಫಾ ಬಳಿಕ ಆತಂಕ…

ನ್ಯೂಸ್ ಆರೋ: ಕೊರೋನಾ ವೈರಸ್ ನ ಆತಂಕ ಮುಗಿಯುತ್ತಿದ್ದಂತೆ ಇದೀಗ ಮತ್ತೆ ಹೊಸದೊಂದು ವೈರಸ್ ಪತ್ತೆಯಾಗಿದೆ. ದಿನಕಳೆದಂತೆ ನಾನಾರೀತಿಯ ವೈರಸ್‌ಗಳು ಸೃಷ್ಠಿಯಾಗುತ್ತಿದ್ದು ಆತಂಕ ಹೆಚ್ಚಾಗುತ್ತಿದೆ. ಕೆಲವು ದಿನಗಳ ಹಿಂದಷ್ಟೇ ನೆರೆಯ…
ಮನೆಕೆಲಸದಾಕೆಯಿಂದ ನಟಿ ಛಾಯಾ ಸಿಂಗ್ ತಾಯಿ ಮನೆಯಲ್ಲಿ ಚಿನ್ನಾಭರಣ ಕಳ್ಳತನ; 66 ಗ್ರಾಂ ಚಿನ್ನ, 150 ಗ್ರಾಂ ಬೆಳ್ಳಿ ವಶ

ಮನೆಕೆಲಸದಾಕೆಯಿಂದ ನಟಿ ಛಾಯಾ ಸಿಂಗ್ ತಾಯಿ ಮನೆಯಲ್ಲಿ ಚಿನ್ನಾಭರಣ ಕಳ್ಳತನ; 66 ಗ್ರಾಂ…

ನ್ಯೂಸ್ ಆರೋ: ಕನ್ನಡ ಹಾಗೂ ಪರಭಾಷೆಯ ಸಿನಿಮಾಗಳಲ್ಲೂ ಮಿಂಚಿರುವ ನಟಿ ಛಾಯಾ ಸಿಂಗ್ ಅವರ ತಾಯಿ ಮನೆಯಲ್ಲಿ ಕಳ್ಳತನ ನಡೆದಿದೆ. ಚಿನ್ನಾಭರಣ ಕಳುವಾಗಿರುವ ಬಗ್ಗೆ ಛಾಯಾ ಸಿಂಗ್ ತಾಯಿ…

Leave a Reply

Your email address will not be published. Required fields are marked *