ಚಳಿಗಾಲದಲ್ಲಿ ತ್ವಚೆಯ ಕಾಂತಿಗೆ ಈ ಮನೆ ಮದ್ದುಗಳನ್ನು ಬಳಸಿ – ಹೆಂಗಳೆಯರಿಗೆ ಉಪಯುಕ್ತ ಮಾಹಿತಿ ಇಲ್ಲಿದೆ‌..

ಚಳಿಗಾಲದಲ್ಲಿ ತ್ವಚೆಯ ಕಾಂತಿಗೆ ಈ ಮನೆ ಮದ್ದುಗಳನ್ನು ಬಳಸಿ – ಹೆಂಗಳೆಯರಿಗೆ ಉಪಯುಕ್ತ ಮಾಹಿತಿ ಇಲ್ಲಿದೆ‌..

ನ್ಯೂಸ್ ಆ್ಯರೋ : ಸಾಮಾನ್ಯವಾಗಿ ಎಲ್ಲರೂ ಕೂಡಾ ತಾವು ಅಂದವಾಗಿ ಕಾಣಿಸಬೇಕು ಎಂದು ಬಯಸುತ್ತಾರೆ. ಅದರಲ್ಲೂ ಹುಡುಗಿಯರಂತೂ ತಮ್ಮ ಮುಖದ ಕುರಿತಾಗಿ ಹೆಚ್ಚಿನ ಕಾಳಜಿಯನ್ನು ಹೊಂದಿರುತ್ತಾರೆ. ಆದರೆ ಚಳಿಗಾಲದಲ್ಲಿ ತಮ್ಮ ಅಂದವನ್ನು ಕಾಪಾಡಿಕೊಳ್ಳುವುದು ಎಲ್ಲರಿಗೂ ಒಂದು ದೊಡ್ಡ ಸವಾಲೇ ಸರಿ.

ಚಳಿಗಾಲದಲ್ಲಿ ಮನೆಯಲ್ಲಿಯೇ ಸಿಗುವ ವಸ್ತುಗಳಿಂದ ಮುಖದ ಅಂದವನ್ನು ಕಾಪಾಡಿಕೊಳ್ಳುವುದು ಹೇಗೆ ಇಲ್ಲಿದೆ ಕೆಲವು ಮಾಹಿತಿ

-ಹಾಲಿನ ಕೆನೆ ಬಳಸಿ

ಚಳಿಗಾಲದಲ್ಲಿ ಚರ್ಮ, ತೇವ ಕಳೆದುಕೊಂಡು ಚರ್ಮದಲ್ಲಿ ಒಡಕು ಕಂಡುಬರುತ್ತದೆ, ಹೀಗಾಗಿ ಒಣ ಚರ್ಮವಿರುವವರು ಪ್ರತಿನಿತ್ಯ ಹಾಲಿನ ಕೆನೆಯನ್ನು ಮುಖಕ್ಕೆ ಹಚ್ಚುವುದರಿಂದ ಮುಖದ ಹೊಳಪನ್ನು ಉಳಿಸಿಕೊಳ್ಳಬಹುದಾಗಿದೆ.

  • ತೆಂಗಿನ ಎಣ್ಣೆ ಬಳಸಿ
    ಪ್ರತಿ ನಿತ್ಯ ರಾತ್ರಿ ಮಲಗುವಾಗ ಚೆನ್ನಾಗಿ ಮುಖವನ್ನು ತೊಳೆದು ನೈಸರ್ಗಿಕವಾದ ತೆಂಗಿನ ಎಣ್ಣೆಯಿಂದ ಮುಖಕ್ಕೆ ಮಸಾಜ್ ಮಾಡುವುದರಿಂದ ಚಳಿಗಾಲದಲ್ಲಿ ಮುಖ ಒಡೆಯುವುದನ್ನು ತಡೆಯಬಹುದಾಗಿದೆ ಮತ್ತು ಮುಖದ ಕಾಂತಿಯನ್ನೂ ಕೂಡಾ ಹೆಚ್ಚಿಸುತ್ತದೆ. ಇದು ಅಂಗಡಿಗಳಲ್ಲಿ ದೊರಕುವ ಬಾಡಿ ಲೋಷನ್ ನ ರೀತಿ ಕಾರ್ಯ ನಿರ್ವಹಿಸುತ್ತದೆ.

ಸಾಕಷ್ಟು ನೀರು ಸೇವನೆ

ನೀರಿನ ಸೇವನೆ ದೇಹದ ಪ್ರತಿಯೊಂದು ಭಾಗದ ಆರೋಗ್ಯಕ್ಕೂ ಪೂರಕವಾಗಿದ್ದು, ಮುಖದ ಕಾಂತಿಗೂ ಇದು ಅತೀ ಮುಖ್ಯವಾದದ್ದು. ಚಳಿಗಾಲದಲ್ಲಿ ದಿನಕ್ಕೆ ಎರಡರಿಂದ ಮೂರು ಲೀಟರ್ ನೀರು ಕುಡಿಯುವುದರಿಂದ ಮುಖದ ಚರ್ಮ ಒಣಗದಂತೆ ನೋಡಿಕೊಳ್ಳಬಹುದಾಗಿದೆ.

ಆಹಾರ ಕ್ರಮ

ಚಳಿಗಾಲದಲ್ಲಿ ಆದಷ್ಟು ಸೊಪ್ಪು,ಹಸಿರು ತರಕಾರಿಗಳು ಮತ್ತು ಮೀನನ್ನು ಸೇವಿಸುವುದು ಉತ್ತಮ. ಚಳಿಗಾಲದಲ್ಲಿ ನೈಸರ್ಗಿಕವಾಗಿ ದೊರಕುವ ಹಣ್ಣುಗಳ ಸೇವನೆಯೂ ಮೂಖದ ಕಾಂತಿ ಕಳೆಗುಂದದಂತೆ ನೋಡಿಕೊಳ್ಳುತ್ತದೆ.

Related post

ಸಂಜೆಯ ಸ್ನ್ಯಾಕ್ಸ್‌ಗೆ ಮಾಡಿ ರುಚಿರುಚಿಯಾದ ಗೋಧಿ ಉಸ್ಲಿ; ಆರೋಗ್ಯಕ್ಕೂ ಒಳ್ಳೆಯದು, ರುಚಿನೂ ಸೂಪರ್

ಸಂಜೆಯ ಸ್ನ್ಯಾಕ್ಸ್‌ಗೆ ಮಾಡಿ ರುಚಿರುಚಿಯಾದ ಗೋಧಿ ಉಸ್ಲಿ; ಆರೋಗ್ಯಕ್ಕೂ ಒಳ್ಳೆಯದು, ರುಚಿನೂ…

ನ್ಯೂಸ್ ಆರೋ: ಆರೋಗ್ಯಕ್ಕೆ ಹಿತ ಎನಿಸುವ ಹಾಗೂ ರುಚಿಕಟ್ಟಾದ ರೆಸಿಪಿಯೊಂದನ್ನು ನಾವಿಂದು ಹೇಳಿಕೊಡುತ್ತೇವೆ. ಈ ಗೋಧಿ ಉಸ್ಲಿ ರೆಸಿಪಿಯನ್ನು ನೀವು ಬೇಕೆಂದರೆ ಸ್ನ್ಯಾಕ್ಸ್ ಆಗಿಯೂ ಬೆಳಗ್ಗಿನ ಉಪಾಹಾರವಾಗಿಯೂ ಮಾಡಿ…
ನವೋದಯ ವಿದ್ಯಾಲಯ ಸಮಿತಿ ಇಂದ ಶಿಕ್ಷಕರ ನೇಮಕ; ನೇರ ಸಂದರ್ಶನದ ಮೂಲಕ ಆಯ್ಕೆ

ನವೋದಯ ವಿದ್ಯಾಲಯ ಸಮಿತಿ ಇಂದ ಶಿಕ್ಷಕರ ನೇಮಕ; ನೇರ ಸಂದರ್ಶನದ ಮೂಲಕ…

ನ್ಯೂಸ್ ಆರೋ: ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆಯು ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ನಡೆಸುತ್ತಿದೆ. ಒಟ್ಟು 2 ಪ್ರಾಜೆಕ್ಟ್​ ಅಸೋಸಿಯೇಟ್-I ಹುದ್ದೆ ಖಾಲಿ ಇದ್ದು, ಅರ್ಹ…
ತೆಲಂಗಾಣ ಚುನಾವಣೆ; ಸರತಿ ಸಾಲಿನಲ್ಲಿ ನಿಂತು ವೋಟ್ ಮಾಡಿದ ಟಾಲಿವುಡ್ ತಾರೆಯರು…!

ತೆಲಂಗಾಣ ಚುನಾವಣೆ; ಸರತಿ ಸಾಲಿನಲ್ಲಿ ನಿಂತು ವೋಟ್ ಮಾಡಿದ ಟಾಲಿವುಡ್ ತಾರೆಯರು…!

ನ್ಯೂಸ್ ಆ್ಯರೋ : ಇಂದು  4ನೇ ಹಂತದ ಲೋಕಸಭಾ ಚುನಾವಣೆಯ ಮತದಾನ ನಡೆಯುತ್ತಿದ್ದು, ಆಂಧ್ರಪ್ರದೇಶ ಮತ್ತು ತೆಲಂಗಾಣ ಸೇರಿ ಹಲವೆಡೆ ಮತದಾನ ಪ್ರಕ್ರಿಯೆ ನಡೆಯುತ್ತಿದೆ. ಇದೀಗ ಸಾಮಾನ್ಯರಂತೆಯೇ ಸರತಿ…

Leave a Reply

Your email address will not be published. Required fields are marked *