ಚಿತ್ರೀಕರಣ ವೇಳೆ ಲೈಟ್ ಮ್ಯಾನ್ ಸಾವು; ಖ್ಯಾತ ನಿರ್ದೇಶಕನ ವಿರುದ್ಧ ಕೇಸ್ ದಾಖಲು

20240906 084344
Spread the love

ನ್ಯೂಸ್ ಆ್ಯರೋ : ‘ಮನದ ಕಡಲು’ ಸಿನಿಮಾದ ಚಿತ್ರೀಕರಣ ವೇಳೆ 30 ಅಡಿ ಮೇಲಿಂದ ಬಿದ್ದು ಲೈಟ್ ಮ್ಯಾನ್ ಸಾವನ್ನಪ್ಪಿದ್ದಾನೆ. ಚಿತ್ರೀಕರಣ ವೇಳೆ ಸೂಕ್ತ ಕ್ರಮಕೈಗೊಳ್ಳದೇ ಇರುವುದರಿಂದ ಚಿತ್ರದ ನಿರ್ದೇಶಕ ಯೋಗರಾಜ್ ಭಟ್ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.

ಬೆಂಗಳೂರು ಉತ್ತರ ತಾಲೂಕಿನ ಅಡಕಮಾರನಹಳ್ಳಿಯ ವಿ.ಆರ್.ಎಲ್ ಗೋಡಾನ್ ನಲ್ಲಿ ಕಳೆದ 15 ದಿನಗಳಿಂದ ಸಿನಿಮಾದ ಚಿತ್ರೀಕರಣ ನಡೆಯುತ್ತಿತ್ತು.
ಗುರುವಾರ ಸಂಜೆ ಶೂಟಿಂಗ್ ಮುಗಿದ ಮೇಲೆ ಲೈಟ್ ಮ್ಯಾನ್ ಮೋಹನ್ ಕುಮಾರ್ 30 ಅಡಿ ಎತ್ತರದ ಅಲ್ಯುಮಿನಿಯಂ ರೊಸ್ಟ್ರಮ್ ಮೇಲೆ ಹತ್ತಿ ಲೈಟ್ ಬಿಚ್ಚುತ್ತಿದ್ದಾಗ ಆಯಾತಪ್ಪಿ ಕೆಳಕ್ಕೆ ಬಿದ್ದಿದ್ದಾರೆ.

ಬಿದ್ದ ರಭಸಕ್ಕೆ ತಲೆಯಿಂದ ರಕ್ತಸ್ರಾವವಾಗುತ್ತಿತ್ತು. ಗಂಭೀರವಾಗಿ ಗಾಯಗೊಂಡಿದ್ದ ಮೋಹನ್ ರನ್ನು ಗೊರಗುಂಟೆಪಾಳ್ಯದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಸೂಕ್ತ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳದೇ ನಿರ್ಲಕ್ಷ್ಯ ವಹಿಸಿದ ಹಿನ್ನೆಲೆಯಲ್ಲಿ ಮನದ ಕಡಲು ಚಿತ್ರದ ನಿರ್ದೇಶಕ ಯೋಗರಾಜ್ ಭಟ್, ನಿರ್ಮಾಪಕ ಅಡಕಮಾರನಹಳ್ಳಿಯ ಈ.ಕೆ. ಕೃಷ್ಣಪ್ಪ, ಮಾನೇಜರ್ ಸುರೇಶ್, ಅಸಿಸ್ಟೆಂಟ್ ಮ್ಯಾನೇಜರ್ ಮನೋಹರ್ ವಿರುದ್ಧ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Comment

Leave a Reply

Your email address will not be published. Required fields are marked *

error: Content is protected !!