ಹೆಚ್.ಡಿ ಕುಮಾರಸ್ವಾಮಿ ವಿರುದ್ಧ ಗಣಿ ಗುತ್ತಿಗೆ ಹಗರಣ ಆರೋಪ‌ – ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರಿಗೆ ಅನುಮತಿ ಕೋರಿದ ಲೋಕಾಯುಕ್ತ

20240820 223520
Spread the love

ನ್ಯೂಸ್ ಆ್ಯರೋ : ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯಗೆ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ ಬೆನ್ನಲ್ಲೇ ಇದೀಗ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡುವಂತೆ ರಾಜ್ಯಪಾಲರಿಗೆ ಲೋಕಾಯುಕ್ತ ಎಡಿಜಿಪಿ ಪತ್ರ ಬರೆದಿದ್ದಾರೆ ಎನ್ನಲಾಗಿದೆ.

ಗಣಿ ಪ್ರಕರಣ ಸಂಬಂಧ ತನಿಖೆಗೆ ಅನುಮತಿ ಕೋರಿ ಲೋಕಾಯುಕ್ತ ಎಸ್ ಐಟಿ ರಾಜ್ಯಪಾಲರಿಗೆ ಪತ್ರ ಬರೆದಿದ್ದಾರೆ. ಸಾಯಿ ಮಿನರಲ್ಸ್ ಪ್ರಕರಣದಲ್ಲಿ ಅನುಮತಿ ಕೋರಿ ಪತ್ರ ಬರೆಯಲಾಗಿದೆ. ನಿಯಮ ಉಲ್ಲಂಘನೆ ಮಾಡಿ ಸಾಯಿ ಮಿನರಲ್ಸ್ ಗಣಿ ಗುತ್ತಿಗೆ ಮಂಜೂರು ಮಾಡಲಾಗಿದೆ ಎಂದು ಆರೋಪಿಸಿ ಚಾರ್ಜ್ ಶೀಟ್ ಸಲ್ಲಿಸಲು ಅನುಮತಿ ಕೋರಿ ರಾಜ್ಯಪಾಲರಿಗೆ ಎಡಿಜಿಪಿ ಪತ್ರ ಬರೆದಿದ್ದಾರೆ ಎಂದು ಹೇಳಲಾಗುತ್ತಿದೆ.

ಎಸ್ ಐಟಿ ಅಧಿಕಾರಿಗಳು ನ್ಯಾ. ಸಂತೋಷ್ ಹೆಗಡೆ ವರದಿ ಆಧರಿಸಿ ತನಿಖೆ ಮಾಡುತ್ತಿದ್ದಾರೆ. 2007 ರಲ್ಲಿ ಸಾಯಿ ವೆಂಕಟೇಶ್ವರ ಮಿನರಲ್ಸ್ ಗೆ ಗಣಿ ಗುತ್ತಿಗೆ ಮಂಜೂರು ಮಾಡಲಾಗಿತ್ತು.

ಹೆಚ್.ಡಿ.‌ ಕುಮಾರಸ್ವಾಮಿ ಅವರು ಸಿಎಂ ಅಗಿದ್ದಾಗ ವೇಳೆ ಬಳ್ಳಾರಿಯಲ್ಲಿ ಸಾಯಿ ಮಿನರಲ್ಸ್ 500 ಎಕರೆ ಭೂಮಿ ಮಂಜೂರು ಮಾಡಲಾಗಿತ್ತು. 2011 ರಲ್ಲೇ ಲೋಕಾಯುಕ್ತ ಸಂತೋಷ್ ಹೆಗಡೆ ವರದಿಯಲ್ಲಿ ಉಲ್ಲೇಖಿಸಲಾಗಿತ್ತು. ವರದಿಯಲ್ಲಿ ಗಣಿ ಗುತ್ತಿಗೆಯಲ್ಲಿ ಅಕ್ರಮ ಆಗಿದೆ ಅಂತ ರಿಪೋರ್ಟ್ ಬಂದಿತ್ತು ಎನ್ನಲಾಗಿತ್ತು. ಹೀಗಾಗಿ ತನಿಖೆಗೆ ಅನುಮತಿ ಕೋರಿ ರಾಜ್ಯಪಾಲರಿಗೆ ಲೋಕಾಯುಕ್ತದಿಂದ ಅನುಮತಿ ಕೋರಲಾಗಿದೆ.

Leave a Comment

Leave a Reply

Your email address will not be published. Required fields are marked *

error: Content is protected !!