ನಾಲ್ವರು ಯುವಕರಿಂದ ಪ್ರೀತಿಯ ಅಪಪ್ರಚಾರ: ಮನನೊಂದು ಬಾಲಕಿ ನೇಣಿಗೆ ಶರಣು

20240901 191727
Spread the love

ನ್ಯೂಸ್ ಆ್ಯರೋ : ಇತ್ತೀಚಿನ ದಿನಗಳಲ್ಲಿ ಹದಿಹರೆಯದ ವಿದ್ಯಾರ್ಥಿಗಳು ಪ್ರೀತಿ ಪ್ರೇಮದ ಬಲೆಗೆ ಸಿಲುಕಿ ಪ್ರಾಣ ಕಳೆದುಕೊಳ್ಳುವ ಸುದ್ದಿ ರಾಜ್ಯದೆಲ್ಲೆಡೆ ಕೇಳಿ ಬರುತ್ತಿದೆ.
ಈ ವಿಷಯಕ್ಕೆ ಸಂಬಂಧಿಸಿದಂತೆ ಮಂಡ್ಯದಲ್ಲಿ 14 ವರ್ಷದ ಇಂಪನಾ ಎಂಬ ಬಾಲಕಿ ಯುವಕರ ಹುಡುಗಾಟಕ್ಕೆ ತನ್ನ ಪ್ರಾಣ ಕಳೆದುಕೊಂಡ ಘಟನೆ ನಡೆದಿದೆ.

ಹನಕೆರೆ ಗ್ರಾಮದ ಗಗನ್ ಮತ್ತು ಸ್ನೇಹಿತರು ಸೇರಿ ಇಂಪನಾ- ಮಹೇಂದ್ರ ಎಂಬಾತನನ್ನು ಪ್ರೀತಿ ಮಾಡುತ್ತಿದ್ದಾಳೆ ಎಂದು ಊರಲ್ಲಿ ಗಾಳಿ ಸುದ್ದಿ ಹಬ್ಬಿಸಿದ್ದರು. ಅಲ್ಲದೆ ಆಕೆ ಮಾತಾಡುವುದನ್ನು ರೆಕಾರ್ಡ್ ಮಾಡಿಕೊಂಡು ವೈರಲ್ ಮಾಡಿದ್ದರು. ಇದರಿಂದ ಬೇಸತ್ತ ಇಂಪನಾ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ನೇಣಿಗೆ ಶರಣಾಗಿದ್ದಾಳೆ.

ಮಗಳನ್ನು ಕಳೆದುಕೊಂಡ ಹೆತ್ತವರ ಆಕ್ರಂದನ ಮುಗಿಲುಮುಟ್ಟಿದೆ. ಗಗನ್, ಸಂಜಯ್ ,ಮಹೇಂದ್ರ ಹಾಗೂ ಲೋಹಿತ್ ಎಂಬ ಯುವಕರಿಂದ ಕಿರುಕುಳದ ಆರೋಪ ಕೇಳಿ ಬಂದಿದೆ. ಪೋಷಕರು ಈ ನಾಲ್ವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದು, ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Comment

Leave a Reply

Your email address will not be published. Required fields are marked *