ಲಕ್ನೋ ಕಟ್ಟಡ ಕುಸಿತ ; 8 ಮಂದಿ ದುರ್ಮರಣ
ನ್ಯೂಸ್ ಆ್ಯರೋ : ಮೂರು ಅಂತಸ್ತಿನ ಕಟ್ಟಡವೊಂದು ಕುಸಿದು 8ಮಂದಿ ಸಾವನ್ನಪ್ಪಿದ್ದು, 28 ಜನರು ಗಾಯಗೊಂಡಿದ್ದಾರೆ. ಉತ್ತರಪ್ರದೇಶದ ಲಖನೌನ ಟ್ರಾನ್ಸ್ ಪೋರ್ಟ್ ನಗರದಲ್ಲಿ ಶನಿವಾರ ಸಂಜೆ ಈ ದುರ್ಘಟನೆ ನಡೆದಿದೆ.
ಸುಮಾರು ಮೂರು ವರ್ಷಗಳ ಹಿಂದಿನ ಕಟ್ಟಡವಾಗಿದೆ. ಘಟನೆಯ ಸಮಯದಲ್ಲಿ ಕೆಲವು ನಿರ್ಮಾಣ ಕಾರ್ಯಗಳು ನಡೆಯುತ್ತಿದ್ದವು.x ಗೋದಾಮುಗಳು ಮತ್ತು ಮೋಟಾರ್ ವರ್ಕ್‌ಶಾಪ್‌ಗಳನ್ನು ಹೊಂದಿದ್ದ ಮೂರು ಅಂತಸ್ತಿನ ಕಟ್ಟಡವು ಕುಸಿದು ಬಿದ್ದಿತ್ತು.
ಈ ಘಟನೆಯ ಸಂದರ್ಭದಲ್ಲಿ ಕಾರ್ಮಿಕರು ನೆಲಮಹಡಿಯಲ್ಲಿ ಕೆಲಸ ಮಾಡುತ್ತಿದ್ದರು. ಸಂಜೆ ಸುಮಾರು 4:45 ರ ಹೊತ್ತಿಗೆ ಈ ಕಟ್ಟಡ ನೆಲಕಪ್ಪಳಿದಿದೆ. 28 ಜನ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಜಿಲ್ಲೆಯ ಲೋಕ ಬಂಧು ಆಸ್ಪತ್ರೆ ಸೇರಿದಂತೆ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ದಾಖಲಿಸಲಾಗಿದೆ.
ಘಟನಾ ಸ್ಥಳದಲ್ಲಿ ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ಪಡೆ, ರಾಜ್ಯ ವಿಪತ್ತು ಪ್ರತಿಕ್ರಿಯೆ ಪಡೆ , ಅಗ್ನಿಶಾಮಕ ಇಲಾಖೆ, ಪೊಲೀಸ್ ಮತ್ತು ಕಂದಾಯ ಇಲಾಖೆಯ ತಂಡಗಳು ಕಾರ್ಯಾಚರಣೆ ನಡೆಸುತ್ತಿದೆ ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ಲಕ್ನೋದಲ್ಲಿ ಕಟ್ಟಡ ಕುಸಿತದಿಂದ ಉಂಟಾದ ಅಪಘಾತದ ಸುದ್ದಿ ಅತ್ಯಂತ ನೋವಿನಿಂದ ಕೂಡಿದೆ. ನಾನು ಲಕ್ನೋದ ಜಿಲ್ಲಾ ಮ್ಯಾಜಿಸ್ಟ್ರೇಟ್ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿದ್ದೇನೆ ಮತ್ತು ಸ್ಥಳದಲ್ಲಿನ ಪರಿಸ್ಥಿತಿಯ ಬಗ್ಗೆ ಮಾಹಿತಿ ಪಡೆದಿದ್ದೇನೆ. ಸ್ಥಳೀಯ ಆಡಳಿತವು ರಕ್ಷಣಾ ಕಾರ್ಯಾಚರಣೆಗಳನ್ನು ನಡೆಸುತ್ತಿದೆ ” ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಕೂಡ ಎಕ್ಸ್ ನಲ್ಲಿ ಪೋಸ್ಟ್ ಮೂಲಕ ಘಟನೆಯ ಬಗ್ಗೆ ದುಃಖ ವ್ಯಕ್ತಪಡಿಸಿದ್ದಾರೆ.
Leave a Comment