ಭಾರತದ ರತ್ನ ರತನ್ ಟಾಟಾ ನಿಧನ : ಮಹಾರಾಷ್ಟ್ರದಲ್ಲಿ ಶೋಕಾಚರಣೆ ಘೋಷಣೆ
ನ್ಯೂಸ್ ಆ್ಯರೋ: ಭಾರತದ ರತ್ನ ಎಂದು ಕರೆಯಲ್ಪಡುವ ರತನ್ ಟಾಟಾ ಅವರು ತಮ್ಮ 86 ನೇ ವಯಸ್ಸಿನಲ್ಲಿ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ರತನ್ ಟಾಟಾ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲು ಮಹಾರಾಷ್ಟ್ರ ಸರ್ಕಾರ ಗುರುವಾರ ರಾಜ್ಯದಲ್ಲಿ ಶೋಕಾಚರಣೆಯನ್ನು ಘೋಷಿಸಿದೆ ಎಂದು ಮುಖ್ಯಮಂತ್ರಿ ಕಚೇರಿ ತಿಳಿಸಿದೆ.
ಟಾಟಾ ಗ್ರೂಪ್ ಅನ್ನು ಜಾಗತಿಕವಾಗಿ ಹೆಸರಾಂತ ಸಂಘಟಿತ ಸಂಸ್ಥೆಯಾಗಿ ಪರಿವರ್ತಿಸಿದ ಕೀರ್ತಿಗೆ ಪಾತ್ರರಾದ ರತನ್ ಟಾಟಾ ಅವರು 86 ನೇ ವಯಸ್ಸಿನಲ್ಲಿ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಬುಧವಾರ ರಾತ್ರಿ ಅಲ್ಪಕಾಲದ ಅನಾರೋಗ್ಯದ ನಂತರ ನಿಧನರಾದರು.
ಅವರ ಪಾರ್ಥಿವ ಶರೀರವನ್ನು ಬ್ರೀಚ್ ಕ್ಯಾಂಡಿ ಆಸ್ಪತ್ರೆಯಿಂದ ಇಂದು ಬೆಳಗಿನ ಜಾವ 2 ಗಂಟೆಯ ನಂತರ ಪೊಲೀಸ್ ವಾಹನಗಳ ಬೆಂಗಾವಲಿನಲ್ಲಿ ಆಂಬುಲೆನ್‌್ಸನಲ್ಲಿ ಹೊರತರಲಾಯಿತು ಮತ್ತು ದಕ್ಷಿಣ ಮುಂಬೈನ ಕೊಲಾಬಾ ಪ್ರದೇಶದ ಅವರ ನಿವಾಸಕ್ಕೆ ಕೊಂಡೊಯ್ಯಲಾಯಿತು.
ಮುಖ್ಯಮಂತ್ರಿ ಏಕನಾಥ್ ಶಿಂಧೆ, ಅವರ ಉಪ ದೇವೇಂದ್ರ ಫಡ್ನವಿಸ್, ಮಹಾರಾಷ್ಟ್ರದ ಶಿಕ್ಷಣ ಸಚಿವ ದೀಪಕ್ ಕೇಸರ್ಕರ್ ಮತ್ತು ಕೈಗಾರಿಕೋದ್ಯಮಿ ಮುಖೇಶ್ ಅಂಬಾನಿ ಟಾಟಾ ಅವರ ಸಾವಿನ ಸುದ್ದಿ ಕೇಳಿ ಆಸ್ಪತ್ರೆಗೆ ಧಾವಿಸಿದವರಲ್ಲಿ ಸೇರಿದ್ದರು. ಶೋಕಾಚರಣೆಯ ಸಂಕೇತವಾಗಿ ಇಂದು ಮಹಾರಾಷ್ಟ್ರದ ಸರ್ಕಾರಿ ಕಚೇರಿಗಳ ಮೇಲೆ ರಾಷ್ಟ್ರೀಯ ತ್ರಿವರ್ಣ ಧ್ವಜವನ್ನು ಅರ್ಧಮಟ್ಟಕ್ಕೆ ಹಾರಿಸಲಾಗುವುದು ಎಂದು ಸಿಎಂ ಶಿಂಧೆ ಹೇಳಿಕೆಯನ್ನು ಉಲ್ಲೇಖಿಸಿದ್ದಾರೆ.
Leave a Comment