ಆರ್ಥಿಕ ಬಿಕ್ಕಟ್ಟಿನತ್ತ ದ್ವೀಪ ರಾಷ್ಟ್ರ: ಬೆಂಗಳೂರಿಗೆ ಆಗಮಿಸಿದ ಮಾಲ್ಡೀವ್ಸ್‌ ಅಧ್ಯಕ್ಷ

President travels to Bangalore
Spread the love

ನ್ಯೂಸ್ ಆ್ಯರೋ: ಸದ್ಯ ಭಾರತದಲ್ಲಿರುವ ಮಾಲ್ಡೀವ್ಸ್‌ ಅಧ್ಯಕ್ಷ ಡಾ. ಮೊಹಮ್ಮದ್ ಮುಯಿಝು ಮತ್ತು ಪ್ರಥಮ ಮಹಿಳೆ ಸಾಜಿದಾ ಮೊಹಮ್ಮದ್ ಅವರಿಂದು ಬೆಂಗಳೂರಿಗೆ ಆಗಮಿಸಿದ್ದಾರೆ. ನವದೆಹಲಿಯಿಂದ ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ಆಗಮಿಸಿದ್ದಾರೆ.

ಬೆಂಗಳೂರಿನ ವಿಮಾನ ನಿಲ್ದಾಣದಲ್ಲಿ ಅವರನ್ನ ಸಚಿವ ಡಾ.ಎಂ.ಸಿ ಸುಧಾಕರ್ ಆತ್ಮೀಯವಾಗಿ ಬರಮಾಡಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತರಾದ ಉಮಾ ಮಹದೇವನ್, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ್, ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಬಿ. ದಯಾನಂದ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಬಳಿಕ ಖಾಸಗಿ ಹೊಟೇಲಿನಲ್ಲಿ ವಿಶ್ರಾಂತಿಗೆ ತೆರಳಿದ ಮಾಲ್ಡೀವ್ಸ್ ಅಧ್ಯಕ್ಷರು, ರಾಜ್ಯಪಾಲರ ಆಹ್ವಾನ ಮೇರೆಗೆ ರಾಜಭವನ ಭೇಟಿ ನೀಡಲಿದ್ದಾರೆ.

ಇನ್ನು ನಾಲ್ಕು ದಿನಗಳ ರಾಜ್ಯ ಪ್ರವಾಸಕ್ಕಾಗಿ ಭಾನುವಾರ ದೆಹಲಿಗೆ ಹೋಗಿದ್ದ ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಜ್ಜು ಅವರು, ಭಾರತದ ಭದ್ರತೆಯನ್ನು ಹಾಳುಮಾಡುವ ಯಾವುದನ್ನೂ ತಮ್ಮ ದೇಶ ಎಂದಿಗೂ ಮಾಡುವುದಿಲ್ಲ ಎಂದು ಭರವಸೆ ನೀಡಿದ್ದರು.

Leave a Comment

Leave a Reply

Your email address will not be published. Required fields are marked *

error: Content is protected !!