Mangalore : ಸುರತ್ಕಲ್ NITK ಬಳಿ ಸತ್ತ ಕುರಿಗಳ ಎಸೆದು ಹೋದ ಅಪರಿಚಿತರು – ಪ್ರಕರಣ ದಾಖಲು, ಅಪರಿಚಿತರ ಪತ್ತೆಗೆ ಕಾರ್ಯಾಚರಣೆ : ಕಮೀಷನರ್

Spread the love

ನ್ಯೂಸ್ ಆ್ಯರೋ‌ : ಸುಮಾರು 15 ಸತ್ತ ಕುರಿಗಳನ್ನು ಸುರತ್ಕಲ್ NITK ಹಳೆ ಟೋಲ್ ಗೇಟ್ ಬಳಿ ಅಪರಿಚಿತರು ಎಸೆದು ಹೋಗಿದ್ದು, ಅಪರಿಚಿತರ ವಿರುದ್ಧ ಕಾವೂರು ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಭಾನುವಾರ ಬೆಳಗ್ಗೆ ಸ್ಥಳೀಯರು ಸುರತ್ಕಲ್ 2 ನೇ ವಾರ್ಡ್ ನ ಕಾರ್ಪೋರೇಟರ್ ಶ್ವೇತಾ ಪೂಜಾರಿ ಇವರಿಗೆ ಮಾಹಿತಿ ನೀಡಿದ ಮೇರೆಗೆ ಅವರು ಮಹಾನಗರಪಾಲಿಕೆಯ ಅಧಿಕಾರಿ ಹಾಗೂ ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ಹೋಗಿ ಸತ್ತ ಕುರಿಗಳ ಮೃತ ದೇಹಗಳನ್ನು ಸುರಕ್ಷಿತ ಸ್ಥಳದಲ್ಲಿ ಧಫನ ಮಾಡಿಸಿದ್ದಾರೆ.

ಉತ್ತರ ಕರ್ನಾಟಕ ಕಡೆಯಿಂದ ಕುರಿಸಾಗಾಟ ವಾಹನಗಳಲ್ಲಿ ಮಂಗಳೂರಿಗೆ ಕುರಿ ಮಾರಾಟ ಮಾಡುವ ವ್ಯಾಪಾರಿಗಳು ಸಾಗಾಟದ ವೇಳೆ ಮೃತ ಪಟ್ಟ ಕುರಿಗಳನ್ನು ವಾಪಾಸು ಹೋಗುವ ವೇಳೆಗೆ ರಸ್ತೆ ಪಕ್ಕದಲ್ಲಿ ಪೊದೆಗಳಲ್ಲಿ ಎಸೆದು ಹೋಗಿರುತ್ತಾರೆ ಎಂದು ಪ್ರಾಥಮಿಕ ವಿಚಾರಣೆಯಿಂದ ತಿಳಿದು ಬಂದಿದೆ.

ಅಪರಿಚಿತರ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದು, ಕಾವೂರು ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆರೋಪಿಗಳ ಪತ್ತೆಗೆ ಕಾರ್ಯಾಚರಣೆ ಆರಂಭಿಸಲಾಗಿದೆ ಎಂದು ಕಮೀಷನ್ ಅನುಪಮ್ ಅಗರ್ವಾಲ್ ಮಾಹಿತಿ ನೀಡಿದ್ದಾರೆ.

Leave a Comment

Leave a Reply

Your email address will not be published. Required fields are marked *