ಮಣಿಪಾಲದ MAHE ಯುನಿವರ್ಸಿಟಿಯ ವಿಶ್ರಾಂತ ಉಪಕುಲಪತಿ ಡಾ.ವಲಿಯತ್ತನ್ ನಿಧನ – ಪದ್ಮವಿಭೂಷಣ ಸೇರಿದಂತೆ ಜಗತ್ತಿನ ಹಲವು ಗರಿ ಪಡೆದಿದ್ದ ಸಾಧಕ ಇನ್ನಿಲ್ಲ

IMG 20240718 WA0034
Spread the love

ನ್ಯೂಸ್ ಆ್ಯರೋ : ಪದ್ಮ ವಿಭೂಷಣ ಪ್ರೊ. ಮಾರ್ತಾಂಡ ವರ್ಮ ಶಂಕರನ್ ವಲಿಯಥಾನ್ (ಎಂ ಎಸ್ ವಲಿಯಥಾನ್) ನಿಧನರಾಗಿದ್ದಾರೆ‌.

ಮಣಿಪಾಲದ MAHE ಯುನಿವರ್ಸಿಟಿಯ ವಿಶ್ರಾಂತ ಉಪಕುಲಪತಿ ಡಾ.ವಲಿಯತ್ತನ್ ಅವರು ತಮ್ಮ 90ನೇ ವಯಸ್ಸಿನಲ್ಲಿ ಮಣಿಪಾಲದಲ್ಲಿ ಬುಧವಾರ ರಾತ್ರಿ 9:14 ಕ್ಕೆ ನಿಧನರಾಗಿದ್ದಾರೆ.

ಖ್ಯಾತ ಹೃದಯ ಶಸ್ತ್ರಚಿಕಿತ್ಸಕ ಡಾ. ವಲಿಯಾಥನ್ ಅವರು ಹೃದಯ ಶಸ್ತ್ರಚಿಕಿತ್ಸೆ ಮತ್ತು ವೈದ್ಯಕೀಯ ತಂತ್ರಜ್ಞಾನಕ್ಕೆ ಗಮನಾರ್ಹ ಕೊಡುಗೆ ನೀಡಿದ್ದರು.

ತಿರುವನಂತಪುರದ ವೈದ್ಯಕೀಯ ಕಾಲೇಜಿನ ಹಳೆಯ ವಿದ್ಯಾರ್ಥಿಯಾಗಿರುವ ಅವರು ರಾಯಲ್ ಕಾಲೇಜ್ ಆಫ್ ಸರ್ಜನ್ಸ್ ಆಫ್ ಎಡಿನ್‌ಬರ್ಗ್, ಇಂಗ್ಲೆಂಡ್ ಮತ್ತು ಕೆನಡಾದಿಂದ ಫೆಲೋಶಿಪ್ ಪಡೆದಿದ್ದರು.

ತಿರುವನಂತಪುರದಲ್ಲಿ ಶ್ರೀ ಚಿತ್ರ ತಿರುನಾಳ್ ಸಂಸ್ಥೆಯನ್ನು ಸ್ಥಾಪಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಲ್ಲದೇ ಇಪ್ಪತ್ತು ವರ್ಷಗಳ ಕಾಲ ಹೃದಯ ಶಸ್ತ್ರಚಿಕಿತ್ಸೆಯ ಪ್ರಾಧ್ಯಾಪಕರಾಗಿ ಮತ್ತು ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದರು.

1993 ರಿಂದ ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ ) ಯ ಮೊದಲ ಉಪಕುಲಪತಿಯಾಗಿದ್ದು, ಪದ್ಮವಿಭೂಷಣ (2005), ಪದ್ಮಶ್ರೀ (2002), ಡಾ. ಬಿ. ಸಿ. ರಾಯ್ ರಾಷ್ಟ್ರೀಯ ಪ್ರಶಸ್ತಿ ಪಡೆದಿದ್ದರು.

ಇಂಗ್ಲೆಂಡ್‌ನ ರಾಯಲ್ ಕಾಲೇಜ್ ಆಫ್ ಸರ್ಜನ್ಸ್‌ನ ಹಂಟೇರಿಯನ್ ಪ್ರೊಫೆಸರ್‌ಶಿಪ್, ಫ್ರೆಂಚ್ ಸರ್ಕಾರದಿಂದ ಚೆವಲಿಯರ್ ಆಫ್ ದಿ ಆರ್ಡರ್ ಆಫ್ ಪಾಮ್ಸ್ ಅಕಾಡೆಮಿಕ್ಸ್, ಜಾನ್ಸ್ ಹಾಪ್ಕಿನ್ಸ್ ವಿಶ್ವವಿದ್ಯಾಲಯದಿಂದ ಅಂತರರಾಷ್ಟ್ರೀಯ ವೈದ್ಯಕೀಯ ಶಿಕ್ಷಣಕ್ಕಾಗಿ ಡಾ. ಸ್ಯಾಮ್ಯುಯೆಲ್ ಪಿ. ಆಸ್ಪರ್ ಪ್ರಶಸ್ತಿ, ಭಾರತೀಯ ವೈದ್ಯಕೀಯ ಸಂಘದಿಂದ ಜೀವಮಾನ ಸಾಧನೆ ಪ್ರಶಸ್ತಿ ಪಡೆದು ಮಾನ್ಯತೆ ಹೊಂದಿದ್ದವರಾಗಿದ್ದರು.

Leave a Comment

Leave a Reply

Your email address will not be published. Required fields are marked *

error: Content is protected !!