RBI ನ‌ ಮೂರು‌ ದಿನಗಳ ಸಭೆ ಇಂದು ಮುಕ್ತಾಯ, ರೆಪೊ‌ ದರ ಹೆಚ್ಚಿಸದಿರಲು‌ ನಿರ್ಧಾರ – ಸಾಲದ ಮೇಲಿನ ಬಡ್ಡಿದರದಿಂದ ಜನಸಾಮಾನ್ಯರಿಗೆ ಸಿಗುತ್ತಾ ಮುಕ್ತಿ?

RBI ನ‌ ಮೂರು‌ ದಿನಗಳ ಸಭೆ ಇಂದು ಮುಕ್ತಾಯ, ರೆಪೊ‌ ದರ ಹೆಚ್ಚಿಸದಿರಲು‌ ನಿರ್ಧಾರ – ಸಾಲದ ಮೇಲಿನ ಬಡ್ಡಿದರದಿಂದ ಜನಸಾಮಾನ್ಯರಿಗೆ ಸಿಗುತ್ತಾ ಮುಕ್ತಿ?

ನ್ಯೂಸ್ ಆ್ಯರೋ‌ : ಮೂರು ದಿನಗಳಿಂದ ನಡೆಯುತ್ತಿರುವ ಭಾರತೀಯ ರಿಸರ್ವ್ ಬ್ಯಾಂಕ್ ನ (ಆರ್‌ಬಿಐ) ಹಣಕಾಸು ನೀತಿ ಸಮಿತಿ ಸಭೆ ಇಂದು ಮುಕ್ತಾಯವಾಗಲಿದ್ದು, ಸಭೆಯ ತೀರ್ಮಾನದ ಬಗ್ಗೆ ಕುತೂಹಲ ಮೂಡಿದೆ. ಹಲವು ಪ್ರಮುಖ ವಿಷಯಗಳ ಕುರಿತು ತೀರ್ಮಾನ ಕೈಗೊಂಡಿರುವ ಸಾಧ್ಯತೆ ಇದ್ದು, ಇಂದು ಪ್ರಕಟಿಸಲಾಗುವುದು. ಆರು ಸದಸ್ಯರ ಹಣಕಾಸು ನೀತಿ ಸಮಿತಿ(ಎಂಪಿಸಿ)ಯ 43ನೇ ಸಭೆಯ ನೇತೃತ್ವವನ್ನು ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ವಹಿಸಿದ್ದಾರೆ.

ಜನ ಸಾಮಾನ್ಯರ ನಿರೀಕ್ಷೆ ಏನು?

ಆರ್‌ಬಿಐ ಈ ಬಾರಿ ರೆಪೊ ದರವನ್ನು ಯಥಾಸ್ಥಿತಿಯಲ್ಲಿ ಇರಿಸುವ ನಿರೀಕ್ಷೆಯಿದೆ ಎಂದು ಮೂಲಗಳು ಹೇಳಿವೆ. ಎಪ್ರಿಲ್‌ನಲ್ಲಿ ನಡೆದ ಎಂಪಿಸಿ ಸಭೆಯಲ್ಲಿ ರೆಪೊ ದರವನ್ನು ಶೇ.6.5ರಲ್ಲೇ ಇರಿಸಲಾಗಿತ್ತು. ಈ ಬಾರಿಯೂ ರೆಪೋ ದರದಲ್ಲಿ ಏರಿಕೆಯಾಗದಿದ್ದರೆ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಾಲದ ಬಡ್ಡಿ ದರದಿಂದ ಜನರಿಗೆ ಮುಕ್ತಿ ಸಿಗಲಿದೆ ಎಂದು ಆರ್ಥಿಕ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಆರ್‌ಬಿಐ ಮೇ 2022ರಿಂದ ರೆಪೋ ದರವನ್ನು ಹೆಚ್ಚಿಸುತ್ತಾ ಬಂದಿದೆ. ಮೇ 2022ರಿಂದ ಇಲ್ಲಿಯವರೆಗೆ ರೆಪೋ ದರವನ್ನು ಶೇ. 2.5ರಷ್ಟು ಹೆಚ್ಚಿಸಲಾಗಿದೆ. ಇದರ ನೇರ ಪರಿಣಾಮ ಬ್ಯಾಂಕ್ ಗ್ರಾಹಕರಿಗೆ ನೀಡುವ ಸಾಲದ ಮೇಲೆ ಪರಿಣಾಮ ಬೀರುತ್ತಿತ್ತು. ಪರಿಣಾಮ ಬ್ಯಾಂಕ್ ಗಳು ಎಲ್ಲಾ ಸಾಲಗಳ ಬಡ್ಡಿದರವನ್ನು ಹೆಚ್ಚಿಸಿವೆ.

ರೆಪೋ ದರ ಎಂದರೇನು?

ಆರ್‌ಬಿಐ ಬ್ಯಾಂಕ್‌ಗಳಿಗೆ ನೀಡುವ ಸಾಲದ ದರವನ್ನು ರೆಪೊ ದರ ಎಂದು ಕರೆಯಲಾಗುತ್ತದೆ. ರೆಪೊ ದರವನ್ನು ಹೆಚ್ಚಿಸುವುದರಿಂದ ಬ್ಯಾಂಕ್‌ಗಳು ಆರ್‌ಬಿಐನಿಂದ ದುಬಾರಿ ದರದಲ್ಲಿ ಸಾಲ ಪಡೆಯುತ್ತವೆ. ಇದು ಗೃಹ ಸಾಲ, ಕಾರು ಸಾಲ ಮತ್ತು ವೈಯಕ್ತಿಕ ಸಾಲ ಇತ್ಯಾದಿಗಳ ಬಡ್ಡಿ ದರವನ್ನು ಹೆಚ್ಚಿಸುತ್ತದೆ.

Related post

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ ಮದುವೆ

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ…

ನ್ಯೂಸ್ ಆರೋ: ಬರೋಬ್ಬರಿ 25 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ಮಂತ್ರ ಮಾಂಗಲ್ಯ ಮೂಲಕ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ತುಮಕೂರಲ್ಲಿ ನಡೆದಿದೆ. ಹೌದು ಜನಾಂದೋಲನದಲ್ಲಿ…
ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು! ಏನಿದು ವಿಷಯ?

ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು!…

ನ್ಯೂಸ್ ಆರೋ: ಎಷ್ಟೋ ಬಾರಿ ನಾವು ಈ ಹೊಟೇಲ್ ಗಳಿಗೆ ಹೋದಾಗ, ಅಲ್ಲಿ ಜನರು ವೆಜ್ ಮಂಚೂರಿಯನ್ನು ಆರ್ಡರ್ ಮಾಡಿದರೆ ಚಿಕನ್ ಮಂಚೂರಿ ತಂದು ಟೇಬಲ್ ಮೇಲೆ ಇಟ್ಟಿರುವ…
ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ನ್ಯೂಸ್ ಆರೋ: ಬಾಲಿವುಡ್‌ನ ಖ್ಯಾತ ನಟಿ ಅನುಷ್ಕಾ ಶರ್ಮಾ ಹಾಗೂ ಟೀಂ ಇಂಡಿಯಾದ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರ ಪರಿಚಯ ಯಾರಿಗೂ ಅಗತ್ಯವಿಲ್ಲ. ಇತ್ತೀಚೆಗಷ್ಟೇ ಅಂದರೆ ಮೇ…

Leave a Reply

Your email address will not be published. Required fields are marked *