ಗೂಡ್ಸ್ ರೈಲಿಗೆ ಢಿಕ್ಕಿ ಹೊಡೆದ ಮೈಸೂರು-ದರ್ಭಾಂಗ ಎಕ್ಸ್‌ಪ್ರೆಸ್; ಹೊತ್ತಿ ಉರಿದ ಬೋಗಿಗಳು
ನ್ಯೂಸ್ ಆ್ಯರೋ: ಚೆನ್ನೈ ಸಮೀಪದ ಕವರೈಪೆಟ್ಟೈ ರೈಲು ನಿಲ್ದಾಣದ ಬಳಿ ಇಂದು ಮೈಸೂರಿನಿಂದ ದರ್ಭಾಂಗಕ್ಕೆ ಪ್ರಯಾಣ ಮಾಡುತ್ತಿದ್ದ ಭಾಗಮತಿ ಎಕ್ಸ್‌ಪ್ರೆಸ್ ರೈಲು ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿದೆ.
ಗೂಡ್ಸ್ ರೈಲಿಗೆ ಎಕ್ಸ್‌ಪ್ರೆಸ್ ರೈಲು ಡಿಕ್ಕಿ ಹೊಡೆದ ಕಾರಣ ಬೋಗಿಯಲ್ಲಿ ಬೆಂಕಿ ಹೊತ್ತಿಕೊಂಡಿದೆ. ಈ ಘಟನೆಯಲ್ಲಿ ಹಲವು ಜನರು ಗಾಯಗೊಂಡಿದ್ದಾರೆ. ಅವರನ್ನು ಚಿಕಿತ್ಸೆಗೆ ಆಸ್ಪತ್ರೆಗೆ ಕೊಂಡೊಯ್ಯಲಾಗುತ್ತಿದೆ.
ಇಂದು (ಶುಕ್ರವಾರ) ಚೆನ್ನೈ ಸಮೀಪದ ಕವರೈಪೆಟ್ಟೈ ರೈಲು ನಿಲ್ದಾಣದ ಬಳಿ ಮೈಸೂರಿನಿಂದ ದರ್ಭಾಂಗ್ ಮಾರ್ಗವಾಗಿ ಹೋಗುತ್ತಿದ್ದ ಭಾಗಮತಿ ಎಕ್ಸ್‌ಪ್ರೆಸ್ ರೈಲು ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿದೆ. ಅಪಘಾತದ ಸ್ಥಳಕ್ಕೆ ಶೀಘ್ರದಲ್ಲೇ ರಕ್ಷಣಾ ಪಡೆ ಆಗಮಿಸಿದೆ. ಸದ್ಯಕ್ಕೆ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ರೈಲು ಸಂಖ್ಯೆ 12578 ಮೈಸೂರು-ದರ್ಭಾಂಗ ಬಾಗಮತಿ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ಲೂಪ್ ಲೈನ್‌ನಲ್ಲಿ ಪ್ರವೇಶಿಸಿ ನಿಂತಿದ್ದ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿದೆ ಎಂದು ರೈಲ್ವೆ ಮೂಲಗಳು ತಿಳಿಸಿವೆ.
ತಮಿಳುನಾಡು ಪೊಲೀಸರ ಪ್ರಕಾರ, ರೈಲಿನ ಕನಿಷ್ಠ ಎರಡು ಬೋಗಿಗಳು ಹಳಿ ತಪ್ಪಿವೆ. ರಕ್ಷಣಾ ತಂಡಗಳು ಮತ್ತು ಆಂಬ್ಯುಲೆನ್ಸ್‌ಗಳು ಅಪಘಾತದ ಸ್ಥಳಕ್ಕೆ ಧಾವಿಸಿವೆ. 12578 ಮೈಸೂರು-ದರ್ಭಾಂಗ ಎಕ್ಸ್‌ಪ್ರೆಸ್ ಕವರಾಯಪೆಟ್ಟೈಯಲ್ಲಿ ರಾತ್ರಿ 8.50 ಕ್ಕೆ ನಿಂತಿದ್ದ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿದೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ತಂಡಗಳು ಮತ್ತು ಆಂಬ್ಯುಲೆನ್ಸ್‌ಗಳನ್ನು ಸ್ಥಳಕ್ಕೆ ರವಾನಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Leave a Comment