ಅತ್ಯಾಚಾರ ಪ್ರಕರಣದಲ್ಲಿ ಸಿಲುಕಿದ ಜಾನಿ ಮಾಸ್ಟರ್‌: ಬಿಗ್ ಶಾಕ್ ಕೊಟ್ಟ ಕೇಂದ್ರ

Jani Master
Spread the love

ನ್ಯೂಸ್ ಆ್ಯರೋ: ಅತ್ಯಾಚಾರ ಆರೋಪ ಎದುರಿಸುತ್ತಿರುವ ನೃತ್ಯ ಸಂಯೋಜಕ ಜಾನಿ ಮಾಸ್ಟರ್ ಅವರಿಗೆ ಘೋಷಿಸಲಾಗಿದ್ದ ರಾಷ್ಟ್ರೀಯ ಪ್ರಶಸ್ತಿಯನ್ನು ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಹಿಂಪಡೆದಿದೆ ಎಂದು ವರದಿಯಾಗಿದೆ.

ಜೊತೆಯಲ್ಲಿ ಕೆಲಸ ಮಾಡುತ್ತಿದ್ದ ಯುವತಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಪ್ರಕರಣ ದಾಖಲಾಗಿದ್ದು, ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು.

ಆದರೆ, ಅವರಿಗೆ ರಾಷ್ಟ್ರೀಯ ಪ್ರಶಸ್ತಿ ಬಂದಿದ್ದರಿಂದ ಅದರ ಸ್ವೀಕಾರ ಸಮಾರಂಭಕ್ಕೆ ತೆರಳಲು ಇತ್ತೀಚೆಗೆ ಮಧ್ಯಂತರ ಜಾಮೀನು ಪಡೆದಿದ್ದರು.

ಜಾನಿ ಮಾಸ್ಟರ್ ನಿಜವಾದ ಹೆಸರು ಶೇಕ್ ಜಾನಿ ಬಾಷಾ ಎಂಬುದಾಗಿದ್ದು, ‘ತಿರುಚಿತ್ರಂಬಲಂ’ನ ಚಿತ್ರದ ‘ಮೇಘಮ್ ಕರುಕ್ಕಥಾ’ಹಾಡಿಗೆ ಅತ್ಯುತ್ತಮ ನೃತ್ಯ ಸಂಯೋಜನೆಗಾಗಿ ರಾಷ್ಟ್ರೀಯ ಪ್ರಶಸ್ತಿಯನ್ನು ಗೆದ್ದಿದ್ದರು. ನೃತ್ಯ ನಿರ್ದೇಶಕ ಸತೀಶ್ ಕೃಷ್ಣನ್ ಅವರೊಂದಿಗೆ ಜಾನಿ ಮಾಸ್ಟರ್ ಪ್ರಶಸ್ತಿ ಹಂಚಿಕೊಂಡಿದ್ದರು. ಇದೀಗ, ಕೇಂದ್ರದ ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಕೋಶವು ಪ್ರಶಸ್ತಿಯನ್ನು ಅಮಾನತುಗೊಳಿಸಿದೆ ಎಂದು ಪ್ರಕಟಣೆ ನೀಡಿದೆ.

Leave a Comment

Leave a Reply

Your email address will not be published. Required fields are marked *

error: Content is protected !!