ಮ್ಯಾಂಡಸ್‌ ಚಂಡಮಾರುತ ಪ್ರಭಾವದಿಂದ ಇನ್ನೂ 5 ದಿನ ರಾಜ್ಯದ ಹಲವೆಡೆ ಮಳೆ: ಇಂದು ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ

ಮ್ಯಾಂಡಸ್‌ ಚಂಡಮಾರುತ ಪ್ರಭಾವದಿಂದ ಇನ್ನೂ 5 ದಿನ ರಾಜ್ಯದ ಹಲವೆಡೆ ಮಳೆ: ಇಂದು ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ

ನ್ಯೂಸ್ ಆ್ಯರೋ : ತಮಿಳುನಾಡಿನಲ್ಲಿ ಮ್ಯಾಂಡಸ್‌ ಚಂಡಮಾರುತ ಪ್ರಭಾವದಿಂದ ಕರ್ನಾಟಕದ ಹಲವೆಡೆ ತುಂತುರು ಮಳೆಯಾಗುತ್ತಿದೆ. ಕಳೆದ ಮೂರು ನಾಲ್ಕು ದಿನಗಳಿಂದ ಮೋಡಕವಿದ ವಾತಾವರಣವಿದ್ದು, ಶೀತಗಾಳಿ ಬೀಸುತ್ತಿದೆ. ಇದೀಗ ಚಳಿಗೆ ಜನರು ತತ್ತರಿಸುತ್ತಿದ್ದು, ಇನ್ನೂ 5 ದಿನ ಮಳೆ ಇದೆ ಎಂದು ಹವಾಮಾನ ಇಲಾಖೆ ತಜ್ಞರು ತಿಳಿಸಿದ್ದಾರೆ.

ಇಂದು ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಮಿಂಚಿನ ಮಳೆಯಾಗಲಿದೆ. ಉತ್ತರ ಒಳನಾಡಿನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಇಂದು ಕರಾವಳಿಯಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಇನ್ನು ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ ಮುಂದುವರಿದಿದ್ದು, ಸಂಜೆ ವೇಳೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.

ಇಂದು ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 25 ಡಿಗ್ರಿ ಇದ್ದು, ಕನಿಷ್ಟ ತಾಪಾಮಾನ 19 ಡಿಗ್ರಿ ಕಂಡುಬಂದಿದೆ. ನಾಳೆಯು‌ ಮುಸುಕಿನ ಮೋಡ ಇರಲಿದ್ದು, ಗುಡುಗು ಮಿಂಚಿನ‌ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆಯನ್ನು ಕೊಟ್ಟಿದ್ದಾರೆ.

Related post

ದಿನ‌ ಭವಿಷ್ಯ 15-04-2024 ಸೋಮವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 15-04-2024 ಸೋಮವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ದಯಾಳು ಪ್ರಕೃತಿ ಇಂದು ಅನೇಕ ಸಂತೋಷದ ಕ್ಷಣಗಳನ್ನು ತರುತ್ತದೆ. ಲೋನ್ ತೆಗೆದುಕೊಂಡಿರುವ ಜನರಿಗೆ ಲೋನ್ ನ ಮೊತ್ತವನ್ನು ಮರುಪಾವತಿಸುವಲ್ಲಿ ತೊಂದರೆಗಳು ಉಂಟಾಗಬಹುದು. ಮನೆಯಲ್ಲಿ ನಿಮ್ಮ ಮಕ್ಕಳು ಅತಿಶಯೋಕ್ತಿಯಿರುವ…
ದಿನ‌ ಭವಿಷ್ಯ 14-04-2024 ಭಾನುವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 14-04-2024 ಭಾನುವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನೀವು ಧೀರ್ಘಕಾಲೀನ ಅನಾರೋಗ್ಯದಿಂದ ಬಳಲಬಹುದು. ಇಂದು ಯಾವುದೇ ಸಹಾಯವಿಲ್ಲದೆ, ನೀವು ಹಣವನ್ನು ಗಳಿಸುವಲ್ಲಿ ಸಾಮರ್ತ್ಯರಾಗಿರುತ್ತೀರಿ. ಯಾರಾದರೂ ನಿಮಗೆ ಹಾನಿ ಮಾಡಲು ಪ್ರಯತ್ನಿಸಬಹುದು – ಬಲವಾದ ಶಕ್ತಿಗಳು ನಿಮ್ಮ ವಿರುದ್ಧ…
ರಾಮೇಶ್ವರ ಕೆಫೆ ಬಾಂಬ್ ಸ್ಫೋಟ ಪ್ರಕರಣ – ಇಬ್ಬರು ಬಂಧಿತ ಉಗ್ರರನ್ನು ಬೆಂಗಳೂರಿಗೆ ಕರೆತಂದ NIA ಅಧಿಕಾರಿಗಳು

ರಾಮೇಶ್ವರ ಕೆಫೆ ಬಾಂಬ್ ಸ್ಫೋಟ ಪ್ರಕರಣ – ಇಬ್ಬರು ಬಂಧಿತ ಉಗ್ರರನ್ನು…

ನ್ಯೂಸ್ ಆ್ಯರೋ : ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಉಗ್ರರನ್ನು NIA ಅಧಿಕಾರಿಗಳು ಬೆಂಗಳೂರಿಗೆ ಕರೆತಂದಿದ್ದಾರೆ. ಅಬ್ದುಲ್ ಮತೀನ್ ತಾಹಾ ಹಾಗೂ ಮುಜಾವಿರ್ ಹುಸೇನ್…

Leave a Reply

Your email address will not be published. Required fields are marked *