ನಟಿ ಆಕಾಂಕ್ಷಾ ದುಬೆ‌ ಆತ್ಮಹತ್ಯೆ ಪ್ರಕರಣ – ಲುಕ್ ಔಟ್ ನೋಟಿಸ್ ಜಾರಿ ಬೆನ್ನಲ್ಲೇ ಗಾಯಕ ಸಮರ್ ಸಿಂಗ್ ಬಂಧನ

ನಟಿ ಆಕಾಂಕ್ಷಾ ದುಬೆ‌ ಆತ್ಮಹತ್ಯೆ ಪ್ರಕರಣ – ಲುಕ್ ಔಟ್ ನೋಟಿಸ್ ಜಾರಿ ಬೆನ್ನಲ್ಲೇ ಗಾಯಕ ಸಮರ್ ಸಿಂಗ್ ಬಂಧನ

ನ್ಯೂಸ್ ಆ್ಯರೋ‌ : ವಾರಣಾಸಿಯ ಸಾರಾನಾಥ್‌ ಹೋಟೆಲ್ ಕೋಣೆಯಲ್ಲಿ ಶವವಾಗಿ ಪತ್ತೆಯಾದ ಜನಪ್ರಿಯ ಭೋಜ್‌ಪುರಿ ನಟಿ ಆಕಾಂಕ್ಷಾ ದುಬೆ ಆತ್ಮಹತ್ಯೆಗೆ ಸಂಬಂಧಿಸಿದಂತೆ ಗಾಯಕ ಸಮರ್ ಸಿಂಗ್ ಮತ್ತು ಇನ್ನೊಬ್ಬ ವ್ಯಕ್ತಿಯ ವಿರುದ್ಧ ಲುಕ್‌ಔಟ್ ನೋಟಿಸ್ ಜಾರಿ ಮಾಡಲಾದ ಬೆನ್ನಲ್ಲೇ ಗಾಯಕ ಸಮರ್ ಸಿಂಗ್​ರನ್ನು ಗಾಜಿಯಾಬಾದ್‌ನಿಂದ ಪೊಲೀಸರು ಬಂಧಿಸಿದ್ದು, ಪ್ರಕರಣದ ತನಿಖೆ ಚುರುಕುಗೊಂಡಿದೆ.

ಇಬ್ಬರು ಆರೋಪಿಗಳಾದ ಸಮರ್ ಸಿಂಗ್ ಮತ್ತು ಸಂಜಯ್ ಸಿಂಗ್ ಅವರು ದೇಶ ಬಿಟ್ಟು ಹೋಗದಂತೆ ಅವರ ವಿವರಗಳನ್ನು ಎಲ್ಲಾ ವಿಮಾನ ನಿಲ್ದಾಣಗಳಿಗೆ ಕಳುಹಿಸಲಾಗಿತ್ತು.

ಆರೋಪಿ ಸಮರ್ ಸಿಂಗ್ ವಿರುದ್ಧ ಪೊಲೀಸರು ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿತ್ತು. ಪೊಲೀಸರು ಎಲ್ಲೆಡೆ ಶೋಧ ನಡೆಸಿದರೂ ಯಾವುದೇ ಪ್ರಯೋಜನಗಳ ಆಗಿರಲಿಲ್ಲ. ತನಿಖೆ ನಡೆಸಿದ ಪೊಲೀಸರಿಗೆ ಆರೋಪಿ ಗಾಜಿಯಾಬಾದ್‌ನಲ್ಲಿ ತಲೆಮರಿಸಿಕೊಂಡಿರುವುದು ತಿಳಿದಿತ್ತು. ಕೂಡಲೇ ಪೊಲೀಸರು ನಂದಗ್ರಾಮ್ ಪೊಲೀಸ್ ಠಾಣೆ ವ್ಯಾಪ್ತಿಯ ರಾಜ್ ನಗರ ವಿಸ್ತರಣೆ ಪ್ರದೇಶಕ್ಕೆ ತೆರಳಿ ಗಾಯಕಿ ಮತ್ತು ನಟಿ ಆಕಾಂಕ್ಷಾ ದುಬೆ ಆತ್ಮಹತ್ಯೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಸಮರ್ ಸಿಂಗ್‌ನನ್ನು ಬಂಧಿಸಿದ್ದಾರೆ ಎನ್ನಲಾಗಿದೆ.

ಡಿಸಿಪಿ ನಿಪುನ್ ಅಗರ್ವಾಲ್ ಪ್ರಕಾರ, ವಾರಾಣಸಿ ಪೊಲೀಸರು ಗುರುವಾರ ಗಾಜಿಯಾಬಾದ್​ಗೆ ತೆರಳಿದ್ದರು. ನಮ್ಮ ಪೊಲೀಸರಿಗೆ ಆಕಾಂಕ್ಷಾ ದುಬೆ ಆತ್ಮಹತ್ಯೆ ಪ್ರಕರಣದಲ್ಲಿ ಸಹಾಯ ಕೋರಿದರು. ಆರೋಪಿ ಕೆಲ ದಿನಗಳ ಹಿಂದೆ ನೋಯ್ಡಾದಲ್ಲಿ ವಾಸವಿದ್ದು, 4 ದಿನಗಳ ಹಿಂದೆ ಗಾಜಿಯಾಬಾದ್​ಗೆ ಬಂದು ನೆಲೆಸಿದ್ದ. ಬಳಿಕ ಆರೋಪಿಯನ್ನು ಬಂಧಿಸಲಾಗಿದ್ದು, ಎಲ್ಲ ವಿಧಿವಿಧಾನಗಳನ್ನು ಮುಗಿಸಿದ ಬಳಿಕ ಪೊಲೀಸರು ಆರೋಪಿಯನ್ನು ಕರೆದುಕೊಂಡು ಹೋಗಿದ್ದಾರೆ. ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ವಾರಾಣಸಿ ಪೊಲೀಸರು ಹೆಚ್ಚಿನ ವಿಚಾರಣೆಗೆ ಒಳಪಡಿಸಲಾಗುವುದು. ಆ ನಂತರವೇ ನಟಿ ಆತ್ಮಹತ್ಯೆಗೆ ಕಾರಣ ಏನು ಎಂಬುದು ನಿಖರವಾಗಿ ತಿಳಿದುಬರಲಿದೆ.

ಮಾರ್ಚ್ 25 ರಂದು ಭೋಜ್‌ಪುರಿ ನಟಿ ಆಕಾಂಕ್ಷಾ ದುಬೆ ಅವರ ಮೃತ ದೇಹವು ವಾರಾಣಸಿಯ ಸಾರನಾಥ್ ಪೊಲೀಸ್ ಠಾಣೆ ವ್ಯಾಪ್ತಿಯ ಹೋಟೆಲ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಹೋಟೆಲ್​ನವರು ಮಾಸ್ಟರ್ ಕೀಯಿಂದ ಹೋಟೆಲ್ ರೂಂ ತೆರೆದು ಪೊಲೀಸರಿಗೆ ಮಾಹಿತಿ ನೀಡಿದ್ದರು. ನಂತರ ಪೊಲೀಸರು ಇದನ್ನು ಆತ್ಮಹತ್ಯೆ ಎಂದು ಪರಿಗಣಿಸಿದ್ದಾರೆ. ಆದರೆ, ಎರಡು ದಿನಗಳ ನಂತರ ಈ ವಿಚಾರದಲ್ಲಿ ಹೊಸ ಟ್ವಿಸ್ಟ್ ಸಿಕ್ಕಿದೆ. ಆಕಾಂಕ್ಷಾ ದುಬೆ ಅವರ ತಾಯಿ ಮಧು ದುಬೆ ಅವರು ಭೋಜ್‌ಪುರಿ ಗಾಯಕ ಸಮರ್ ಸಿಂಗ್ ಮತ್ತು ಆತನ ಸಹೋದರ ಸಂಜಯ್ ಸಿಂಗ್ ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದಾರೆ ಎಂದು ದೂರಿದ್ದರು. ಮತ್ತು ಅವರಿಬ್ಬರು ನನ್ನ ಮಗಳನ್ನು ಕೊಂದಿದ್ದಾರೆ ಎಂದು ಗಂಭೀರವಾಗಿ ಆರೋಪ ಮಾಡಿದ್ದರು. ಬಳಿಕ ಪೋಲಿಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದರು.

Related post

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ ಮದುವೆ

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ…

ನ್ಯೂಸ್ ಆರೋ: ಬರೋಬ್ಬರಿ 25 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ಮಂತ್ರ ಮಾಂಗಲ್ಯ ಮೂಲಕ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ತುಮಕೂರಲ್ಲಿ ನಡೆದಿದೆ. ಹೌದು ಜನಾಂದೋಲನದಲ್ಲಿ…
ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು! ಏನಿದು ವಿಷಯ?

ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು!…

ನ್ಯೂಸ್ ಆರೋ: ಎಷ್ಟೋ ಬಾರಿ ನಾವು ಈ ಹೊಟೇಲ್ ಗಳಿಗೆ ಹೋದಾಗ, ಅಲ್ಲಿ ಜನರು ವೆಜ್ ಮಂಚೂರಿಯನ್ನು ಆರ್ಡರ್ ಮಾಡಿದರೆ ಚಿಕನ್ ಮಂಚೂರಿ ತಂದು ಟೇಬಲ್ ಮೇಲೆ ಇಟ್ಟಿರುವ…
ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ನ್ಯೂಸ್ ಆರೋ: ಬಾಲಿವುಡ್‌ನ ಖ್ಯಾತ ನಟಿ ಅನುಷ್ಕಾ ಶರ್ಮಾ ಹಾಗೂ ಟೀಂ ಇಂಡಿಯಾದ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರ ಪರಿಚಯ ಯಾರಿಗೂ ಅಗತ್ಯವಿಲ್ಲ. ಇತ್ತೀಚೆಗಷ್ಟೇ ಅಂದರೆ ಮೇ…

Leave a Reply

Your email address will not be published. Required fields are marked *