ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಮತ್ತೊಂದು ಚೀತಾ ಸಾವು – 42 ದಿನಗಳ ಅಂತರದಲ್ಲಿ ಸಾವನ್ನಪ್ಪಿದ ಮೂರನೇ ಚೀತಾ

ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಮತ್ತೊಂದು ಚೀತಾ ಸಾವು – 42 ದಿನಗಳ ಅಂತರದಲ್ಲಿ ಸಾವನ್ನಪ್ಪಿದ ಮೂರನೇ ಚೀತಾ

ನ್ಯೂಸ್ ಆ್ಯರೋ‌ : ಮಧ್ಯಪ್ರದೇಶದ ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಚೀತಾ ಸಾವಿನ ಸರಣಿ ಮುಂದುವರಿದಿದೆ. ಇದೀಗ ದಕ್ಷ ಎಂಬ ಹೆಸರಿನ ಹೆಣ್ಣು ಚೀತಾ ಉದ್ಯಾನವನದೊಳಗೆ ನಡೆದ ಇತರ ಚೀತಾಗಳೊಂದಿಗಿನ ಕಾದಾಟದಲ್ಲಿ ಸಾವನ್ನಪ್ಪಿದೆ. ಮೂಲಗಳ ಪ್ರಕಾರ, ವಾಯು, ಅಗ್ನಿ ಮತ್ತು ವೈಟ್ ವಾಕರ್ಸ್ ಎಂದೂ ಕರೆಯಲ್ಪಡುವ ಗಂಡು ಚೀತಾಗಳ ಜೊತೆಗೆ ಕಾದಾಡುವ ಸಮಯದಲ್ಲಿ ದಕ್ಷ ಸಾವನ್ನಪ್ಪಿದೆ. ದಕ್ಷಿಣ ಆಫ್ರಿಕಾ ಮತ್ತು ನಮೀಬಿಯಾದಿಂದ ಚೀತಾಗಳನ್ನು ತಂದ ನಂತರ ಕುನೊ ರಾಷ್ಟ್ರೀಯ ಉದ್ಯಾನವನದಲ್ಲಿ ಸಾವನ್ನಪ್ಪಿದ ಮೂರನೇ ಚೀತಾ ಇದಾಗಿದೆ.

ಕಳೆದ ವರ್ಷ ಕುನೊ ರಾಷ್ಟ್ರೀಯ ಉದ್ಯಾನವನಕ್ಕೆ ಚೀತಾಗಳನ್ನು ರಾಷ್ಟ್ರೀಯ ಉದ್ಯಾನವನಕ್ಕೆ ಕರೆತರಲಾಗಿತ್ತು. ಈ ಪೈಕಿ ಮಾರ್ಚ್ ಮತ್ತು ಎಪ್ರಿಲ್‌ನಲ್ಲಿ ಎರಡು ಚೀತಾಗಳು ಸಾವನ್ನಪ್ಪಿವೆ. ಸಶಾ ಎಂಬ ಹೆಣ್ಣು ಚೀತಾ ಮೂತ್ರಪಿಂಡದ ಕಾಯಿಲೆಯಿಂದ ಬಳಲಿ ಮಾರ್ಚ್ ನಲ್ಲಿ ಅಸುನೀಗಿತ್ತು. ಎಪ್ರಿಲ್‌ನಲ್ಲಿ ಎರಡನೇ ಚೀತಾ ಉದಯ್ ಅಸ್ವಸ್ಥಗೊಂಡು ಚಿಕಿತ್ಸೆ ವೇಳೆ ಸಾವನ್ನಪ್ಪಿತ್ತು.

ಜೂನ್‌ನಲ್ಲಿ ಮಾನ್ಸೂನ್ ಪ್ರಾರಂಭವಾಗುವ ಮೊದಲು ಐದು ಚೀತಾ (ಮೂರು ಹೆಣ್ಣು ಮತ್ತು ಎರಡು ಗಂಡು)ಗಳನ್ನು ಕುನೋ ರಾಷ್ಟ್ರೀಯ ಉದ್ಯಾನವನದಿಂದ ಬಿಡುಗಡೆ ಮಾಡಲಾಗುವುದು ಎಂದು ಕೇಂದ್ರ ಪರಿಸರ ಸಚಿವಾಲಯ ಹೇಳಿದೆ. ಇವನ್ನು ಅಪಾಯವಾಗದ ಜಾಗಕ್ಕೆ ಬಿಡಲಾಗುವುದು ಎಂದು ತಿಳಿಸಿದೆ. ತೀರಾ ಅಪಾಯಕಾರಿ ಎನಿಸುವ ಪ್ರದೇಶಗಳಿಗೆ ಪ್ರವೇಶಿಸದ ಹೊರತು ಚೀತಾಗಳನ್ನು ಮತ್ತೆ ಸೆರೆಹಿಡಿಯುವುದಿಲ್ಲ ಎಂದು ಸಚಿವಾಲಯ ತಿಳಿಸಿದೆ.

ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಮಧ್ಯಪ್ರದೇಶದ ಕುನೊ ರಾಷ್ಟ್ರೀಯ ಉದ್ಯಾನವನದ ವಿಶೇಷ ಆವರಣಕ್ಕೆ ನಮೀಬಿಯಾದಿಂದ ಬಂದ ಎಂಟು ಚೀತಾಗಳನ್ನು ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿದ್ದರು. ದೇಶದಲ್ಲಿ ಈ ತಳಿ ನಾಶವಾದ ಕಾರಣ ನಮೀಬಿಯಾ, ದಕ್ಷಿಣ ಆಫ್ರಿಕಾದಿಂದ ತರಿಸಲಾಗಿತ್ತು.

Related post

Loksabha Election 2024 : ಇಂದು ಮೊದಲ ಹಂತದ ಮತದಾನ ಆರಂಭ – 102 ಕ್ಷೇತ್ರಗಳಲ್ಲಿ ಅದೃಷ್ಟ ಪರೀಕ್ಷೆಗಿಳಿದ 1625 ಅಭ್ಯರ್ಥಿಗಳು

Loksabha Election 2024 : ಇಂದು ಮೊದಲ ಹಂತದ ಮತದಾನ ಆರಂಭ…

ನ್ಯೂಸ್ ಆ್ಯರೋ : ದೇಶದ ಚುಕ್ಕಾಣಿ ಹಿಡಿಯಲು ಐದು ವರ್ಷಗಳಿಗೊಮ್ಮೆ ನಡೆಯುವ ಲೋಕಸಭಾ ಚುನಾವಣೆಯಲ್ಲಿ ಈ ಬಾರಿಯ 7 ಹಂತದ ಸಾರ್ವತ್ರಿಕ ಲೋಕಸಭೆ ಚುನಾವಣೆಗೆ ಶುಕ್ರವಾರ ಚಾಲನೆ ಸಿಗಲಿದ್ದು,…
ದಿನ‌ ಭವಿಷ್ಯ 19-04-2024 ಶುಕ್ರವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 19-04-2024 ಶುಕ್ರವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಆಹಾರವನ್ನು ನಿಯಂತ್ರಣದಲ್ಲಿರಿಸಿಕೊಳ್ಳಿ ಮತ್ತು ಫಿಟ್ ಆಗಿ ಉಳಿಯಲು ವ್ಯಾಯಾಮ ಮಾಡಿ. ದಿನದಲ್ಲಿ ನಂತರ ಹಣಕಾಸು ಪರಿಸ್ಥಿತಿಗಳು ಸುಧಾರಿಸುತ್ತವೆ. ಒಂದು ಒಳ್ಳೆಯ ಸುದ್ದಿ ಪಡೆಯುವ ಸಾಧ್ಯತೆಯಿದ್ದು ಇದು ನಿಮ್ಮನ್ನಷ್ಟೇ…
ದಿನ‌ ಭವಿಷ್ಯ 15-04-2024 ಸೋಮವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 15-04-2024 ಸೋಮವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ದಯಾಳು ಪ್ರಕೃತಿ ಇಂದು ಅನೇಕ ಸಂತೋಷದ ಕ್ಷಣಗಳನ್ನು ತರುತ್ತದೆ. ಲೋನ್ ತೆಗೆದುಕೊಂಡಿರುವ ಜನರಿಗೆ ಲೋನ್ ನ ಮೊತ್ತವನ್ನು ಮರುಪಾವತಿಸುವಲ್ಲಿ ತೊಂದರೆಗಳು ಉಂಟಾಗಬಹುದು. ಮನೆಯಲ್ಲಿ ನಿಮ್ಮ ಮಕ್ಕಳು ಅತಿಶಯೋಕ್ತಿಯಿರುವ…

Leave a Reply

Your email address will not be published. Required fields are marked *