ಶೀಘ್ರದಲ್ಲೇ ವನ್‌ ನೇಷನ್ ವನ್ ಸ್ಟೂಡೆಂಟ್ ಐಡಿ – ಏನಿದು ಹೊಸ ಐಡಿ? ಏನೆಲ್ಲಾ ದಾಖಲೆಗಳು ಇರ್ತಾವೆ ಗೊತ್ತಾ?

ಶೀಘ್ರದಲ್ಲೇ ವನ್‌ ನೇಷನ್ ವನ್ ಸ್ಟೂಡೆಂಟ್ ಐಡಿ – ಏನಿದು ಹೊಸ ಐಡಿ? ಏನೆಲ್ಲಾ ದಾಖಲೆಗಳು ಇರ್ತಾವೆ ಗೊತ್ತಾ?

ನ್ಯೂಸ್ ಆ್ಯರೋ : ‘ವನ್ ನೇಷನ್ ವನ್ ಸ್ಟೂಡೆಂಟ್ ಐಡಿ’ ಸ್ಕೀಮ್, ‘ಸ್ವಯಂಚಾಲಿತ ಪರ್ಮನೆಂಟ್ ಅಕಾಡೆಮಿಕ್ ಅಕೌಂಟ್ ರಿಜಿಸ್ಟ್ರಿ’ ಎಂದು ಕರೆಯಲಾಗುವ ಶಾಶ್ವತ ಸಂಖ್ಯೆಯ ಐಡಿ ಕಾರ್ಡ್‌ ಅನ್ನು ಶಾಲಾ ವಿದ್ಯಾರ್ಥಿಗಳಿಗೆ ನೀಡಲು ಕೇಂದ್ರ ಸಚಿವಾಲಯ ಚಿಂತಿಸಿದೆ.

ರಾಷ್ಟ್ರೀಯ ಶಿಕ್ಷಣ ನೀತಿ 2020ರ ಭಾಗವಾಗಿ, ಕೇಂದ್ರ ಸಚಿವಾಲಯವು ಶಾಲಾ ವಿದ್ಯಾರ್ಥಿಗಳಿಗೆ ವಿಭಿನ್ನ ಐಡಿ ನಂಬರ್ ನೀಡುವ ಯೋಜನೆಗೆ ಮುಂದಾಗಿದೆ. ಈ ನಂಬರ್ ಮೂಲಕ ವಿದ್ಯಾರ್ಥಿಗಳ ಶೈಕ್ಷಣಿಕ ವಿಷಯಕ್ಕೆ ಸಂಬಂಧಿಸಿದ ಎಲ್ಲಾ ಮಾಹಿತಿ ಲಭ್ಯವಾಗಲಿದೆ. ಒಂದು ಶಾಲೆಯಿಂದ ಇನ್ನೊಂದಕ್ಕೆ ವರ್ಗಾವಣೆಯನ್ನು ಸುಲಭಗೊಳಿಸುತ್ತದೆ.

‘APAAR ಮತ್ತು ನ್ಯಾಷನಲ್ ಕ್ರೆಡಿಟ್ ಫ್ರೇಮ್‌ವರ್ಕ್ ಭಾರತದಾದ್ಯಂತ ವಿದ್ಯಾರ್ಥಿಗಳಿಗೆ ಕ್ಯೂಆರ್‌ ಕೋಡ್ ಆಗಿರಲಿದೆ. ಅವರು ತೆಗೆದುಕೊಳ್ಳುವ ಪ್ರತಿಯೊಂದು ಹೆಜ್ಜೆ ಅಥವಾ ಕೌಶಲ್ಯವನ್ನು ಇಲ್ಲಿ ಮನ್ನಣೆ ನೀಡಲಾಗುತ್ತದೆ ಎಂದು ಎಐಸಿಟಿಇ ಅಧ್ಯಕ್ಷ ಟಿ.ಜಿ ಸೀತಾರಾಮನ್ ಹೇಳಿದ್ದಾರೆ.

ಈ ಐಡಿಯಲ್ಲಿ ವಿದ್ಯಾರ್ಥಿಗಳ ಪರೀಕ್ಷೆಯ ಫಲಿತಾಂಶಗಳು, ಕ್ರೀಡಾ ಸಾಧನೆ, ಒಲಿಂಪಿಯಾಡ್ ಫಲಿತಾಂಶಗಳನ್ನು ಡಿಜಿಟಲ್‌ ಮಾದರಿಯಲ್ಲಿ ಸಂಗ್ರಹಿಸಲು ವಿದ್ಯಾರ್ಥಿಗಳಿಗೆ ಸಹಾಯ ಮಾಡುವ ಗುರಿಯನ್ನು ಈ ವ್ಯವಸ್ಥೆಯು ಹೊಂದಿದೆ. ಈ ನೋಂದಣಿಯನ್ನು ಪೋಷಕರ ಒಪ್ಪಿಗೆಯೊಂದಿಗೆ ಮಾಡಲಾಗುತ್ತದೆ ಮತ್ತು ಇದಕ್ಕಾಗಿ ಪ್ರಕ್ರಿಯೆಯನ್ನು ಪ್ರಾರಂಭಿಸಲು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಸಚಿವಾಲಯ ನಿರ್ದೇಶಿಸಿದೆ.

ಶಿಕ್ಷಣ ಸಚಿವಾಲಯವು ಪ್ರತಿ ವಿದ್ಯಾರ್ಥಿಯ ಆಧಾರ್ ಸಂಖ್ಯೆಯನ್ನು ಆಧರಿಸಿ APAAR ID ಅನ್ನು ರಚಿಸುತ್ತದೆ, ಇದಕ್ಕಾಗಿ ಪೋಷಕರ ಪ್ರತ್ಯೇಕ ಒಪ್ಪಿಗೆ ಅಗತ್ಯವಾಗಿರುತ್ತದೆ. ಈ ಮಾಹಿತಿ ಗೌಪ್ಯವಾಗಿರಲಿದ್ದು, ಪೋಷಕರು ಬಯಸಿದರೆ ಯಾವಾಗ ಬೇಕಾದರೂ ಒಪ್ಪಿಗೆ ವಾಪಸ್ ಪಡೆಯಬಹುದು.

Related post

ಮೋದಿ ನನ್ನ ಜೀವದ ಗೆಳೆಯ ಎಂದ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೊನಿ – ಇನ್ಸ್ಟಾಗ್ರಾಮ್ ನಲ್ಲಿ ಪ್ರಧಾನಿ ಮೋದಿ ಬಗ್ಗೆ ಹೇಳಿದ್ದೇನು?

ಮೋದಿ ನನ್ನ ಜೀವದ ಗೆಳೆಯ ಎಂದ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೊನಿ…

ನ್ಯೂಸ್ ಆ್ಯರೋ : ಮನುಷ್ಯ ಅಂದ ಮೇಲೆ ಆತ ಸಂಘಜೀವಿ. ವ್ಯಕ್ತಿ ಅದೆಷ್ಟೇ ದೊಡ್ಡ ಮಟ್ಟದ ಸ್ಥಾನದಲ್ಲಿದ್ದರೂ ಅವನಿಗೂ ಒಬ್ಬ ಸ್ನೇಹಿತ, ಸ್ನೇಹ ಸಂಬಂಧ ಇದ್ದೇ ಇರುತ್ತದೆ‌. ಇದೀಗ…
20 ಲಕ್ಷ ಲಂಚ ಪೀಕುತ್ತಿದ್ದ ED ಅಧಿಕಾರಿ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದ – ಅರೆಸ್ಟ್ ‌ಮಾಡಿದ್ಯಾರು‌ ಗೊತ್ತಾ?

20 ಲಕ್ಷ ಲಂಚ ಪೀಕುತ್ತಿದ್ದ ED ಅಧಿಕಾರಿ ರೆಡ್ ಹ್ಯಾಂಡ್ ಆಗಿ…

ನ್ಯೂಸ್ ಆ್ಯರೋ : ಹಣದ ದಾಹ ಯಾರಿಗಿಲ್ಲ ಹೇಳಿ. ಆದರೆ ಒಂದಂತೂ ಸತ್ಯ. ಅತ್ಯಂತ ಉತ್ತಮ ವೃತ್ತಿಯಲ್ಲಿರುವ, ದೊಡ್ಡ ಮೊತ್ತದ ವೇತನ ಸಂಪಾದಿಸುತ್ತಿರುವವರಿಗಂತೂ ಧನದಾಹ ದುಪ್ಪಟ್ಟು ಇರುತ್ತದೆ. ಇದಕ್ಕೆ…
ನೆದರ್ಲೆಂಡ್ಸ್‌ ಗೆಳತಿಯನ್ನು ಹಿಂದೂ ಸಂಪ್ರದಾಯದಂತೆ ಮದ್ವೆಯಾದ ಹಳ್ಳಿ ಹೈದ…! – ಅಷ್ಟಕ್ಕೂ ಇವ್ರಿಗೆ ಲವ್ ಆಗಿದ್ದು ಹೇಗೆ ಗೊತ್ತಾ..?

ನೆದರ್ಲೆಂಡ್ಸ್‌ ಗೆಳತಿಯನ್ನು ಹಿಂದೂ ಸಂಪ್ರದಾಯದಂತೆ ಮದ್ವೆಯಾದ ಹಳ್ಳಿ ಹೈದ…! – ಅಷ್ಟಕ್ಕೂ…

ನ್ಯೂಸ್ ಆ್ಯರೋ : ‘ಪ್ರೀತಿಗೆ ಕಣ್ಣಿಲ್ಲ’ ಅಂತಾರೆ. ಜಾತಿ, ಧರ್ಮ, ದೇಶ ಇದ್ಯಾವುದರ ಮಾನದಂಡವೂ ಪ್ರೀತಿಗಿಲ್ಲ. ಅದೆಲ್ಲಕ್ಕಿಂತಲೂ ಪರಿಶುದ್ಧವಾದ ಸಂಬಂಧ ಅಂದ್ರೆ ಅದು ಪ್ರೀತಿ ಸಂಬಂಧ. ಪ್ರೀತಿಸಿದ ವ್ಯಕ್ತಿಗಾಗಿ…

Leave a Reply

Your email address will not be published. Required fields are marked *