ರಾಜಸ್ಥಾನದಲ್ಲಿ ಮಿಗ್ 21 ಯುದ್ಧ ವಿಮಾನ‌ ಪತನ – ಪೈಲಟ್ ಸೇಫ್, ಮೂವರ ಸಾವು

ರಾಜಸ್ಥಾನದಲ್ಲಿ ಮಿಗ್ 21 ಯುದ್ಧ ವಿಮಾನ‌ ಪತನ – ಪೈಲಟ್ ಸೇಫ್, ಮೂವರ ಸಾವು

ನ್ಯೂಸ್ ಆ್ಯರೋ‌ : ರಾಜಸ್ಥಾನದಲ್ಲಿ ಇಂದು ಬೆಳಗ್ಗೆ ಮಿಗ್‌ ವಿಮಾನ ಪತನಗೊಂಡಿದ್ದು, ಮೂವರು ಮೃತಪಟ್ಟು ಒಬ್ಬರಿಗೆ ಗಂಭೀರ ಗಾಯಗಳಾಗಿವೆ. ಇನ್ನು ಪೈಲಟ್‌ ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ ಎಂದು ವರದಿ ತಿಳಿಸಿದೆ.

ಭಾರತೀಯ ವಾಯುಪಡೆಗೆ ಸೇರಿದ ಮಿಗ್ 21 ಫೈಟರ್ ಜೆಟ್ ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯಲ್ಲಿ ಪತನಗೊಂಡಿತ್ತು. ವಿಮಾನವು ಸೂರತ್‌ಗಢ ಏರ್ ಫೋರ್ಸ್ ಸ್ಟೇಷನ್‌ನಿಂದ ಟೇಕಾಫ್ ಆಗಿದ್ದು, ಟೇಕ್ ಆಫ್ ಆದ ಕೂಡಲೇ ಪೈಲಟ್ ತಾಂತ್ರಿಕ ದೋಷವನ್ನು ವರದಿ ಮಾಡಿದ್ದರು. ಮಿಗ್ -21 ಬಹ್ಲೋಲ್‌ನಲ್ಲಿರುವ ಮನೆಗೆ ಅಪ್ಪಳಿಸಿದ ನಂತರ ಮಹಿಳೆಯರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಅಲ್ಲದೆ ಹೊಲದಲ್ಲಿ ಕೆಲಸ ಮಾಡುತ್ತಿದ್ದವರ ಮೇಲೆ ಅವಶೇಷಗಳು ಬಿದ್ದು ಸಾವಿಗೀಡಾಗಿದ್ದಾರೆ ಎನ್ನಲಾಗಿದೆ.

“ಐಎಎಫ್‌ನ ಮಿಗ್ -21 ವಿಮಾನವು ಇಂದು ಬೆಳಗ್ಗೆ ವಾಡಿಕೆಯ ತರಬೇತಿಯ ಸಮಯದಲ್ಲಿ ಸೂರತ್‌ಗಢದ ಬಳಿ ಪತನಗೊಂಡಿದೆ. ಪೈಲಟ್ ಸುರಕ್ಷಿತವಾಗಿ ಹೊರಗೆ ಬಂದಿದ್ದು, ಸಣ್ಣಪುಟ್ಟ ಗಾಯಗಳಾಗಿವೆ. ಅಪಘಾತದ ಕಾರಣವನ್ನು ಪತ್ತೆಹಚ್ಚಲು ತನಿಖೆಯನ್ನು ರಚಿಸಲಾಗಿದೆ” ಎಂದು ಭಾರತೀಯ ವಾಯುಪಡೆ ತಿಳಿಸಿದೆ.

ಕಳೆದ ವರ್ಷ ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ 2 ಸೀಟ್‌ನ ಮಿಗ್ -21 ವಿಮಾನ ಪತನಗೊಂಡು ಇಬ್ಬರು ಪೈಲಟ್‌ಗಳು ಮೃತಪಟ್ಟಿದ್ದರು. ಕೆಲವು ದಿನಗಳ ಹಿಂದೆ ಇಬ್ಬರು ಪೈಲಟ್‌ಗಳು ಮತ್ತು ತಂತ್ರಜ್ಞರಿದ್ದ ಭಾರತೀಯ ಸೇನೆಯ ಹೆಲಿಕಾಪ್ಟರ್ ಜಮ್ಮು ಮತ್ತು ಕಾಶ್ಮೀರದ ಕಿಶ್ತ್‌ವಾರ್ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಪತನಗೊಂಡು ಮೂವರು ಗಾಯಗೊಂಡಿದ್ದರು.

Related post

ಡೈರೆಕ್ಟರ್​ ಹುದ್ದೆಗೆ ಅರ್ಜಿ ಆಹ್ವಾನಿಸಿದ UIDAI; ತಿಂಗಳಿಗೆ 2 ಲಕ್ಷಕ್ಕೂ ಅಧಿಕ ಸಂಬಳ

ಡೈರೆಕ್ಟರ್​ ಹುದ್ದೆಗೆ ಅರ್ಜಿ ಆಹ್ವಾನಿಸಿದ UIDAI; ತಿಂಗಳಿಗೆ 2 ಲಕ್ಷಕ್ಕೂ ಅಧಿಕ…

ನ್ಯೂಸ್ ಆರೋ: ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 3 ಡೈರೆಕ್ಟರ್, ಅಸಿಸ್ಟೆಂಟ್ ಡೈರೆಕ್ಟರ್​ ಹುದ್ದೆಗಳು…
ಅರವಿಂದ್ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು ನೀಡಿ ಸುಪ್ರೀಂ ಕೋರ್ಟ್ ಆದೇಶ

ಅರವಿಂದ್ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು ನೀಡಿ ಸುಪ್ರೀಂ ಕೋರ್ಟ್ ಆದೇಶ

ನ್ಯೂಸ್ ಆ್ಯರೋ : ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ ಅವರಿಗೆ ಮಧ್ಯಂತರ ಜಾಮೀನು ನೀಡಿ ಇಂದು…
ಆರೋಗ್ಯ ಸಮಸ್ಯೆ; 14 ತಿಂಗಳ ಬಳಿಕ ಸ್ಯಾಂಟ್ರೋ ರವಿಗೆ ಜಾಮೀನು ನೀಡಿದ ನ್ಯಾಯಾಲಯ

ಆರೋಗ್ಯ ಸಮಸ್ಯೆ; 14 ತಿಂಗಳ ಬಳಿಕ ಸ್ಯಾಂಟ್ರೋ ರವಿಗೆ ಜಾಮೀನು ನೀಡಿದ…

ನ್ಯೂಸ್ ಆ್ಯರೋ : ಅತ್ಯಾಚಾರ, ಕೊಲೆ ಬೆದರಿಕೆ ಪ್ರಕರಣದ ಆರೋಪಿ ಕೆ.ಎಸ್.ಮಂಜುನಾಥ್ ಅಲಿಯಾಸ್ ಸ್ಯಾಂಟ್ರೋ ರವಿಗೆ ಮೈಸೂರಿನ ಆರನೇ ಹೆಚ್ಚುವರಿ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಪ್ರಕರಣದಲ್ಲಿ ಬಂಧಿತನಾಗಿ…

Leave a Reply

Your email address will not be published. Required fields are marked *