ಅಯೋಧ್ಯೆ ರಾಮಮಂದಿರ ಉದ್ಘಾಟನೆಗೆ ಬರದಂತೆ ಹಿರಿಯರಾದ ಅಡ್ವಾಣಿ, ಜೋಶಿಗೆ ಮನವಿ – ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಹೀಗೆ ಮಾಡಿದ್ದೇಕೆ?

ಅಯೋಧ್ಯೆ ರಾಮಮಂದಿರ ಉದ್ಘಾಟನೆಗೆ ಬರದಂತೆ ಹಿರಿಯರಾದ ಅಡ್ವಾಣಿ, ಜೋಶಿಗೆ ಮನವಿ – ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಹೀಗೆ ಮಾಡಿದ್ದೇಕೆ?

ನ್ಯೂಸ್ ಆ್ಯರೋ : ಇನ್ನೇನೋ ಅಯೋಧ್ಯೆಯ ರಾಮಮಂದಿರ ಉದ್ಘಾಟನೆಗೆ ದಿನಗಣನೆಯಾಗುತ್ತಿದೆ. ಭರ್ಜರಿ ಸಿದ್ಧತೆಗಳು ಕೂಡಾ ನಡೆಯುತ್ತಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಮಾರಂಭದ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ ಮತ್ತು ಜನವರಿ 24 ರಿಂದ ದೇವಾಲಯವು ಸಾರ್ವಜನಿಕರಿಗೆ ಮುಕ್ತವಾಗಲಿದೆ.

ಅಯೋಧ್ಯೆ ರಾಮ ಮಂದಿರ ಆಂದೋಲನವನ್ನು 90ರ ದಶಕದಲ್ಲಿ ಆರಂಭಿಸಿದ ಬಿಜೆಪಿಯ ಹಿರಿಯರಾದ ಲಾಲ್ ಕೃಷ್ಣ ಅಡ್ವಾಣಿ ಮತ್ತು ಮುರಳಿ ಮನೋಹರ ಜೋಶಿ ಅವರು ಅಯೋಧ್ಯೆಯಲ್ಲಿ ಜನವರಿಯಲ್ಲಿ ನಡೆಯುವ ಪ್ರಾಣ ಪ್ರತಿಷ್ಠೆ ಸಮಾರಂಭಕ್ಕೆ ಹಾಜರಾಗುವುದು ಅನುಮಾನ ಎನ್ನಲಾಗಿದೆ.

ವಯಸ್ಸು ಮತ್ತು ಆರೋಗ್ಯದ ಕಾರಣ ಕಾರ್ಯಕ್ರಮಕ್ಕೆ ಹಾಜರಾಗದಂತೆ ದೇವಸ್ಥಾನದ ಟ್ರಸ್ಟ್‌ ಅವರಿಗೆ ಮನವಿ ಮಾಡಿದೆ ಎನ್ನಲಾಗಿದೆ. ಇಬ್ಬರೂ ಬಹಳ ಹಿರಿಯರು ಮತ್ತು ಅವರ ವಯಸ್ಸನ್ನು ಪರಿಗಣಿಸಿ, ಅವರನ್ನು ಬರದಂತೆ ವಿನಂತಿಸಲಾಯಿತು. ನಮ್ಮ ವಿನಂತಿಯನ್ನು ಇಬ್ಬರೂ ಒಪ್ಪಿಕೊಂಡರು ಎಂದು ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರೈ ತಿಳಿಸಿದ್ದಾರೆ.

ಜನವರಿ 22 ರಂದು ನಡೆಯಲಿರುವ ಉದ್ಘಾಟನಾ ಸಮಾರಂಭಕ್ಕೆ ಸಿದ್ಧತೆಗಳು ಅಂತಿಮ ಹಂತದಲ್ಲಿವೆ ಎಂದು ಅವರು ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಕಾರ್ಯಕ್ರಮದ ಮುಖ್ಯ ಅತಿಥಿಯಾಗಿರಲಿದ್ದಾರೆ. ಜನವರಿ 15 ರೊಳಗೆ ಸಿದ್ಧತೆಗಳು ಪೂರ್ಣಗೊಳ್ಳಲಿವೆ ಮತ್ತು “ಪ್ರಾಣ ಪ್ರತಿಷ್ಠೆ” ಪೂಜೆಯು ಜನವರಿ 16 ರಂದು ಪ್ರಾರಂಭವಾಗಲಿದೆ. ಇದು ಜನವರಿ 22 ರವರೆಗೆ ನಡೆಯಲಿದೆ ಎಂದು ರೈ ತಿಳಿಸಿದ್ದಾರೆ.

ಆದರೆ, ಆರೋಗ್ಯ ಮತ್ತು ವಯಸ್ಸಿನ ಕಾಳಜಿಯಿಂದಾಗಿ, ಅಡ್ವಾಣಿ (96), ಮತ್ತು ಜೋಶಿ (ಅವರು ಮುಂದಿನ ತಿಂಗಳು 90 ವರ್ಷಕ್ಕೆ ಕಾಲಿಡುತ್ತಾರೆ) ಅವರು ಕಾರ್ಯಕ್ರಮಕ್ಕೆ ಹಾಜರಾಗುವ ಸಾಧ್ಯತೆಯಿಲ್ಲ ಎಂದು ಅವರು ಹೇಳಿದ್ದಾರೆ.

ಕಾರ್ಯಕ್ರಮದಲ್ಲಿ ಭಾಗವಹಿಸಲಿರುವ ಗಣ್ಯರು:

ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡರನ್ನು ಖುದ್ದು ಆಹ್ವಾನಿಸಲು ಮೂವರು ಸದಸ್ಯರ ತಂಡ ರಚಿಸಲಾಗಿದೆ. ಸಮಾರಂಭದಲ್ಲಿ ಆರು ಪ್ರಾಚೀನ ಮಠಗಳ ಶಂಕರಾಚಾರ್ಯರು, ಸರಿಸುಮಾರು 150 ಋಷಿಗಳು, 4,000 ಸಂತರು ಮತ್ತು 2,200 ಇತರ ಗಣ್ಯ ಅತಿಥಿಗಳು ಭಾಗವಹಿಸುವ ನಿರೀಕ್ಷೆಯಿದೆ ಎಂದು ರೈ ಹೇಳಿದ್ದಾರೆ.

ವಾರಣಾಸಿಯ ಕಾಶಿ ವಿಶ್ವನಾಥ ಮತ್ತು ಜಮ್ಮುವಿನ ವೈಷ್ಣೋದೇವಿ ದೇಗುಲದಂತಹ ಪ್ರಮುಖ ದೇವಾಲಯಗಳ ಮುಖ್ಯಸ್ಥರಿಗೆ ಆಮಂತ್ರಣಗಳನ್ನು ನೀಡಲಾಗಿದೆ. ಇದಲ್ಲದೆ, ವಿವಿಧ ಧಾರ್ಮಿಕ ಮತ್ತು ಸಾಂವಿಧಾನಿಕ ಸಂಸ್ಥೆಗಳ ಪ್ರತಿನಿಧಿಗಳನ್ನು ಸಹ ಆಹ್ವಾನಿಸಲಾಗಿದೆ. ಆಧ್ಯಾತ್ಮಿಕ ನಾಯಕ ದಲೈ ಲಾಮಾ, ಕೇರಳದ ಮಾತಾ ಅಮೃತಾನಂದಮಯಿ ಮತ್ತು ಯೋಗ ಗುರು ಬಾಬಾ ರಾಮ್‌ದೇವ್ ಸೇರಿದಂತೆ ಇತರ ಪ್ರಮುಖ ವ್ಯಕ್ತಿಗಳನ್ನು ಆಹ್ವಾನಿಸಲಾಗಿದೆ.

ನಟರಾದ ರಜನಿಕಾಂತ್, ಅಮಿತಾಭ್ ಬಚ್ಚನ್, ಮಾಧುರಿ ದೀಕ್ಷಿತ್, ರಾಮಾಯಣದ ನಟ ಅರುಣ್ ಗೋವಿಲ್, ಚಲನಚಿತ್ರ ನಿರ್ಮಾಪಕ ಮಧುರ್ ಭಂಡಾರ್ಕರ್, ಮತ್ತು ಪ್ರಮುಖ ಕೈಗಾರಿಕೋದ್ಯಮಿಗಳಾದ ಮುಖೇಶ್ ಅಂಬಾನಿ, ಅನಿಲ್ ಅಂಬಾನಿ, ಖ್ಯಾತ ಚಿತ್ರಕಲಾವಿದ ವಾಸುದೇವ್ ಕಾಮತ್, ಇಸ್ರೋ ನಿರ್ದೇಶಕ ನೀಲೇಶ್ ದೇಸಾಯಿ ಸಹ ಭಾಗವಹಿಸುವ ನಿರೀಕ್ಷೆಯಿದೆ.

ಸಾರ್ವಜನಿಕರಿಗೆ ಯಾವಾಗ ಮುಕ್ತವಾಗಲಿದೆ ರಾಮಮಂದಿರ?

ಜನವರಿ 24 ರಿಂದ ಮುಂದಿನ 48 ದಿನಗಳವರೆಗೆ ಹಿಂದೂ ಆಚರಣೆಗಳು ಮತ್ತು ಸಂಪ್ರದಾಯಗಳ ಪ್ರಕಾರ ‘ಮಂಡಲ ಪೂಜೆ’ ನಿಗದಿಪಡಿಸಲಾಗಿದೆ. ಜನವರಿ 23 ರಂದು ಭಕ್ತಾದಿಗಳಿಗೆ ದೇವಾಲಯವು ತೆರೆಯಲಿದೆ. ಅಯೋಧ್ಯೆಯ ಮೂರು ಸ್ಥಳಗಳಲ್ಲಿ ವ್ಯವಸ್ಥೆ ಮಾಡಲಾಗಿದ್ದು, ವಿವಿಧ ಮಠಗಳು, ದೇವಾಲಯಗಳು ಮತ್ತು ಭಕ್ತರಿಗೆ ಮನೆಗಳು ನೀಡುವ 600 ಕೊಠಡಿಗಳೊಂದಿಗೆ ಸಾಕಷ್ಟು ವಸತಿ ಸೌಕರ್ಯ ಒದಗಿಸುವ ಬಗ್ಗೆ ರೈ ಭರವಸೆ ನೀಡಿದ್ದಾರೆ.

ರಾಮ ಜನ್ಮಭೂಮಿ ಸಂಕೀರ್ಣದೊಳಗೆ ‘ರಾಮ್ ಕಥಾ ಕುಂಜ್’ ಕಾರಿಡಾರ್ ಅನ್ನು ನಿರ್ಮಿಸಲು ಯೋಜನೆಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಅಯೋಧ್ಯೆಯ ಅಧಿಕಾರಿಗಳು ತಿಳಿಸಿದ್ದಾರೆ. ಈ ಕಾರಿಡಾರ್ ಭಗವಾನ್ ರಾಮನ ಜೀವನದ 108 ಮಹತ್ವದ ಘಟನೆಗಳನ್ನು ವಿವರಿಸುವ ಕೋಷ್ಟಕವನ್ನು ಪ್ರದರ್ಶಿಸಲಿದೆ.

ರಾಮಜನ್ಮಭೂಮಿಗಾಗಿ ಶ್ರಮಿಸಿದ ಎಲ್.ಕೆ ಅಡ್ವಾಣಿ ಮತ್ತು ಮುರಳಿ ಮನೋಹರ್ ಜೋಷಿ ತಮ್ಮ ಅನಾರೋಗ್ಯದ ಕಾರಣದಿಂದ ಗೈರಾಗಲಿದ್ದಾರೆ ಎಂಬ ಸುದ್ದಿ ಕೆಲವು ಮೂಲಗಳಿಂದ ತಿಳಿದುಬಂದಿದ್ದು, ಸಹಜವಾಗಿ ಅವರ ಅಭಿಮಾನಿಗಳಿಗೆ ಬೇಸರ ತರಿಸಿದೆ.

Related post

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…
ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…

Leave a Reply

Your email address will not be published. Required fields are marked *