ಮತ್ತೆ ಗಡಿಯಲ್ಲಿ ಕ್ಯಾತೆ ತೆಗೆದ ಚೀನಾ, ಇತ್ತಂಡಗಳ ನಡುವೆ ಕದನ – ಸುಮಾರು 30 ಸೈನಿಕರಿಗೆ ಗಾಯ, ಕುತೂಹಲ ಕೆರಳಿಸಿದ ಗಡಿ ವಿವಾದ…!!
- ರಾಷ್ಟ್ರೀಯ ಸುದ್ದಿ
- December 12, 2022
- No Comment
- 238
ನ್ಯೂಸ್ ಆ್ಯರೋ : ಅರುಣಾಚಲ ಪ್ರದೇಶದ ತವಾಂಗ್ ಸೆಕ್ಟರ್ ನ ಎಲ್ಎಸಿ ಉದ್ದಕ್ಕೂ ಭಾರತ ಮತ್ತು ಚೀನಾ ಸೈನಿಕರು ಘರ್ಷಣೆ ನಡೆಸಿದ್ದು, ಘರ್ಷಣೆಯಲ್ಲಿ ಕೆಲವು ಭಾರತೀಯ ಸೈನಿಕರು ಗಾಯಗೊಂಡಿದ್ದರು ಎನ್ನಲಾಗಿದೆ. ಗಡಿಯಲ್ಲಿ ಭಾರತ ಮತ್ತು ಚೀನಾ ಯೋಧರ ನಡುವೆ ಮತ್ತೆ ಸಂಘರ್ಷ ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ.
ಡಿಸೆಂಬರ್ 9 ರಂದು ಅರುಣಾಚಲ ಪ್ರದೇಶದ ತವಾಂಗ್ ಸೆಕ್ಟರ್ನಲ್ಲಿ ಭಾರತೀಯ ಮತ್ತು ಚೀನಾದ ಸೈನಿಕರು ಲೈನ್ ಆಫ್ ಆಕ್ಚುವಲ್ ಕಂಟ್ರೋಲ್(ಎಲ್ಎಸಿ) ಉದ್ದಕ್ಕೂ ಘರ್ಷಣೆ ನಡೆಸಿದ್ದಾರೆ. ಈ ಘರ್ಷಣೆಯಲ್ಲಿ ಕೆಲವು ಭಾರತೀಯ ಸೈನಿಕರು ಗಾಯಗೊಂಡರು.
ಈ ಮುಖಾಮುಖಿಯಲ್ಲಿ ಎರಡು ಕಡೆಯ ಕೆಲವು ಸಿಬ್ಬಂದಿಗೆ ಸಣ್ಣಪುಟ್ಟ ಗಾಯಗಳಿಗೆ ಕಾರಣವಾಯಿತು. ಎರಡೂ ಕಡೆಯವರು ತಕ್ಷಣವೇ ಆ ಪ್ರದೇಶದಿಂದ ನಿರ್ಗಮಿಸಿದರು.
ಕಳೆದ ವರ್ಷ ಅಕ್ಟೋಬರ್ನಲ್ಲಿ ಇದೇ ಪ್ರದೇಶದಲ್ಲಿ ಭಾರತೀಯ ಪಡೆಗಳು ಚೀನಾ ಸೈನಿಕರನ್ನು ತಡೆದಿದ್ದವು. ಸುಮಾರು 200 ಪೀಪಲ್ಸ್ ಲಿಬರೇಶನ್ ಆರ್ಮಿ(ಪಿಎಲ್ಎ) ಸೈನಿಕರನ್ನು ಅರುಣಾಚಲ ಪ್ರದೇಶದ ನೈಜ ನಿಯಂತ್ರಣ ರೇಖೆ (ಎಲ್ಎಸಿ) ಬಳಿ ತಡೆಹಿಡಿಯಲಾಗಿತ್ತು.
ಉಭಯ ದೇಶಗಳ 30ಕ್ಕೂ ಹೆಚ್ಚು ಯೋಧರು ಗಾಯಗೊಂಡಿದ್ದಾರೆ ಎನ್ನಲಾಗಿದ್ದು, ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.