SUPPORT UCC : ಯುಸಿಸಿ ಬಗ್ಗೆ ಮುಸ್ಲಿಂ ಮಹಿಳೆಯರಿಂದ ಅಭಿಪ್ರಾಯ ಸಂಗ್ರಹ – ಬೆಂಬಲಿಸಿದ್ದು ಎಷ್ಟು ಶೇಕಡಾ ಮಂದಿ ಗೊತ್ತಾ?

SUPPORT UCC : ಯುಸಿಸಿ ಬಗ್ಗೆ ಮುಸ್ಲಿಂ ಮಹಿಳೆಯರಿಂದ ಅಭಿಪ್ರಾಯ ಸಂಗ್ರಹ – ಬೆಂಬಲಿಸಿದ್ದು ಎಷ್ಟು ಶೇಕಡಾ ಮಂದಿ ಗೊತ್ತಾ?

ನ್ಯೂಸ್ ಆ್ಯರೋ‌ : ಲೋಕಸಭೆ ಚುನಾವಣೆ ಪ್ರಚಾರದ ವೇಳೆ ಭರವಸೆ ನೀಡಿದ ದೇಶಾದ್ಯಂತ ಸಮಾನ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೊಳಿಸುವ ನಿಟ್ಟಿನಲ್ಲಿ ಕೇಂದ್ರ ಸರಕಾರ ಕಾರ್ಯ ಪ್ರವೃತ್ತವಾಗಿದೆ. ಮುಂಗಾರು ಸಂಸತ್ ಅಧಿವೇಶನದಲ್ಲಿ ಈ ಸಂಬಂಧ ವಿಧೇಯಕ ಮಂಡಿಸಿ ಅಂಗೀಕಾರ ಪಡೆಯಲು ಕೇಂದ್ರ ಉದ್ದೇಶಿಸಿದೆ. ಯುಸಿಸಿ ಬಗ್ಗೆ ಚರ್ಚೆ ನಡೆಯುತ್ತಿರುವ ಮಧ್ಯೆಯೇ ಖಾಸಗಿ ಸುದ್ದಿ ವಾಹಿನಿಯೊಂದು ದೇಶಾದ್ಯಂತ 25 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಸ್ಲಿಂ ಮಹಿಳೆಯರ ಅಭಿಪ್ರಾಯ ಸಂಗ್ರಹ ಮಾಡಿದ್ದು ಅಚ್ಚರಿಯ ಫಲಿತಾಂಶ ದೊರೆತಿದೆ.

ಶೇ. 67. 2 ಮಂದಿಯಿಂದ ಸಹಮತ
ಶೇ. 67.2ರಷ್ಟು ಮಂದಿ ಯುಸಿಸಿಗೆ ಸಹಮತ ವ್ಯಕ್ತಪಡಿಸಿದ್ದಾರೆ. ಮದುವೆ, ವಿಚ್ಛೇದನ, ದತ್ತು ಸ್ವೀಕಾರ ಮತ್ತು ಉತ್ತರಾಧಿಕಾರದಂತಹ ವೈಯಕ್ತಿಕ ವಿಷಯಗಳಿಗಾಗಿ ಎಲ್ಲಾ ಭಾರತೀಯರಿಗೆ ಸಾಮಾನ್ಯ ಕಾನೂನನ್ನು ಬೆಂಬಲಿಸುತ್ತೀರಾ? ಎಂದು ಪ್ರಶ್ನಿಸಲಾಗಿತ್ತು. ಸಮೀಕ್ಷೆಯಲ್ಲಿ ಪಾಲ್ಗೊಂಡ ಶೇ. 25.4 ಮಹಿಳೆಯರು ಯುಸಿಸಿಗೆ ವಿರೋಧ ವ್ಯಕ್ತಪಡಿಸಿದರೆ, ಶೇ. 7.4 ಮಂದಿ ಗೊತ್ತಿಲ್ಲ ಎಂದಿದ್ದಾರೆ.

ಸಮೀಕ್ಷೆಯಲ್ಲಿ ಪಾಲ್ಗೊಂಡ 8,035 ಮಹಿಳೆಯರ ಪೈಕಿ 6,320 ಮಂದಿ ವೈವಾಹಿಕ ವಯೋಮಿತಿಯನ್ನು ಪುರುಷರು ಮತ್ತು ಮಹಿಳೆಯರಿಗೆ ಸಮಾನವಾಗಿ 21 ವರ್ಷಕ್ಕೆ ನಿಗದಿ ಪಡಿಸಬೇಕು ಎಂದು ಹೇಳಿದ್ದಾರೆ. 18ರಿಂದ 65 ವರ್ಷ ವಯೋಮಾನದ ಮುಸ್ಲಿಂ ಮಹಿಳೆಯರನ್ನು ಸಮೀಕ್ಷೆಗೆ ಒಳಪಡಿಸಲಾಗಿತ್ತು.

ಮದುವೆ, ವಿಚ್ಛೇದನ ಸೇರಿದಂತೆ ಹಲವು ವಿಚಾರಗಳಲ್ಲಿ ಎಲ್ಲಾ ಧರ್ಮಗಳಿಗೆ ಸಮಾನವಾಗಿ ಅನ್ವಯಿಸುವ ಕಾನೂನು ರೂಪಿಸಲು ಕೇಂದ್ರ ಸರಕಾರ ಮುಂದಾಗಿದೆ. ಕಾನೂನು ಆಯೋಗವು ಯುಸಿಸಿ ಅನುಷ್ಠಾನದ ಬಗ್ಗೆ ವಿವಿಧ ವರ್ಗದ ಜನರು ಮತ್ತು ಸಂಸ್ಥೆಗಳಿಂದ ಅಭಿಪ್ರಾಯ ಸಂಗ್ರಹಿಸುತ್ತಿದೆ. ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಮತ್ತು ಇತರ ಮುಸ್ಲಿಂ ಸಂಘಟನೆಗಳು ಯುಸಿಸಿಗೆ ವಿರೋಧ ವ್ಯಕ್ತಪಡಿಸಿವೆ.

Related post

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ ಮದುವೆ

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ…

ನ್ಯೂಸ್ ಆರೋ: ಬರೋಬ್ಬರಿ 25 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ಮಂತ್ರ ಮಾಂಗಲ್ಯ ಮೂಲಕ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ತುಮಕೂರಲ್ಲಿ ನಡೆದಿದೆ. ಹೌದು ಜನಾಂದೋಲನದಲ್ಲಿ…
ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು! ಏನಿದು ವಿಷಯ?

ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು!…

ನ್ಯೂಸ್ ಆರೋ: ಎಷ್ಟೋ ಬಾರಿ ನಾವು ಈ ಹೊಟೇಲ್ ಗಳಿಗೆ ಹೋದಾಗ, ಅಲ್ಲಿ ಜನರು ವೆಜ್ ಮಂಚೂರಿಯನ್ನು ಆರ್ಡರ್ ಮಾಡಿದರೆ ಚಿಕನ್ ಮಂಚೂರಿ ತಂದು ಟೇಬಲ್ ಮೇಲೆ ಇಟ್ಟಿರುವ…
ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ನ್ಯೂಸ್ ಆರೋ: ಬಾಲಿವುಡ್‌ನ ಖ್ಯಾತ ನಟಿ ಅನುಷ್ಕಾ ಶರ್ಮಾ ಹಾಗೂ ಟೀಂ ಇಂಡಿಯಾದ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರ ಪರಿಚಯ ಯಾರಿಗೂ ಅಗತ್ಯವಿಲ್ಲ. ಇತ್ತೀಚೆಗಷ್ಟೇ ಅಂದರೆ ಮೇ…

Leave a Reply

Your email address will not be published. Required fields are marked *