
ಸನಾತನ ಧರ್ಮದ ಕುರಿತು ವಿವಾದಾತ್ಮಕ ಹೇಳಿಕೆ ವಿಚಾರ – ಉದಯನಿಧಿ ಸ್ಟಾಲಿನ್ ಹೇಳಿಕೆ ಬೆನ್ನಲ್ಲೇ ನಟ ಪ್ರಕಾಶ್ ರಾಜ್ ವ್ಯಂಗ್ಯ, ವಿವಾದಿತ ನಟ ಹೇಳಿದ್ದೇನು?
- ರಾಷ್ಟ್ರೀಯ ಸುದ್ದಿ
- September 4, 2023
- No Comment
- 97
ನ್ಯೂಸ್ ಆ್ಯರೋ : ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ವಿವಾದಾತ್ಮಕ ಹೇಳಿಕೆ ನೀಡಿದ ಬೆನ್ನಲ್ಲೇ ಬಹುಭಾಷಾ ನಟ ಪ್ರಕಾಶ್ ರಾಜ್ ಕೂಡಾ ಸನಾತನ ಧರ್ಮದ ಬಗ್ಗೆ ವ್ಯಂಗ್ಯವಾಡಿದ್ದಾರೆ.
ಇನ್ನೂ ಈ ಹಿಂದೆ ತಮಿಳುನಾಡು ಸರ್ಕಾರದ ಕ್ರೀಡಾ ಮತ್ತು ಯುವಜನ ವ್ಯವಹಾರಗಳ ಸಚಿವ ಉದಯನಿಧಿ ಅವರು ಸಮಾವೇಶವೊಂದರಲ್ಲಿ ಮಾತನಾಡಿ, ಸನಾತನ ಧರ್ಮದ ವಿರುದ್ಧ ವಾಗ್ದಾಳಿ ನಡೆಸಿದರು. ಕೆಲವು ವಿಷಯಗಳನ್ನು ವಿರೋಧಿಸಲು ಸಾಧ್ಯವಿಲ್ಲ, ಅವುಗಳನ್ನು ರದ್ದುಗೊಳಿಸಬೇಕು. ನಾವು ಡೆಂಗ್ಯೂವನ್ನು ವಿರೋಧಿಸಲು ಸಾಧ್ಯವಿಲ್ಲ, ಸೊಳ್ಳೆಗಳು, ಮಲೇರಿಯಾ ಅಥವಾ ಕರೋನಾ, ನಾವು ಅವುಗಳನ್ನು ನಿರ್ಮೂಲನೆ ಮಾಡಬೇಕು. ಅದೇ ರೀತಿಯಲ್ಲಿ ನಾವು ಸನಾತನವನ್ನು (ಸನಾತನ ಧರ್ಮ) ನಿರ್ಮೂಲನೆ ಮಾಡಬೇಕು, ಕೇವಲ ಸನಾತನವನ್ನು ವಿರೋಧಿಸುವ ಬದಲು ಅದನ್ನು ನಿರ್ಮೂಲನೆ ಮಾಡಬೇಕು ಎಂದು ಹೇಳಿದ್ದರು.
ಉದಯನಿಧಿ ನೀಡಿದ ಹೇಳಿಕೆ ಧಾರ್ಮಿಕ ಸಂಘರ್ಷಕ್ಕೆ ಕಾರಣವಾಗಿದ್ದು, ಸಂಘ ಪರಿವಾರದವರು ಭಾರೀ ವಿರೋಧ ವ್ಯಕ್ತಪಡಿಸಿದ್ದಾರೆ. ರಾಷ್ಟ್ರ ರಾಜಕಾರಣದಲ್ಲೂ ವಿರೋಧ ವ್ಯಕ್ತವಾಗಿದೆ. ಇತ್ತ, ತಾನು ನೀಡಿದ ಹೇಳಿಕೆಗೆ ಬದ್ಧ ಅಂತ ಉದಯನಿಧಿ ಸಾರಿದ್ದಾರೆ. ಅಲ್ಲದೆ, ಯಾವುದೇ ರೀತಿಯ ಸವಾಲಿಗೂ ಸಿದ್ಧ ಅಂತ ಘೋಷಿಸಿದ್ದಾರೆ.
ಪ್ರಕಾಶ್ ರಾಜ್ ನೀಡಿದ ಹೇಳಿಕೆಯಲ್ಲಿ ಏನಿದೆ?
ನಟ ಪ್ರಕಾಶ್ ರಾಜ್ ಕೂಡ ಸನಾತನವನ್ನು ವ್ಯಂಗ್ಯವಾಗಿ ತನಾತನಿ ಎಂದಿದ್ದು ಹಿಂದೂಗಳು ತನಾತನಿಗಳಲ್ಲ, ತನಾತನಿಸ್ ಆಗಿದ್ದಾರೆ. ಸನಾತನಿಗಳು ಮಾನವ ವಿರೋಧಿಗಳು ಎಂದಿದ್ದಾರೆ. ಸಚಿವ ಉದಯನಿಧಿ ಸ್ಟಾಲಿನ್ ಹಾಗೂ ನಟ ಪ್ರಕಾಶ್ ರಾಜ್ ಅವರ ಈ ಹೇಳಿಕೆ ಭಾರೀ ವಿರೋಧವನ್ನು ಕಟ್ಟಿಕೊಂಡಿದೆ.
ಮಾತಿಗೆ ಬದ್ಧ, ಸವಾಲಿಗೆ ಸಿದ್ಧವೆಂದ ಉದಯನಿಧಿ:
ಸನಾತನ ಜಾತಿ ಮತ್ತು ಧರ್ಮದ ಹೆಸರಿನಲ್ಲಿ ಜನರನ್ನು ವಿಭಜಿಸುತ್ತದೆ. ಇದರ ನಿರ್ಮೂಲನೆ ಮಾಡುವುದರ ಮೂಲಕ ಮಾನವೀಯತೆ ಮತ್ತು ಮಾನವ ಸಮಾನತೆಯನ್ನ ಎತ್ತಿಹಿಡಿಯಬೇಕು ಎಂದು ಹೇಳಿಕೆ ನೀಡಿದ್ದೆ. ಸನಾತನಿ ಜನರ ಮಾರಣ ಹೋಮಕ್ಕೆ ಕರೆ ನೀಡಿಲ್ಲ. ಈ ಬಗ್ಗೆ ಸುಳ್ಳು ಸುದ್ದಿ ಹರಡಲಾಗುತ್ತಿದೆ. ಸನಾತನ ಧರ್ಮದ ಬಗ್ಗೆ ನಾನು ಹೇಳಿದ ಪ್ರತಿಯೊಂದು ಮಾತಿಗೂ ಬದ್ಧವಾಗಿದ್ದೇನೆ. ಆ ಧರ್ಮದಿಂದ ತುಳಿತಕ್ಕೊಳಗಾದವರ ಪರವಾಗಿ ಮಾತನಾಡಿದ್ದೇನೆ. ಅದರಿಂದ ಸಮಾಜದ ಮೇಲಾದ ದುಷ್ಪರಿಣಾಮಗಳ ಬಗ್ಗೆ ಹೋರಾಟ ನಡೆಸಿದ ಪೆರಿಯಾರ್ ಮತ್ತು ಅಂಬೇಡ್ಕರ್ ಬರಹಗಳನ್ನು ಯಾವುದೇ ವೇದಿಕೆಯಲ್ಲಿ ಪ್ರಸ್ತುತಪಡಿಸಲು ನಾನು ಸಿದ್ಧ ಎಂದು ಪ್ರತಿವಾದಿಸಿದ್ದರು.
ರಾಷ್ಟ್ರ ರಾಜಕಾರಣದಲ್ಲೂ ಉದಯನಿಧಿ ಅವರ ಹೇಳಿಕೆ ಸದ್ದು ಮಾಡಿದೆ. ರಾಜಸ್ಥಾನದಲ್ಲಿ ಪ್ರತಿಕ್ರಿಯಿಸಿದ ಗೃಹ ಸಚಿವ ಅಮಿತ್ ಶಾ, ಮತಕ್ಕೋಸ್ಕರ ನಮ್ಮ ಸಂಸ್ಕೃತಿಯನ್ನು ಅವಮಾನಿಸಿದ್ದಾರೆ ಅಂತ ಕಿಡಿಕಾರಿದ್ದಾರೆ.