ಮೋಚಾ ಚಂಡಮಾರುತ ಹಿನ್ನೆಲೆ – ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ

ಮೋಚಾ ಚಂಡಮಾರುತ ಹಿನ್ನೆಲೆ – ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ

ನ್ಯೂಸ್ ಆ್ಯರೋ : ಅಲ್ಲಲ್ಲಿ ಮುಂಗಾರು ಪೂರ್ವ ಮಳೆ ಆರಂಭವಾಗಿದೆ. ಈ ಮಧ್ಯೆ ಮೋಚಾ ಚಂಡಮಾರುತ ರೂಪುಗೊಂಡಿದ್ದು, ಇಂದು(ಮೇ 6) ರಾಜ್ಯದಲ್ಲಿ ಗುಡುಗು, ಮಿಂಚು ಸಹಿತ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ನಾಳೆಯವರೆಗೆ ದೇಶದ ಹಲವು ಭಾಗಗಳಲ್ಲಿ ಮಳೆ ಅಥವಾ ಗುಡುಗು ಸಹಿತ ಮಳೆ ಸುರಿಯಲಿದೆ. ಮಾತ್ರವಲ್ಲ ವಾಯುವ್ಯ ಭಾರತದಲ್ಲಿ ಮಿಂಚು ಮತ್ತು ಬಿರುಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಎಚ್ಚರಿಸಿದೆ.

ಕರಾವಳಿಯಲ್ಲಿ ಪರಿಸ್ಥಿತಿ ಹೇಗಿದೆ?

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯಲ್ಲಿಯೂ ಮಿಂಚು, ಗುಡುಗು ಇರಲಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿಯೂ ಇದೇ ಪರಿಸ್ಥಿತಿ ಕಂಡುಬರಲಿದೆ ಎಂದು ಹವಾಮಾನ ಇಲಾಖೆ ಊಹಿಸಿದೆ.

ಇನ್ನು ಉತ್ತರ ಕರ್ನಾಟಕದ ಭಾಗಗಳಾದ ಯಾದಗಿರಿ, ಕೊಪ್ಪಳದಲ್ಲಿ ಒಣಹವೆ ಮುಂದುವರಿಯಲಿದೆ. ಗರಿಷ್ಠ ಉಷ್ಣಾಂಶವು ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಸಾಮಾನ್ಯಕ್ಕಿಂತ 3-4 ಡಿಗ್ರಿ ಸೆಲ್ಶಿಯಸ್ ಕಡಿಮೆಯಾಗುವ ಸಂಭವವಿದೆ.

Related post

ದಿನ‌ ಭವಿಷ್ಯ 29-03-2024 ಶುಕ್ರವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 29-03-2024 ಶುಕ್ರವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ದೈಹಿಕ ರಚನೆಯನ್ನು ಕಾಯ್ದುಕೊಳ್ಳಲು ನೆರವಾಗುವ ಕೆಲವು ಕ್ರೀಡಾ ಚಟುವಟಿಕೆಗಳನ್ನು ನೀವು ಇಂದು ಆನಂದಿಸಬಹುದು. ನೀವು ದೀರ್ಘಕಾಲದ ಆಧಾರದ ಮೇಲೆ ಹೂಡಿಕೆ ಮಾಡಿದಲ್ಲಿ ಗಣನೀಯ ಲಾಭ ಮಾಡುತ್ತೀರಿ. ನೀವು…
ದ.ಕ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಅವರಿಂದ ಭರ್ಜರಿ ಪ್ರಚಾರ – ಅತೃಪ್ತ ಬಿಲ್ಲವರ ವೋಟ್ ಬ್ಯಾಂಕ್ ಸೆಳೆಯಲು ಚಿಂತನೆ

ದ.ಕ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಅವರಿಂದ ಭರ್ಜರಿ ಪ್ರಚಾರ…

ನ್ಯೂಸ್ ಆ್ಯರೋ : ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪರ ಚುನಾವಣಾ ಪ್ರಚಾರ ಆರಂಭಕ್ಕೂ‌ ಮೊದಲೇ ಬಿರುಸುಗೊಂಡಿದ್ದು, ಬಿಲ್ಲವ ಸಮಯದಾಯವನ್ನು ಒಗ್ಗೂಡಿಸುವ…
ದಿನ‌ ಭವಿಷ್ಯ 27-03-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 27-03-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷಅತ್ಯಂತ ಪ್ರಭಾವಿ ಜನರ ಬೆಂಬಲ ನಿಮ್ಮ ನೈತಿಕ ಸ್ಥೈರ್ಯವನ್ನು ಹೆಚ್ಚಿಸುತ್ತದೆ. ಇಂದು ನಿಮ್ಮ ಹಣವನ್ನು ಅನೇಕ ವಿಷಯಗಳಿಗೆ ಖರ್ಚು ಮಾಡಬಹುದು, ನೀವು ಇಂದು ಉತ್ತಮ ಬಜೆಟ್ ಅನ್ನು ಯೋಜಿಸಬೇಕಾಗಿದೆ,…

Leave a Reply

Your email address will not be published. Required fields are marked *