ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಮನೆ ಮೇಲೆ ಇಡಿ ದಾಳಿ – ಇಂದೇ ಬಂಧನ ಸಾಧ್ಯತೆ, ಆತಂಕ ವ್ಯಕ್ತಪಡಿಸಿದ ಎಎಪಿ

ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಮನೆ ಮೇಲೆ ಇಡಿ ದಾಳಿ – ಇಂದೇ ಬಂಧನ ಸಾಧ್ಯತೆ, ಆತಂಕ ವ್ಯಕ್ತಪಡಿಸಿದ ಎಎಪಿ

ನ್ಯೂಸ್ ಆ್ಯರೋ : ಹಗರಣವೊಂದಕ್ಕೆ ಸಂಬಂಧಿಸಿದಂತೆ ಇಡಿ ಜಾರಿಗೊಳಿಸಿದ್ದ ಮೂರು ಸಮನ್ಸ್ ಗಳಿಗೆ ಹಾಜರಾಗದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಇಂದು ಬಂಧಿಸುವ ಸಾಧ್ಯತೆ ಇದೆ.

ಬಂಧನದ ಹೇಳಿಕೆಯನ್ನು ಸ್ವತಃ ಆಮ್ ಆದ್ಮಿ ಪಕ್ಷವೇ ಮಾಡಿದೆ. ಸಿಎಂ ಕೇಜ್ರಿವಾಲ್ ಬಂಧನದ ಸಾಧ್ಯತೆಯ ದೃಷ್ಟಿಯಿಂದ, ಎಎಪಿ ಪ್ರಧಾನ ಕಚೇರಿಯ ಹೊರಗೆ ಕಾರ್ಯಕರ್ತರ ಭಾರೀ ಜಮಾವಣೆಯಾಗಿದೆ.

ಮದ್ಯ ಹಗರಣದಲ್ಲಿ ಜಾರಿ ನಿರ್ದೇಶನಾಲಯವು ಕೇಜ್ರಿವಾಲ್ ಅವರಿಗೆ ಮೂರು ಸಮನ್ಸ್ಗಳನ್ನು ಹೊರಡಿಸಿದೆ. ಅಬಕಾರಿ ನೀತಿ ಪ್ರಕರಣ ಸಂಬಂಧ 2023ರ ಡಿಸೆಂಬರ್ 22ರಂದು ಇಡಿ ವಿಚಾರಣೆಗೆ ಹಾಜರಾಗುವಂತೆ ಮೂರನೇ ಬಾರಿ ಸಮನ್ಸ್‌ ಜಾರಿ ಮಾಡಿತ್ತು. ಆದರೆ ಇಲ್ಲಿಯವರೆಗೆ ದೆಹಲಿ ಸಿಎಂ ಇಡಿ ಮುಂದೆ ಹಾಜರಾಗಿಲ್ಲ. ಆದಾಗ್ಯೂ, ಎಲ್ಲಾ ಮೂರು ಸಂದರ್ಭಗಳಲ್ಲಿ, ಕೇಜ್ರಿವಾಲ್ ಇಡಿಗೆ ಲಿಖಿತ ಉತ್ತರಗಳನ್ನು ಕಳುಹಿಸಿದ್ದಾರೆ ಮತ್ತು ತನಿಖೆಗೆ ಸಹಕರಿಸುವುದಾಗಿ ಹೇಳಿದ್ದಾರೆ.

ಅರವಿಂದ್ ಕೇಜ್ರಿವಾಲ್ ಅವರ ನಿವಾಸದ ಮೇಲೆ ಇಡಿ ಇಂದು ದಾಳಿ ನಡೆಸಿ ಅವರನ್ನು ಬಂಧಿಸಬಹುದು ಎಂದು ಎಎಪಿ ನಾಯಕರು ಹೇಳಿದ್ದಾರೆ. ದೆಹಲಿ ಸಚಿವರಾದ ಅತಿಶಿ, ಸೌರಭ್ ಭಾರದ್ವಾಜ್ ಮತ್ತು ರಾಜ್ಯಸಭಾ ಸಂಸದ ಸಂದೀಪ್ ಪಾಠಕ್ ಅವರು ಇಂದು ಅರವಿಂದ್ ಕೇಜ್ರಿವಾಲ್ ಅವರ ಮನೆಯ ಮೇಲೆ ಇಡಿ ದಾಳಿ ನಡೆಸಬಹುದು ಎಂದು ಎಎಪಿ ಮಾಧ್ಯಮ ಪ್ಲಾಟ್ಫಾರ್ಮ್ ಎಕ್ಸ್ ನಲ್ಲಿ ಹೇಳಿದ್ದಾರೆ.

ಆಮ್‌ ಆದ್ಮಿ ಪಕ್ಷ ಹೇಳಿಕೆಯನ್ನು ಬಿಡುಗಡೆ ಮಾಡಿದ್ದು , ಇಡಿ ನೋಟೀಸ್ ಕಾನೂನುಬಾಹಿರ ಮತ್ತು ದುರುದ್ದೇಶದಿಂದ ಕೂಡಿದೆ ಎಂದು ಹೇಳಿದ್ದಾರೆ. ಜಾರಿ ನಿರ್ದೇಶನಾಲಯದ ವಿಚಾರಣೆಗೆ ಸಹಕರಿಸಲು ಅರವಿಂದ ಕೇಜ್ರಿವಾಲ್ ಸಿದ್ಧರಿದ್ದಾರೆ, ಆದರೆ ಅವರನ್ನು ಬಂಧಿಸುವ ಉದ್ದೇಶದಿಂದ ನೊಟೀಸ್‌ ನೀಡಲಾಗಿದೆ ಎಂದು ಆರೋಪಿಸಲಾಗಿದೆ.

ಜೊತೆಗೆ ಅರವಿಂದ ಕೇಜ್ರಿವಾಲ್‌ ಕೂಡ ಇಡಿಗೆ ಪತ್ರ ಬರೆದಿದ್ದು ಒಂದಷ್ಟು ಪ್ರಶ್ನೆಗಳನ್ನು ಮುಂದಿಟ್ಟಿದ್ದಾರೆ.
‘ನನ್ನ ಹಿಂದಿನ ಪತ್ರಕ್ಕೆ ಯಾವುದೇ ಪ್ರತಿಕ್ರಿಯೆ ನೀಡದೇ ಮತ್ತೆ ಒಂದೇ ರೀತಿಯ ನೊಟೀಸ್‌ ನೀಡಿದ್ದಕ್ಕೆ ಕಾರಣ ನೀಡಿ, ಜೊತೆಗೆ ನೊಟೀಸ್‌ ನನಗೆ ಸಿಗುವ ಮೊದಲೇ ಮಾಧ್ಯಮಕ್ಕೆ ತಿಳಿಯುತ್ತಿರುವುದು ಅನುಮಾನ ಹುಟ್ಟಿಸಿದೆ ಎಂದು ಅವರು ಬರೆದಿದ್ದಾರೆ ಜೊತೆಗೆ ರಾಜ್ಯಸಭಾ ಚುನಾವಣೆ ಮತ್ತು ಗಣರಾಜ್ಯೋತ್ಸವದ ಹಿನ್ನೆಲೆ ಅನೇಕ ಕಾರ್ಯಕ್ರಮಗಳಲ್ಲಿ ಬ್ಯುಸಿಯಾಗಿದ್ದೇನೆ’ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

Related post

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…
ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…

Leave a Reply

Your email address will not be published. Required fields are marked *