ಸುಪ್ರೀಂಕೋರ್ಟ್‌ನ ನ್ಯಾಯಮೂರ್ತಿಯಾಗಿ ದೀಪಂಕರ್ ಪ್ರಮಾಣ ವಚನ: ಬಾಂಬೆ ಹೈಕೋರ್ಟ್‌ನಲ್ಲಿ ಪ್ರಮುಖ ತೀರ್ಪು ನೀಡಿ ಗಮನ ಸೆಳೆದಿದ್ರು ದತ್ತಾ

ಸುಪ್ರೀಂಕೋರ್ಟ್‌ನ ನ್ಯಾಯಮೂರ್ತಿಯಾಗಿ ದೀಪಂಕರ್ ಪ್ರಮಾಣ ವಚನ: ಬಾಂಬೆ ಹೈಕೋರ್ಟ್‌ನಲ್ಲಿ ಪ್ರಮುಖ ತೀರ್ಪು ನೀಡಿ ಗಮನ ಸೆಳೆದಿದ್ರು ದತ್ತಾ

ನ್ಯೂಸ್ ಆ್ಯರೋ: ಸುಪ್ರೀಂಕೋರ್ಟ್‌ನ ನ್ಯಾಯಮೂರ್ತಿಯಾಗಿ ಇಂದು ದೀಪಂಕರ್‌ ದತ್ತಾ ಅವರು ಪ್ರಮಾಣವಚನ ಸ್ವೀಕರಿಸಿದರು. ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್‌ ಅವರು ನ್ಯಾಯಮೂರ್ತಿ ದೀಪಂಕರ್‌ ದತ್ತಾ ಅವರಿಗೆ ಪ್ರಮಾಣವಚನ ಬೋಧಿಸಿದರು.

ದೀಪಂಕರ್‌ ದತ್ತ ಅವರ ಹಿನ್ನೆಲೆ: ಬಾಂಬೆ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿದ್ದ ದತ್ತಾ ಅವರು ಕೊರೊನಾ ಸಂದರ್ಭದಲ್ಲಿ ಪ್ರಮಾಣ ವಚನ ಸ್ವೀಕರಿಸುವ ಸಲುವಾಗಿ ಸುಮಾರು 2 ಸಾವಿರ ಕಿ.ಮೀ. ದೂರವನ್ನು ತಾವೇ ವಾಹನ ಚಲಾಯಿಸಿ ತಲುಪಿದ್ದರು ಎಂದು ಸುದ್ದಿಯಾಗಿತ್ತು.

ಎರಡೂವರೆ ವರ್ಷದ ಬಳಿಕ ದತ್ತಾ ಅವರು ಇದೀಗ ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿಯಾಗಿ ನೇಮಕಗೊಂಡಿದ್ದಾರೆ. ಸೆಪ್ಟೆಂಬರ್ 26ರಂದು ಬಂದ ಅಧಿಸೂಚನೆಯಂತೆ ಇಂದು ಪ್ರಮಾಣ ವಚನ ಸ್ವೀಕರಿಸಿದರು.

ವೈಯ್ಯಕ್ತಿಕ ಹಿನ್ನೆಲೆ: ನ್ಯಾಯಮೂರ್ತಿ ದತ್ತಾ ಅವರು ಕೊಲ್ಕೊತ್ತಾ ಹೈಕೋರ್ಟ್‌ನ ಮಾಜಿ ನ್ಯಾಯಾಧೀಶರಾಗಿದ್ದ ದಿ. ಸಲೀಲ್‌ ಕುಮಾರ್‌ ದತ್ತಾ ಅವರ ಪುತ್ರ. ಸುಪ್ರೀಂ ಕೋರ್ಟ್‌ನ ನ್ಯಾಯಾಧೀಶರಾಗಿದ್ದ ನ್ಯಾಯಮೂರ್ತಿ ಅಮಿತವ್‌ ರಾಯ್‌ ಇವರ ಸೋದರ ಮಾವ. 1989ರಲ್ಲಿ ಕಲ್ಕತ್ತಾ ವಿಶ್ವವಿದ್ಯಾಲಯದಿಂದ ಕಾನೂನು ಪದವಿ ಪಡೆದ ಬಳಿಕ 1989ರಲ್ಲಿ ವಕೀಲ ವೃತ್ತಿ ಆರಂಭಿಸಿದ್ದರು. 2006ರ ಜೂನ್‌ ತಿಂಗಳಿನಿಂದ ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಾಧೀಶರಾಗಿ ಸೇವೆ ಸಲ್ಲಿಸಿದರು. 2020ರ ಏಪ್ರಿಲ್‌ನಲ್ಲಿ ಬಾಂಬೆ ಹೈಕೋರ್ಟ್‌ಗೆ ನೇಮಕಗೊಂಡರು.

ದತ್ತಾ ನೀಡಿದ ಗಮರ್ನಾಹ ತೀರ್ಪುಗಳು:

ಬಾಂಬೆ ಹೈಕೋರ್ಟ್‌ನಲ್ಲಿ ಸಿವಿಲ್‌ ಮತ್ತು ಕ್ರಿಮಿನಲ್‌ ಪಿಐಎಲ್‌ಗಳು, ಮೂಲಸೌಕರ್ಯ ಮತ್ತು ಪರಿಸರಕ್ಕೆ ಸಂಬಂಧಪಟ್ಟ ಅರ್ಜಿಗಳಿಗೆ ಸಂಬಂಧಪಟ್ಟಂತೆ ದತ್ತಾ ಅವರು ಗಮನಾರ್ಹ ತೀರ್ಪುಗಳನ್ನು ನೀಡಿದ್ದಾರೆ. ಆಡಳಿತಾತ್ಮಕವಾಗಿ ಬಾಂದ್ರಾ ಕುರ್ಲಾದ 30 ಎಕರೆ ಜಾಗದಲ್ಲಿ ಹೈಕೋರ್ಟ್‌ ಕಟ್ಟಡಕ್ಕಾಗಿ ಇವರು ಮಾಡಿದ ಪ್ರಯತ್ನವೂ ಒಂದಾಗಿದೆ.

ಕ್ರಿಮಿನಲ್ ತನಿಖೆಯಲ್ಲಿ ಮಾಧ್ಯಮ ವಿಚಾರಣೆ ಕುರಿತು ತೀರ್ಪು:

ಆತ್ಮಹತ್ಯೆ ಪ್ರಕರಣಗಳನ್ನು ವರದಿ ಮಾಡುವಾಗ ಸುದ್ದಿ ಮಾಧ್ಯಮಗಳು ಸಂಯಮ ವಹಿಸಬೇಕು ಎಂದು ಬಾಂಬೆ ಹೈಕೋರ್ಟ್‌ ತಾಕೀತು ಮಾಡಿತ್ತು. ಮಾಧ್ಯಮ ವಿಚಾರಣೆಯು ನ್ಯಾಯಾಂಗದ ಕಾರ್ಯನಿರ್ವಹಣೆಯಲ್ಲಿನ ಹಸ್ತಕ್ಷೇಪ ಮತ್ತು ಅಡಚಣೆಗೆ ಕಾರಣವಾಗುತ್ತದೆ ಎಂದು ದತ್ತಾ ಅವರು ಅಭಿಪ್ರಾಯಪಟ್ಟಿದ್ದರು. ಮುಂಬೈನಲ್ಲಿ ಆತ್ಮಹತ್ಯೆ ಮಾಡಿಕೊಂಡ ಬಾಲಿವುಡ್‌ ನಟ ಸುಶಾಂತ್‌ ಸಿಂಗ್‌ ರಜಪೂತ್‌ ಪ್ರಕರಣಕ್ಕೆ ಸಂಬಂಧಪಟ್ಟ ಮಾಧ್ಯಮ ವರದಿಗಳ ಕುರಿತು ಇವರ ಪೀಠವು ಈ ಅಭಿಪ್ರಾಯ ವ್ಯಕ್ತಪಡಿಸಿತ್ತು.

ಹೈಕೋರ್ಟ್‌ ನ್ಯಾಯಮೂರ್ತಿಗಳಾಗಿದ್ದ ಸಂದರ್ಭ ಪ್ರಮುಖ ತೀರ್ಪುಗಳನ್ನು ನೀಡಿ ಗಮನ ಸೆಳೆದಿದ್ದರು.

Related post

ದಿನ‌ ಭವಿಷ್ಯ 15-04-2024 ಸೋಮವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 15-04-2024 ಸೋಮವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ದಯಾಳು ಪ್ರಕೃತಿ ಇಂದು ಅನೇಕ ಸಂತೋಷದ ಕ್ಷಣಗಳನ್ನು ತರುತ್ತದೆ. ಲೋನ್ ತೆಗೆದುಕೊಂಡಿರುವ ಜನರಿಗೆ ಲೋನ್ ನ ಮೊತ್ತವನ್ನು ಮರುಪಾವತಿಸುವಲ್ಲಿ ತೊಂದರೆಗಳು ಉಂಟಾಗಬಹುದು. ಮನೆಯಲ್ಲಿ ನಿಮ್ಮ ಮಕ್ಕಳು ಅತಿಶಯೋಕ್ತಿಯಿರುವ…
ದಿನ‌ ಭವಿಷ್ಯ 14-04-2024 ಭಾನುವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 14-04-2024 ಭಾನುವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನೀವು ಧೀರ್ಘಕಾಲೀನ ಅನಾರೋಗ್ಯದಿಂದ ಬಳಲಬಹುದು. ಇಂದು ಯಾವುದೇ ಸಹಾಯವಿಲ್ಲದೆ, ನೀವು ಹಣವನ್ನು ಗಳಿಸುವಲ್ಲಿ ಸಾಮರ್ತ್ಯರಾಗಿರುತ್ತೀರಿ. ಯಾರಾದರೂ ನಿಮಗೆ ಹಾನಿ ಮಾಡಲು ಪ್ರಯತ್ನಿಸಬಹುದು – ಬಲವಾದ ಶಕ್ತಿಗಳು ನಿಮ್ಮ ವಿರುದ್ಧ…
ರಾಮೇಶ್ವರ ಕೆಫೆ ಬಾಂಬ್ ಸ್ಫೋಟ ಪ್ರಕರಣ – ಇಬ್ಬರು ಬಂಧಿತ ಉಗ್ರರನ್ನು ಬೆಂಗಳೂರಿಗೆ ಕರೆತಂದ NIA ಅಧಿಕಾರಿಗಳು

ರಾಮೇಶ್ವರ ಕೆಫೆ ಬಾಂಬ್ ಸ್ಫೋಟ ಪ್ರಕರಣ – ಇಬ್ಬರು ಬಂಧಿತ ಉಗ್ರರನ್ನು…

ನ್ಯೂಸ್ ಆ್ಯರೋ : ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಉಗ್ರರನ್ನು NIA ಅಧಿಕಾರಿಗಳು ಬೆಂಗಳೂರಿಗೆ ಕರೆತಂದಿದ್ದಾರೆ. ಅಬ್ದುಲ್ ಮತೀನ್ ತಾಹಾ ಹಾಗೂ ಮುಜಾವಿರ್ ಹುಸೇನ್…

Leave a Reply

Your email address will not be published. Required fields are marked *