ಹಸುವಿನ ಹೊಟ್ಟೆಯಲ್ಲಿತ್ತು ಬರೋಬ್ಬರಿ 30 ಕೆಜಿ ಪ್ಲಾಸ್ಟಿಕ್ – ಹೊರ ತೆಗೆದು ಪ್ರಾಣ ಕಾಪಾಡಿದ ವೈದ್ಯರು

ಹಸುವಿನ ಹೊಟ್ಟೆಯಲ್ಲಿತ್ತು ಬರೋಬ್ಬರಿ 30 ಕೆಜಿ ಪ್ಲಾಸ್ಟಿಕ್ – ಹೊರ ತೆಗೆದು ಪ್ರಾಣ ಕಾಪಾಡಿದ ವೈದ್ಯರು

ನ್ಯೂಸ್ ಆ್ಯರೋ‌ : ಪ್ಲಾಸ್ಟಿಕ್ ಪರಿಸರಕ್ಕೆ, ಜೀವಜಾಲಕ್ಕೆ ಎಷ್ಟು ಹಾನಿಕಾರಕ ಎನ್ನುವುದು ಎಲ್ಲರಿಗೂ ಗೊತ್ತು. ಆದರೆ ರಸ್ತೆ ಬದಿ, ಎಲ್ಲೆಂದರಲ್ಲಿ ಪ್ಲಾಸ್ಟಿಕ್ ಎಸೆಯುವ ಪ್ರವೃತ್ತಿ ನಿಲ್ಲಿಸುವುದಿಲ್ಲ. ಅದರ ಪರಿಣಾಮವಾಗಿ ಒಡಿಶಾದ ಹಸುವೊಂದರ ಹೊಟ್ಟೆಯಲ್ಲಿ ಬರೋಬ್ಬರಿ 30 ಕೆಜಿ ತೂಕದ ಪ್ಲಾಸ್ಟಿಕ್ ವಸ್ತುಗಳು ಪತ್ತೆಯಾಗಿವೆ.

ಹೊಟ್ಟೆಯಿಂದ ಪ್ಲಾಸ್ಟಿಕ್ ಹೊರ ತೆಗೆದ ವೈದ್ಯರು

ಒಡಿಶಾದ ಬೆರ್ಹಾಂಪುರದ ಸರಕಾರಿ ಪಶುವೈದ್ಯಕೀಯ ಆಸ್ಪತ್ರೆಯಲ್ಲಿ ಸುಮಾರು 4 ಗಂಟೆಗಳ ಕಾಲ ಆಪರೇಷನ್ ನಡೆಸಿ ವೈದ್ಯರು ಇಷ್ಟೊಂದು ತೂಕದ ಪ್ಲಾಸ್ಟಿಕ್ ಅನ್ನು ಹಸುವಿನ ಹೊಟ್ಟೆಯಿಂದ ಹೊರ ತೆಗೆದಿದ್ದಾರೆ. ಸತ್ಯ ನಾರಾಯಣ ಕರ್ ನೇತೃತ್ವದ ಪಶು ವೈದ್ಯರ ತಂಡ ಈ ಸಾಹಸ ಕಾರ್ಯ ಮಾಡಿದೆ.

ಹೊಟ್ಟೆಯೊಳಗೆ ಸೇರಿದ್ದ ಪ್ಲಾಸ್ಟಿಕ್ ಜೀರ್ಣವಾಗದೆ ಹಸು ಒದ್ದಾಡುತ್ತಿತ್ತು. ಮಲ, ಮೂತ್ರ ವಿಸರ್ಜನೆ ಸಮರ್ಪಕವಾಗಿ ಆಗದೆ ಹಸುವಿನ ಹೊಟ್ಟೆ ಊದಿಕೊಂಡಿತ್ತು. ನಿಲ್ಲಲೂ ಸಾಧ್ಯವಾಗದ ಹಸುವನ್ನು ಗಮನಿಸಿದ ಸಾರ್ವಜನಿಕರು ಅಧಿಕಾರಿಗಳಿಗೆ ತಿಳಿಸಿ ಆಸ್ಪತ್ರೆಗೆ ಕೊಂಡೊಯ್ದಿದ್ದರು. ಸದ್ಯ ಹಸು ಆರೋಗ್ಯದಿಂದಿದ್ದು, ವಾರಗಳ ಕಾಲ ಆಸ್ಪತ್ರೆಯಲ್ಲಿಯೇ ಅದನ್ನು ಆರೈಕೆ ಮಾಡಲಾಗುತ್ತದೆ ಎಂದು ಗಂಜಾಂನ ಮುಖ್ಯ ಜಿಲ್ಲಾ ಪಶು ವೈದ್ಯಾಧಿಕಾರಿ ಮನೋಜ್ ಕುಮಾರ್ ಸಾಹು ಹೇಳಿದ್ದಾರೆ.

”ಆಸ್ಪತ್ರೆಗೆ ಕರೆ ತಂದಾಗ ಹಸುವಿನ ಸ್ಥಿತಿ ಚಿಂತಾಜನಕವಾಗಿತ್ತು. ನೋವಿನಿಂದ ಒದ್ದಾಡುತ್ತಿತ್ತು. ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಹೊಟ್ಟೆಯಲ್ಲಿ ಪ್ಲಾಸ್ಟಿಕ್ ತ್ಯಾಜ್ಯ ಶೇಖರಣೆಯಾಗಿರುವುದು ಕಂಡು ಬಂತು” ಎಂದು ವೈದ್ಯರು ತಿಳಿಸಿದ್ದಾರೆ.

Related post

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ ಮದುವೆ

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ…

ನ್ಯೂಸ್ ಆರೋ: ಬರೋಬ್ಬರಿ 25 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ಮಂತ್ರ ಮಾಂಗಲ್ಯ ಮೂಲಕ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ತುಮಕೂರಲ್ಲಿ ನಡೆದಿದೆ. ಹೌದು ಜನಾಂದೋಲನದಲ್ಲಿ…
ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು! ಏನಿದು ವಿಷಯ?

ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು!…

ನ್ಯೂಸ್ ಆರೋ: ಎಷ್ಟೋ ಬಾರಿ ನಾವು ಈ ಹೊಟೇಲ್ ಗಳಿಗೆ ಹೋದಾಗ, ಅಲ್ಲಿ ಜನರು ವೆಜ್ ಮಂಚೂರಿಯನ್ನು ಆರ್ಡರ್ ಮಾಡಿದರೆ ಚಿಕನ್ ಮಂಚೂರಿ ತಂದು ಟೇಬಲ್ ಮೇಲೆ ಇಟ್ಟಿರುವ…
ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ನ್ಯೂಸ್ ಆರೋ: ಬಾಲಿವುಡ್‌ನ ಖ್ಯಾತ ನಟಿ ಅನುಷ್ಕಾ ಶರ್ಮಾ ಹಾಗೂ ಟೀಂ ಇಂಡಿಯಾದ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರ ಪರಿಚಯ ಯಾರಿಗೂ ಅಗತ್ಯವಿಲ್ಲ. ಇತ್ತೀಚೆಗಷ್ಟೇ ಅಂದರೆ ಮೇ…

Leave a Reply

Your email address will not be published. Required fields are marked *