ಪಾಕ್ ಮಹಿಳೆಯಿಂದ ಹನಿಟ್ರ್ಯಾಪ್ – ದೇಶದ ಭದ್ರತೆಯ ವಿವರ ಹಂಚಿಕೊಂಡ DRDO ಅಧಿಕಾರಿಯ ಬಂಧನ

ಪಾಕ್ ಮಹಿಳೆಯಿಂದ ಹನಿಟ್ರ್ಯಾಪ್ – ದೇಶದ ಭದ್ರತೆಯ ವಿವರ ಹಂಚಿಕೊಂಡ DRDO ಅಧಿಕಾರಿಯ ಬಂಧನ

ನ್ಯೂಸ್ ಆ್ಯರೋ : ಪಾಕ್ ಮಹಿಳೆಯಿಂದ ಹನಿ ಟ್ರ್ಯಾಪ್ ಗೆ ಒಳಗಾಗಿ ದೇಶದ ಭದ್ರತೆಯ ವಿಚಾರಗಳನ್ನು ಹಂಚಿಕೊಂಡಿದ್ದಲ್ಲದೇ, ಆತ್ಮೀಯವಾಗಿದ್ದ ಆರೋಪದ ಕಾರಣಕ್ಕಾಗಿ DRDO ದ ಹಿರಿಯ ತಾಂತ್ರಿಕ ಅಧಿಕಾರಿಯೊಬ್ಬರನ್ನು ಬಂಧಿಸಲಾಗಿದೆ.

ಬಾಲಸೋರ್ ಪೊಲೀಸರು ಶುಕ್ರವಾರ ಈ ಅಧಿಕಾರಿಯನ್ನ ಬಂಧಿಸಿದ್ದು, ಈತ ಕಳೆದ ಒಂದು ವರ್ಷದಿಂದ ಪಾಕಿಸ್ತಾನಿ ಮಹಿಳೆಯೊಂದಿಗೆ ಸಂಬಂಧ ಹೊಂದಿದ್ದ ಎನ್ನಲಾಗಿದೆ.

ಪಾಕ್ ಮಹಿಳೆಯ ಹನಿ ಟ್ರ್ಯಾಪ್ ನಲ್ಲಿ ಸಿಕ್ಕಿಬಿದ್ದ ನಂತರ, ತನ್ನ ಬೆತ್ತಲೆ ಚಿತ್ರಗಳು ಮತ್ತು ವೀಡಿಯೊಗಳು, ದೇಶದ ಭದ್ರತೆಯ ಎಲ್ಲಾ ಪ್ರಮುಖ ಮಾಹಿತಿಯನ್ನ ಶತ್ರು ದೇಶದ ಮಹಿಳೆಗೆ ಕಳುಹಿಸುತ್ತಿದ್ದ ಎಂಬ ಆರೋಪವಿದೆ.

ಬಾಲಸೋರ್ ಜಿಲ್ಲೆಯ ಚಂಡಿಪುರದಲ್ಲಿರುವ ಡಿಆರ್ಡಿಒದ ಇಂಟಿಗ್ರೇಟೆಡ್ ಟೆಸ್ಟ್ ರೇಂಜ್ ನಲ್ಲಿ ತಾಂತ್ರಿಕ ಅಧಿಕಾರಿಯನ್ನು ನೇಮಿಸಲಾಗಿದೆ ಎಂದು ಐಜಿ (ಪೂರ್ವ ರೇಂಜ್) ಹಿಮಂಗ್ಸು ಲಾಲ್ ಹೇಳಿದ್ದಾರೆ. ಈತ ಒಂದು ವರ್ಷದ ಹಿಂದೆ ಪಾಕಿಸ್ತಾನಿ ಮಹಿಳೆಯೊಂದಿಗೆ ಸಂಪರ್ಕಕ್ಕೆ ಬಂದಿದ್ದ. ನಂತ್ರ ಆ ಮಹಿಳೆಯೊಂದಿಗೆ ಸಂಬಂಧವನ್ನ ಬೆಳೆಸಿದ್ದ. ಆತನ ಕೃತ್ಯ ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಆತನನ್ನು ಬಂಧಿಸಲಾಗಿದೆ ಎಂದು ಅವರು ವಿವರಿಸಿದ್ದಾರೆ.

Related post

Loksabha Election 2024 : ಇಂದು ಮೊದಲ ಹಂತದ ಮತದಾನ ಆರಂಭ – 102 ಕ್ಷೇತ್ರಗಳಲ್ಲಿ ಅದೃಷ್ಟ ಪರೀಕ್ಷೆಗಿಳಿದ 1625 ಅಭ್ಯರ್ಥಿಗಳು

Loksabha Election 2024 : ಇಂದು ಮೊದಲ ಹಂತದ ಮತದಾನ ಆರಂಭ…

ನ್ಯೂಸ್ ಆ್ಯರೋ : ದೇಶದ ಚುಕ್ಕಾಣಿ ಹಿಡಿಯಲು ಐದು ವರ್ಷಗಳಿಗೊಮ್ಮೆ ನಡೆಯುವ ಲೋಕಸಭಾ ಚುನಾವಣೆಯಲ್ಲಿ ಈ ಬಾರಿಯ 7 ಹಂತದ ಸಾರ್ವತ್ರಿಕ ಲೋಕಸಭೆ ಚುನಾವಣೆಗೆ ಶುಕ್ರವಾರ ಚಾಲನೆ ಸಿಗಲಿದ್ದು,…
ದಿನ‌ ಭವಿಷ್ಯ 19-04-2024 ಶುಕ್ರವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 19-04-2024 ಶುಕ್ರವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಆಹಾರವನ್ನು ನಿಯಂತ್ರಣದಲ್ಲಿರಿಸಿಕೊಳ್ಳಿ ಮತ್ತು ಫಿಟ್ ಆಗಿ ಉಳಿಯಲು ವ್ಯಾಯಾಮ ಮಾಡಿ. ದಿನದಲ್ಲಿ ನಂತರ ಹಣಕಾಸು ಪರಿಸ್ಥಿತಿಗಳು ಸುಧಾರಿಸುತ್ತವೆ. ಒಂದು ಒಳ್ಳೆಯ ಸುದ್ದಿ ಪಡೆಯುವ ಸಾಧ್ಯತೆಯಿದ್ದು ಇದು ನಿಮ್ಮನ್ನಷ್ಟೇ…
ದಿನ‌ ಭವಿಷ್ಯ 15-04-2024 ಸೋಮವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 15-04-2024 ಸೋಮವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ದಯಾಳು ಪ್ರಕೃತಿ ಇಂದು ಅನೇಕ ಸಂತೋಷದ ಕ್ಷಣಗಳನ್ನು ತರುತ್ತದೆ. ಲೋನ್ ತೆಗೆದುಕೊಂಡಿರುವ ಜನರಿಗೆ ಲೋನ್ ನ ಮೊತ್ತವನ್ನು ಮರುಪಾವತಿಸುವಲ್ಲಿ ತೊಂದರೆಗಳು ಉಂಟಾಗಬಹುದು. ಮನೆಯಲ್ಲಿ ನಿಮ್ಮ ಮಕ್ಕಳು ಅತಿಶಯೋಕ್ತಿಯಿರುವ…

Leave a Reply

Your email address will not be published. Required fields are marked *