ಲೋಕಸಭಾ ಚುನಾವಣೆ 2024 : ದಿನಾಂಕ ಘೋಷಿಸಿದ ಚುನಾವಣಾ ಆಯೋಗ – ಏಳು ಹಂತಗಳಲ್ಲಿ ದೇಶಾದ್ಯಂತ ಮತದಾನ, 97 ಕೋಟಿ ಮತದಾರರೇ ತೀರ್ಪುಗಾರರು..!!

ಲೋಕಸಭಾ ಚುನಾವಣೆ 2024 : ದಿನಾಂಕ ಘೋಷಿಸಿದ ಚುನಾವಣಾ ಆಯೋಗ – ಏಳು ಹಂತಗಳಲ್ಲಿ ದೇಶಾದ್ಯಂತ ಮತದಾನ, 97 ಕೋಟಿ ಮತದಾರರೇ ತೀರ್ಪುಗಾರರು..!!

ನ್ಯೂಸ್ ಆ್ಯರೋ : 2024ರ ಲೋಕಸಭಾ ಚುನಾವಣೆಯ ದಿನಾಂಕವನ್ನು ಚುನಾವಣಾ ಆಯೋಗ ಇಂದು ತಿಳಿಸಿದ್ದು, ಒಟ್ಟು 7 ಹಂತಗಳಲ್ಲಿ ದೇಶಾದ್ಯಂತ ಚುನಾವಣಾ ಪ್ರಕ್ರಿಯೆ ನಡೆಯಲಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಘೋಷಿಸಿದ್ದಾರೆ.

ಪ್ರಸ್ತುತ ಲೋಕಸಭೆಯ ಅವಧಿಯು ಜೂನ್ 16 ರಂದು ಕೊನೆಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಚುನಾವಣೆಗೆ ದೇಶದ ಚುನಾವಣಾ ಆಯೋಗ ಎಲ್ಲಾ ರೀತಿಯಲ್ಲಿ ಸಿದ್ದತೆಯನ್ನು ಮಾಡಿಕೊಂಡಿದ್ದು, ಇಂದು ಚುನಾವಣೆಗೆ ಆದೇಶವನ್ನು ಹೊರಡಿಸಿದೆ. ಹಾಗಾಗಿ ಇಂದಿನಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿಯಾಗಿದೆ.

543 ಲೋಕಸಭಾ ಕ್ಷೇತ್ರಗಳಲ್ಲಿ 7 ಹಂತದಲ್ಲಿ ಮತದಾನ ನಡೆಯಲಿದೆ. ಏಪ್ರಿಲ್ 19ರಂದು ಮೊದಲ ಹಂತದ ಮತದಾನ, ಏಪ್ರಿಲ್ 26ರಂದು ಎರಡನೇ ಹಂತದ ಮತದಾನ, ಏಪ್ರಿಲ್ 26ರಂದು ಎರಡನೇ ಹಂತದ ಮತದಾನ, ಜೂನ್ 4ರಂದು ಮತ ಎಣಿಕೆ, ಫಲಿತಾಂಶ ಪ್ರಕಟವಾಗಲಿದೆ.

ಕರ್ನಾಟಕದ ಚುನಾವಣಾ ದಿನಾಂಕಗಳು

ದೇಶಾದ್ಯಂತ ಒಟ್ಟು 97 ಕೋಟಿ ನೋಂದಾಯಿತ ಮತದಾರರಿದ್ದು, 49.7 ಕೋಟಿ ಪುರುಷರು, 47.1 ಕೋಟಿ ಮಹಿಳಾ ಮತದಾರರು ಇದ್ದಾರೆ. 1.8 ಕೋಟಿ ಮತದಾರರಿಂದ ಮೊದಲ ಬಾರಿಗೆ ಮತ ಚಲಾವಣೆ ಮಾಡಲಿದ್ದಾರೆ. 48 ಸಾವಿರ ತೃತೀಯ ಲಿಂಗಿ ಮತದಾರರು ಮತ ಚಲಾಯಿಸಲಿದ್ದಾರೆ. 85 ವರ್ಷ ಮೇಲ್ಪಟ್ಟ 82 ಲಕ್ಷ ಮತದಾರರು ಮತ ಚಲಾಯಿಸಲಿದ್ದಾರೆ. 19.74 ಕೋಟಿ ಯುವ ಮತದಾರರು ಮತ ಚಲಾಯಿಸಲಿದ್ದಾರೆ. 10.5 ಲಕ್ಷ ಮತಗಟ್ಟೆಗಳು, 1.5 ಕೋಟಿ ಮತಗಟ್ಟೆ ಅಧಿಕಾರಿಗಳು ಮತ್ತು ಭದ್ರತಾ ಸಿಬ್ಬಂದಿ ಇದ್ದರೆ, 55 ಲಕ್ಷ ಇವಿಎಂಗಳು, 4 ಲಕ್ಷ ವಾಹನಗಳಿವೆ‌. ದೇಶದಾದ್ಯಂತ ಚುನಾವಣಾ ಕರ್ತವ್ಯಕ್ಕಾಗಿ ಒಂದೂವರೆ ಕೋಟಿ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.

ಯುವಕರು ಸೇರಿದಂತೆ ಜನರನ್ನು ಮತ ಚಲಾಯಿಸಲು ಉತ್ತೇಜಿಸಲು ಚುನಾವಣಾ ಆಯೋಗವು ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ‘ವೋಟ್ ಫಾರ್ ಶ್ಯೂರ್’ ಅಭಿಯಾನವನ್ನು ಪ್ರಾರಂಭಿಸಲಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹೇಳಿದ್ದಾರೆ.

Related post

ದಿನ‌ ಭವಿಷ್ಯ 15-04-2024 ಸೋಮವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 15-04-2024 ಸೋಮವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ದಯಾಳು ಪ್ರಕೃತಿ ಇಂದು ಅನೇಕ ಸಂತೋಷದ ಕ್ಷಣಗಳನ್ನು ತರುತ್ತದೆ. ಲೋನ್ ತೆಗೆದುಕೊಂಡಿರುವ ಜನರಿಗೆ ಲೋನ್ ನ ಮೊತ್ತವನ್ನು ಮರುಪಾವತಿಸುವಲ್ಲಿ ತೊಂದರೆಗಳು ಉಂಟಾಗಬಹುದು. ಮನೆಯಲ್ಲಿ ನಿಮ್ಮ ಮಕ್ಕಳು ಅತಿಶಯೋಕ್ತಿಯಿರುವ…
ದಿನ‌ ಭವಿಷ್ಯ 14-04-2024 ಭಾನುವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 14-04-2024 ಭಾನುವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನೀವು ಧೀರ್ಘಕಾಲೀನ ಅನಾರೋಗ್ಯದಿಂದ ಬಳಲಬಹುದು. ಇಂದು ಯಾವುದೇ ಸಹಾಯವಿಲ್ಲದೆ, ನೀವು ಹಣವನ್ನು ಗಳಿಸುವಲ್ಲಿ ಸಾಮರ್ತ್ಯರಾಗಿರುತ್ತೀರಿ. ಯಾರಾದರೂ ನಿಮಗೆ ಹಾನಿ ಮಾಡಲು ಪ್ರಯತ್ನಿಸಬಹುದು – ಬಲವಾದ ಶಕ್ತಿಗಳು ನಿಮ್ಮ ವಿರುದ್ಧ…
ರಾಮೇಶ್ವರ ಕೆಫೆ ಬಾಂಬ್ ಸ್ಫೋಟ ಪ್ರಕರಣ – ಇಬ್ಬರು ಬಂಧಿತ ಉಗ್ರರನ್ನು ಬೆಂಗಳೂರಿಗೆ ಕರೆತಂದ NIA ಅಧಿಕಾರಿಗಳು

ರಾಮೇಶ್ವರ ಕೆಫೆ ಬಾಂಬ್ ಸ್ಫೋಟ ಪ್ರಕರಣ – ಇಬ್ಬರು ಬಂಧಿತ ಉಗ್ರರನ್ನು…

ನ್ಯೂಸ್ ಆ್ಯರೋ : ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಉಗ್ರರನ್ನು NIA ಅಧಿಕಾರಿಗಳು ಬೆಂಗಳೂರಿಗೆ ಕರೆತಂದಿದ್ದಾರೆ. ಅಬ್ದುಲ್ ಮತೀನ್ ತಾಹಾ ಹಾಗೂ ಮುಜಾವಿರ್ ಹುಸೇನ್…

Leave a Reply

Your email address will not be published. Required fields are marked *