ಮಧುರೈ‌ : ನಿಲ್ಲಿಸಿದ್ದ ರೈಲಿನಲ್ಲಿ ಅಗ್ನಿ‌ ಅವಘಡ – 9 ಮಂದಿ ಭೀಕರ ಸಾವು, 20 ಕ್ಕೂ ಅಧಿಕ ಮಂದಿಗೆ ಗಾಯ

ಮಧುರೈ‌ : ನಿಲ್ಲಿಸಿದ್ದ ರೈಲಿನಲ್ಲಿ ಅಗ್ನಿ‌ ಅವಘಡ – 9 ಮಂದಿ ಭೀಕರ ಸಾವು, 20 ಕ್ಕೂ ಅಧಿಕ ಮಂದಿಗೆ ಗಾಯ

ನ್ಯೂಸ್ ಆ್ಯರೋ‌ : ಲಕ್ನೋದಿಂದ ಬಂದಿದ್ದ ರೈಲಿನ ಪ್ರವಾಸಿಗರ ಭೋಗಿಯಲ್ಲಿ ಅಗ್ನಿ ಅವಘಡ ಸಂಭವಿಸಿ 9 ಮಂದಿ ಮೃತಪಟ್ಟ ಘಟನೆ ತಮಿಳುನಾಡಿನ ಮಧುರೈ ನಿಲ್ದಾಣದಲ್ಲಿ ಇಂದು ನಡೆದಿದೆ.

ಅಡುಗೆ ಕೋಚ್‌ನಲ್ಲಿ ಸಿಲಿಂಡರ್ ಸ್ಫೋಟಗೊಂಡು ಈ ದುರಂತ ಸಂಭವಿಸಿದೆ ಎಂದು ಪ್ರಾಥಮಿಕ ವರದಿಯಲ್ಲಿ ತಿಳಿದುಬಂದಿದೆ.

ಘಟನೆಯಲ್ಲಿ 20 ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿದ್ದು, ಗಾಯಾಳುಗಳ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಪ್ರಾಥಮಿಕ ತನಿಖೆಯ ಪ್ರಕಾರ, ರೈಲಿನಲ್ಲಿದ್ದ ಪ್ರವಾಸಿಗರು ಮುಂಜಾನೆ ಸಿಲಿಂಡರ್ ನೊಂದಿಗೆ ಅಡುಗೆ ಮಾಡುತ್ತಿದ್ದಾಗ ಸಿಲಿಂಡರ್ ಸೋರಿಕೆಯಾಗಿ ಸ್ಫೋಟಗೊಂಡು ಬೆಂಕಿ ಕಾಣಿಸಿಕೊಂಡಿದೆ.

ಮಾಹಿತಿ ಪಡೆದ ನಂತರ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದವರು ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸಲು ಪ್ರಯತ್ನಿಸಿದರು. ರೈಲಿನ ಕೊನೆಯ ಎರಡು ಬೋಗಿಗಳು ಬೆಂಕಿಯಲ್ಲಿ ಸಂಪೂರ್ಣವಾಗಿ ಸುಟ್ಟುಹೋಗಿವೆ.

ಈ ರೈಲು ಮೇ 17 ರಂದು 15 ದಿನಗಳ ಆಧ್ಯಾತ್ಮಿಕ ಪ್ರವಾಸಕ್ಕಾಗಿ ಲಕ್ನೋದಿಂದ ಹೊರಟಿತ್ತು.ನಿಲ್ಲಿಸಿದ್ದ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ತಿಳಿದು ಬಂದಿದೆ. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

Related post

ಅಕ್ಟೋಬರ್‌ನಲ್ಲಿ ಹಣಕಾಸಿನ ನಿಯಮಗಳಲ್ಲಿ ಭಾರೀ ಬದಲಾವಣೆ – ₹ 2000 ನೋಟು ರದ್ದು, ಹೊಸ ಟಿಸಿಎಸ್ ನಿಯಮ ಜಾರಿ

ಅಕ್ಟೋಬರ್‌ನಲ್ಲಿ ಹಣಕಾಸಿನ ನಿಯಮಗಳಲ್ಲಿ ಭಾರೀ ಬದಲಾವಣೆ – ₹ 2000 ನೋಟು…

ನ್ಯೂಸ್‌ ಆ್ಯರೋ : ತಿಂಗಳಿಗೊಮ್ಮೆ ಹಣಕಾಸಿನ ವ್ಯವಹಾರಗಳ ನಿಯಮಗಳಲ್ಲಿ ಬದಲಾವಣೆ ಆಗುವುದು ಸಹಜ ಪ್ರಕ್ರಿಯೆ. ಇದೀಗ ಅಕ್ಟೋಬರ್‌ ತಿಂಗಳು ಪ್ರಾರಂಭಕ್ಕೆ ಕೆಲ ದಿನವಿರುವಾಗಲೇ ಹಣಕಾಸಿಗೆ ಸಂಬಂಧಿಸಿದ ಕೆಲವು ನಿಯಮಗಳಲ್ಲಿ…
ಏನೂ ಕೆಲಸ ಮಾಡದೇ ಈ ತಾತ ವರ್ಷಕ್ಕೆ 6.5 ಲಕ್ಷ ದುಡೀತಾರೆ..!! – ಕೋಟ್ಯಾಂತರ ರೂಪಾಯಿ ಒಡೆಯ ಈ ತಾತ ಮಾಡೋದೇನು?

ಏನೂ ಕೆಲಸ ಮಾಡದೇ ಈ ತಾತ ವರ್ಷಕ್ಕೆ 6.5 ಲಕ್ಷ ದುಡೀತಾರೆ..!!…

ನ್ಯೂಸ್ ಆ್ಯರೋ : ಎಷ್ಟು ದುಡಿದರೂ ವರ್ಷಕ್ಕೆ 5- 6 ಲಕ್ಷ ಸಂಪಾದಿಸೋದೇ ಕಷ್ಟ ಎನ್ನುವವರ ಮಧ್ಯೆ ಏನೂ ಕೆಲಸವಿಲ್ಲದ ವೃದ್ಧರೊಬ್ಬರು 10 ಕೋಟಿ ರೂ. ಆದಾಯ ಗಳಿಸಿದ್ದಾರೆ.…
ಖಾಲಿ ಹೊಟ್ಟೆಯಲ್ಲಿ ಕರಿಬೇವು ತಿಂದ್ರೆ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ? – ಆರೋಗ್ಯದ ಮೇಲೆ ಕಾಳಜಿ ಇರುವವರು ಈ ವರದಿ ಓದಿ..

ಖಾಲಿ ಹೊಟ್ಟೆಯಲ್ಲಿ ಕರಿಬೇವು ತಿಂದ್ರೆ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ? – ಆರೋಗ್ಯದ…

ನ್ಯೂಸ್ ಆ್ಯರೋ : ಕರಿಬೇವಿನ ಎಲೆಗಳನ್ನು ಭಾರತೀಯ ಅಡುಗೆಮನೆಯಲ್ಲಿ ವ್ಯಾಪಕವಾಗಿ ಬಳಸಲಾಗುತ್ತದೆ. ಅದರಲ್ಲೂ ದಕ್ಷಿಣ ಭಾರತದ ಬಹುತೇಕ ಖಾದ್ಯಗಳಲ್ಲಿ ಕರಿಬೇವು ಮುಖ್ಯ. ಕರಿಬೇವಿನ ಎಲೆಗಳು ಯಾವುದೇ ಆಹಾರದ ರುಚಿಯನ್ನು…

Leave a Reply

Your email address will not be published. Required fields are marked *