ದೇಶದಲ್ಲಿ ತಲೆಯೆತ್ತಲಿದೆ ಎಂಟು ಹೊಸ ನಗರಗಳು – ಕೇಂದ್ರ ಸರ್ಕಾರದ ಈ ಹೊಸ ಚಿಂತನೆಗೆ ಕಾರಣವೇನು?

ದೇಶದಲ್ಲಿ ತಲೆಯೆತ್ತಲಿದೆ ಎಂಟು ಹೊಸ ನಗರಗಳು – ಕೇಂದ್ರ ಸರ್ಕಾರದ ಈ ಹೊಸ ಚಿಂತನೆಗೆ ಕಾರಣವೇನು?

ನ್ಯೂಸ್ ಆ್ಯರೋ‌ : ದೇಶದಲ್ಲಿನ ಈಗಿರುವ ನಗರಗಳಲ್ಲಿ ಜನಸಂಖ್ಯೆ ಒತ್ತಡ ಹೆಚ್ಚಿ ಮೂಲ ಸೌಲಭ್ಯ ಒದಗಿಸುವುದು ಸೇರಿ ಅನೇಕ ಸಮಸ್ಯೆ ಎದುರಾಗುತ್ತಿದ್ದು, ಇದನ್ನು ತಪ್ಪಿಸಲು ಎಂಟು ಹೊಸ ನಗರಗಳನ್ನು ಅಭಿವೃದ್ಧಿ ಪಡಿಸಲು ಕೇಂದ್ರ ಸರಕಾರ ಚಿಂತನೆ ನಡೆಸಿದೆ. ಈ ಬಗ್ಗೆ ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ದೇಶದಲ್ಲಿ ಹೊಸ ನಗರಗಳನ್ನು ಅಭಿವೃದ್ಧಿಪಡಿಸಬೇಕೆಂದು 15ನೇ ಹಣಕಾಸು ಆಯೋಗವು ಶಿಫಾರಸು ಮಾಡಿದೆ ಎಂದು ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಇಲಾಖೆಯ ಜಿ 20 ಘಟಕದ ನಿರ್ದೇಶಕ ಎಂ.ಬಿ.ಸಿಂಗ್ ಹೇಳಿದ್ದಾರೆ.

26 ಹೊಸ ನಗರಗಳಿಗಾಗಿ ರಾಜ್ಯಗಳು ಕೇಂದ್ರಕ್ಕೆ ಪ್ರಸ್ತಾವ ಕಳುಹಿಸಿದ್ದು, ಪರಿಶೀಲನೆಯ ಬಳಿಕ ಎಂಟು ಹೊಸ ನಗರಗಳ ಅಭಿವೃದ್ಧಿ ಕುರಿತು ಚಿಂತನೆ ನಡೆಸಲಾಗುತ್ತಿದೆ. ಆದರೆ ಹೊಸ ನಗರಗಳು ಯಾವುವು, ಎಲ್ಲಿ ನಿರ್ಮಿಸಲಾಗುತ್ತಿದೆ, ಯಾವಾಗ ಕಾಮಗಾರಿ ಆರಂಭ? ಮುಂತಾದ ಪ್ರಶ್ನೆಗಳಿಗೆ ಸರಕಾರ ಸೂಕ್ತ ಸಮಯದಲ್ಲಿ ಉತ್ತರಿಸಲಿದೆ ಎಂದು ವಿವರಿಸಿದ್ದಾರೆ.

ಹೊಸ ನಗರಗಳನ್ನು ಅಭಿವೃದ್ಧಿ ಪಡಿಸಿದರೆ ಕನಿಷ್ಠ 200 ಕಿ.ಮೀ. ವ್ಯಾಪ್ತಿಯಲ್ಲಿ ಸಾಮಾಜಿಕ ಮತ್ತು ಆರ್ಥಿಕ ಚಟುವಟಿಕೆಗಳು ಹೆಚ್ಚಾಗುತ್ತವೆ. ಆದರೆ ಇನ್ನೂ ಹೊಸ ನಗರಗಳ ಸ್ಥಾಪನೆಗೆ ಆರ್ಥಿಕ ಮಾರ್ಗ ಸೂಚಿ ಅಂತಿಮಗೊಳಿಸಿಲ್ಲ ಎಂದು ಎಂ.ಬಿ.ಸಿಂಗ್ ತಿಳಿಸಿದ್ದಾರೆ.

Related post

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…
ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…

Leave a Reply

Your email address will not be published. Required fields are marked *