GST ಪಾವತಿಸದೇ ವಂಚನೆ ಆರೋಪ – ಅದಾನಿ ಗ್ರೂಪ್ ನ ಕಂಪನಿ ಕಚೇರಿಗೆ ತೆರಿಗೆ ಇಲಾಖೆ ದಾಳಿ

GST ಪಾವತಿಸದೇ ವಂಚನೆ ಆರೋಪ – ಅದಾನಿ ಗ್ರೂಪ್ ನ ಕಂಪನಿ ಕಚೇರಿಗೆ ತೆರಿಗೆ ಇಲಾಖೆ ದಾಳಿ

ನ್ಯೂಸ್‌ ಆ್ಯರೋ : ಹಿಂಡನ್ ಬರ್ಗ್ ವರದಿ ಬಳಿಕ ಅದಾನಿ ಕಂಪನಿ ನಷ್ಟದ ಪಾತಾಳದತ್ತ ಕುಸಿಯುತ್ತಿದ್ದು, ಇದರ ನಡುವೆ ಹಿಮಾಚಲ ಪ್ರದೇಶದ ಖಾದ್ಯ ತೈಲ ಉತ್ಪಾದಕ ಅದಾನಿ ವಿಲ್ಮರ್‌ ಗ್ರೂಪ್‌ನ ಕಚೇರಿಗೆ ರಾಜ್ಯ ಅಬಕಾರಿ ಮತ್ತು ತೆರಿಗೆ ಇಲಾಖೆಯ ತಂಡ ದಾಳಿ ನಡೆಸಿದೆ.

ಜಿಎಸ್‌ಟಿಯನ್ನು ಕಂಪನಿ ಸರಿಯಾಗಿ ಪಾವತಿಸಿಲ್ಲ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ ಎಂದು ಮೂಲಗಳು ತಿಳಿಸಿವೆ.

ವಿಲ್ಮರ್‌ ಗ್ರೂಪ್‌ ಮಾಡಿರುವ ಜಿಎಸ್‌ಟಿ ಇನ್‌ಪುಟ್‌ ಟ್ಯಾಕ್ಸ್‌ ಕ್ರೆಡಿಟ್‌ ಕ್ಲೇಮ್‌ಗಳ ಬಗ್ಗೆ ಕೂಡ ತನಿಖೆ ನಡೆಯುತ್ತಿದೆ. ಕಳೆದ 5 ವರ್ಷಗಳಿಂದ ಕಂಪನಿಯು ಜಿಎಸ್‌ಟಿ ಪಾವತಿಸಿಲ್ಲ. ಈ ಹಿನ್ನೆಲೆಯಲ್ಲಿ ಅಧಿಕಾರಿಗಳ ತಂಡ ದಾಳಿ ನಡೆಸಿದ್ದು, ದಾಖಲಾತಿಗಳನ್ನು ಪರೀಕ್ಷಿಸಿದೆ ಎಂದು ಮೂಲಗಳು ತಿಳಿಸಿವೆ.

ಕಳೆದ ಅಕ್ಟೋಬರ್-ಡಿಸೆಂಬರ್‌ ಅವಧಿಯಲ್ಲಿ ಅದಾನಿ ವಿಲ್ಮರ್‌ ಗ್ರೂಪ್‌ 211 ಕೋಟಿ ರೂ. ನಿವ್ವಳ ಲಾಭವನ್ನು ಗಳಿಸಿತ್ತು. ಆದಾಯವು 15,515 ಕೋಟಿ ರೂ.ಗೆ ವೃದ್ಧಿಸಿದ್ದು, ಜಿಎಸ್ಟಿ ಪಾವತಿಸದೇ ವಂಚಿಸಿದೆ ಎಂಬ ಆರೋಪ ಕೇಳಿಬಂದಿದೆ.

Related post

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…
ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…

Leave a Reply

Your email address will not be published. Required fields are marked *