ಜ್ಞಾನವಾಪಿ ಮಸೀದಿ ವಿವಾದ ಪ್ರಕರಣ – ಮುಸ್ಲಿಂರ ಪರ ಐದು ಅರ್ಜಿಗಳನ್ನು ರಿಜೆಕ್ಟ್ ಮಾಡಿದ ಅಲಹಾಬಾದ್ ಹೈಕೋರ್ಟ್…!

ಜ್ಞಾನವಾಪಿ ಮಸೀದಿ ವಿವಾದ ಪ್ರಕರಣ – ಮುಸ್ಲಿಂರ ಪರ ಐದು ಅರ್ಜಿಗಳನ್ನು ರಿಜೆಕ್ಟ್ ಮಾಡಿದ ಅಲಹಾಬಾದ್ ಹೈಕೋರ್ಟ್…!

ನ್ಯೂಸ್ ಆ್ಯರೋ : ಜ್ಞಾನವಾಪಿ ಮಸೀದಿ ಬಗೆಗೆ ಅನೇಕ ವಾಗ್ವಾದಗಳು ನಡೆಯುತ್ತಲೇ ಇದೆ. ಮಸೀದಿ ಇರುವ ಸ್ಥಳದಲ್ಲಿ ದೇವಾಲಯವನ್ನು ಮರುಸ್ಥಾಪಿಸುವ ಬಗ್ಗೆ ಹಿಂದೂ ಸಮುದಾಯ ಸಲ್ಲಿಸಿದ ಅರ್ಜಿಯನ್ನು ಹಾಗೂ ಬಾಕಿ ಉಳಿದಿರುವ ಸಿವಿಲ್ ಮೊಕದ್ದಮೆಯ ನಿರ್ವಹಣೆಯನ್ನು ಪ್ರಶ್ನಿಸಿ ಅಂಜುಮನ್ ಇಂತೇಜಾಮಿಯಾ ಮಸೀದಿ ಮತ್ತು ಯುಪಿ ಸುನ್ನಿ ವಕ್ಫ್ ಬೋರ್ಡ್ ಸಲ್ಲಿಸಿದ 5 ಅರ್ಜಿಗಳನ್ನು ಉತ್ತರಪ್ರದೇಶದ ಅಲಹಾಬಾದ್ ಹೈಕೋರ್ಟ್ ವಜಾಗೊಳಿಸಿದೆ.

ಹಿಂದೂ ಸಮುದಾಯಕ್ಕೆ ಮತ್ತೆ ಜಯ

ಜ್ಞಾನವಾಪಿ ಮಸೀದಿ ಭೂ ವಿವಾದಕ್ಕೆ ಸಂಬಂಧಿಸಿದಂತೆ ಮತ್ತೊಮ್ಮೆ ಹಿಂದೂ ಸಮುದಾಯಕ್ಕೆ ಜಯವಾಗಿದೆ. ಮಸೀದಿ ಇರುವ ಸ್ಥಳದಲ್ಲಿ ದೇವಾಲಯವನ್ನು ಮರುಸ್ಥಾಪಿಸುವ ಬಗ್ಗೆ ಹಿಂದೂ ಸಮುದಾಯ ಸಲ್ಲಿಸಿದ ಅರ್ಜಿಯನ್ನು ಹಾಗೂ ಬಾಕಿ ಉಳಿದಿರುವ ಸಿವಿಲ್ ಮೊಕದ್ದಮೆಯ ನಿರ್ವಹಣೆಯನ್ನು ಪ್ರಶ್ನಿಸಿ ಅಂಜುಮನ್ ಇಂತೇಜಾಮಿಯಾ ಮಸೀದಿ ಮತ್ತು ಯುಪಿ ಸುನ್ನಿ ಸೆಂಟ್ರಲ್ ವಕ್ಫ್ ಬೋರ್ಡ್ ಸಲ್ಲಿಸಿದ 5 ಅರ್ಜಿಗಳನ್ನು ಉತ್ತರಪ್ರದೇಶದ ಅಲಹಾಬಾದ್ ಹೈಕೋರ್ಟ್ ವಜಾಗೊಳಿಸಿದೆ.

ರಾಷ್ಟ್ರೀಯ ಪ್ರಾಮುಖ್ಯತೆ ಹಾಗೂ 1991 ಕಾಯಿದೆ ಅನುಸಾರವಾಗಿ ಧಾರ್ಮಿಕ ಆರಾಧನೆಗಳನ್ನು ನಿರ್ಬಂಧಿಸಲು ಸಾಧ್ಯವಿಲ್ಲ ಎಂದು ಹೇಳಿದೆ. ಈಗಾಗಲೇ ಈ ಬಗ್ಗೆ ಕಾನೂನತ್ಮಕವಾಗಿ ತನಿಖೆ ಹಾಗೂ ವಿಚಾರಣೆಗಳು ನಡೆಯುತ್ತಿದೆ. ಜ್ಞಾನವಾಪಿ ಮಸೀದಿಯ ಸಮಗ್ರ ಸಮೀಕ್ಷೆಯನ್ನು ನಡೆಸಲು ಏಪ್ರಿಲ್ 8, 2021 ರ ವಾರಣಾಸಿ ನ್ಯಾಯಾಲಯದ ಆದೇಶ ನೀಡಿತ್ತು. ಇದನ್ನು ಅಂಜುಮನ್ ಇಂತೇಜಾಮಿಯಾ ಮಸಾಜಿದ್ ಸಮಿತಿ (ಎಐಎಂಸಿ) ಮತ್ತು ಉತ್ತರ ಪ್ರದೇಶ ಸುನ್ನಿ ಸೆಂಟ್ರಲ್ ವಕ್ಫ್ ಬೋರ್ಡ್ ಪ್ರಶ್ನಿಸಿತ್ತು.

ಡಿಸೆಂಬರ್ 8 ರಂದು ನ್ಯಾಯಮೂರ್ತಿ ರೋಹಿತ್ ರಂಜನ್ ಅಗರ್ವಾಲ್ ಅವರು ಎರಡು ಕಡೆಯ ವಾದವನ್ನು ಆಲಿಸಿದ ನಂತರ ಈ ತೀರ್ಪು ನೀಡಿದ್ದಾರೆ. ವಾರಣಾಸಿಯ ಕಾಶಿ ವಿಶ್ವನಾಥ ದೇವಸ್ಥಾನದ ಪಕ್ಕದಲ್ಲಿರುವ ಜ್ಞಾನವಾಪಿ ಮಸೀದಿಯ ನಿರ್ವಹಣೆಯನ್ನು ನೋಡಿಕೊಳ್ಳುವ ಎಐಎಂಸಿ, ವಾರಣಾಸಿ ನ್ಯಾಯಾಲಯದಲ್ಲಿ ದಾಖಲಾದ ದಾವೆಯ ನಿರ್ವಹಣೆಯನ್ನು ಪ್ರಶ್ನಿಸಿದೆ.

ಇದರಲ್ಲಿ ಹಿಂದೂ ಅರ್ಜಿದಾರರು ಜ್ಞಾನವಾಪಿ ಮಸೀದಿ ಇರುವ ಸ್ಥಳದಲ್ಲಿ ದೇವಾಲಯವನ್ನು ಮರುಸ್ಥಾಪಿಸಲು ಕೋರಿದ್ದಾರೆ. ಇನ್ನು ಈ ಭೂವಿವಾದ ಯಾವ ರೀತಿಯ ತಿರುವನ್ನು ಪಡೆದುಕೊಳ್ಳುತ್ತದೆ ನೋಡಬೇಕಷ್ಟೆ.

Related post

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…
ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…

Leave a Reply

Your email address will not be published. Required fields are marked *