ಮಿಚಾಂಗ್ ಚಂಡಮಾರುತಕ್ಕೆ ತತ್ತರಿಸಿದ ತಮಿಳುನಾಡು – ತಮಿಳುನಾಡಿನಲ್ಲಿ ಏನಾಗುತ್ತಿದೆ ಗೊತ್ತಾ? ಈ ವಿಡಿಯೋ ನೋಡಿ….

ಮಿಚಾಂಗ್ ಚಂಡಮಾರುತಕ್ಕೆ ತತ್ತರಿಸಿದ ತಮಿಳುನಾಡು – ತಮಿಳುನಾಡಿನಲ್ಲಿ ಏನಾಗುತ್ತಿದೆ ಗೊತ್ತಾ? ಈ ವಿಡಿಯೋ ನೋಡಿ….

ನ್ಯೂಸ್ ಆ್ಯರೋ : ಪ್ರಕೃತಿ ವಿಕೋಪ ಎನ್ನುವಂತದ್ದು ಯಾವ ಸಂದರ್ಭದಲ್ಲಿ ಬೇಕಾದರೂ ಸಂಭವಿಸಬಹುದು. ಇದು ನೈಸರ್ಗಿಕ ಕ್ರಿಯೆ‌. ಇದೀಗ ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ರೂಪುಗೊಂಡಿರುವ ಪರಿಣಾಮ ತಮಿಳುನಾಡಿನಲ್ಲಿ ಭಾರಿ ಮಳೆಯಾಗುತ್ತಿದ್ದು ಪರಿಣಾಮ ರಾಜಧಾನಿ ಚೆನ್ನೈ ಸೇರಿದಂತೆ ತಮಿಳುನಾಡಿನ ಕರಾವಳಿ ಜಿಲ್ಲೆಗಳಲ್ಲಿ ರಸ್ತೆಗಳು ಜಲಾವೃತವಾಗಿವೆ.

ಮಿಚಾಂಗ್ ಚಂಡಮಾರುತ ಪರಿಣಾಮ ತಮಿಳುನಾಡಿನ ಹಲವು ಭಾಗಗಳಲ್ಲಿ ಡಿಸೆಂಬರ್ 5ರವರೆಗೆ ಭಾರಿ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಎಚ್ಚರಿಕೆ ನೀಡಿದೆ. ರಾಜಧಾನಿ ಚೆನ್ನೈ, ತಿರುವಲ್ಲೂರು, ಚೆಂಗಲ್‌ಪಟ್ಟು ಮತ್ತು ಕಾಂಚೀಪುರಂ ಜಿಲ್ಲಾಡಳಿತಗಳು ಇಂದು (ಸೋಮವಾರ) ಶಾಲೆ ಮತ್ತು ಕಾಲೇಜುಗಳಿಗೆ ರಜೆ ಘೋಷಿಸಿವೆ. ಬೀಚ್‌ಗಳಿಗೆ ಜನರು ಭೇಟಿ ನೀಡಬಾರದು ಎಂದು ಗ್ರೇಟರ್ ಚೆನ್ನೈ ಪೊಲೀಸರು ಸೂಚಿಸಿದ್ದಾರೆ.

ತಿರುವಲ್ಲೂರು ಮತ್ತು ಚೆನ್ನೈ ಜನರು ಡಿ.4 ಮತ್ತು 5ರಂದು ಮನೆಯ ಒಳಗೇ ಇರುವಂತೆ ಐಎಂಡಿ ತಿಳಿಸಿದೆ. ಡಿ.3ರಿಂದ 7ರವರೆಗೆ ಸುಮಾರು 144 ರೈಲುಗಳ ಸೇವೆಯನ್ನು ರದ್ದಾಗಿವೆ. ಚೆನ್ನೈ ವಿಮಾನ ನಿಲ್ದಾಣದ ರನ್ ವೇ ಮೇಲೆ ಮಳೆನೀರು ನಿಂತ ಪರಿಣಾಮ ವಿಮಾನ ಸಂಚಾರ ಸ್ಥಗಿತವಾಗಿದೆ.

ಯಾವೆಲ್ಲಾ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ..?

ತಮಿಳುನಾಡಿನ ಚೆನ್ನೈ, ತಿರುವಳ್ಳೂರು, ಚೆಂಗಲ್‌ಪಟ್ಟು ಮತ್ತು ಕಾಂಚೀಪುರಂ, ತಿರುವಣ್ಣಾಮಲೈ, ವಿಲ್ಲುಪುರಂ, ಕಡಲೂರು, ಮೈಲಾಡುತುರೈ, ತಂಜಾವೂರು, ಅರಿಯಲೂರು, ಪೆರಂಬಲೂರು, ಕಲ್ಲಕುರಿಚ್ಚಿ, ವೆಲ್ಲೂರು, ತಿರುಪತ್ತೂರು, ಧರ್ಮಪುರಿ, ಕೃಷ್ಣಗಿರಿ ಸೇಲಂ, ನಾಮಕ್ಕಲ್ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಬಂಗಾಳಕೊಲ್ಲಿಯಲ್ಲಿ ಡಿ.3ರ ವೇಳೆಗೆ ಚಂಡಮಾರುತ ರೂಪುಗೊಂಡಿದ್ದು, ಅದು ಡಿ.4ರಂದು ಅಂದರೆ ಇಂದು ಆಂಧ್ರಪ್ರದೇಶ, ತಮಿಳುನಾಡು ಕರಾವಳಿಗೆ ಅದು ಅಪ್ಪಳಿಸಲಿದೆ. ಇದರ ಪರಿಣಾಮ 16 ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಐಎಂಡಿ ಎಚ್ಚರಿಕೆ ನೀಡಿದ ಬೆನ್ನಲ್ಲೇ ತಮಿಳುನಾಡು ಸರ್ಕಾರ ಈ ಮುಂಜಾಗ್ರತಾ ಕ್ರಮ ಕೈಗೊಂಡಿದೆ. ಈ ಚಂಡಮಾರುತಕ್ಕೆ ಮ್ಯಾನ್ಮಾರ್‌ ಸಲಹೆಯಂತೆ ‘ಮಿಚಾಂಗ್‌’ ಎಂದು ಹೆಸರಿಡಲಾಗಿದೆ.

Related post

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…
ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…

Leave a Reply

Your email address will not be published. Required fields are marked *