ಬೆಂಗಳೂರಿನಲ್ಲಿ ತಲೆ ಎತ್ತಿದೆ ದೇಶದ ಮೊದಲ 3ಡಿ ಮುದ್ರಿತ ಅಂಚೆ ಕಚೇರಿ – ಏನಿದರ ವೈಶಿಷ್ಟ್ಯ? ಮೋದಿ ಹೇಳಿದ್ದೇನು?

ಬೆಂಗಳೂರಿನಲ್ಲಿ ತಲೆ ಎತ್ತಿದೆ ದೇಶದ ಮೊದಲ 3ಡಿ ಮುದ್ರಿತ ಅಂಚೆ ಕಚೇರಿ – ಏನಿದರ ವೈಶಿಷ್ಟ್ಯ? ಮೋದಿ ಹೇಳಿದ್ದೇನು?

ನ್ಯೂಸ್ ಆ್ಯರೋ‌ : ಬೆಂಗಳೂರಿನ ವೈಶಿಷ್ಟ್ಯ ಕಿರೀಟಕ್ಕೆ ಇನ್ನೊಂದು ಗರಿ ಸೇರಿಕೊಂಡಿದ್ದು, ದೇಶದ ಮೊದಲ 3ಡಿ ಮುದ್ರಿತ ಅಂಚೆ ಕಚೇರಿ ಆರಂಭವಾಗಿದೆ. ಇಂದು ರೈಲ್ವೆ-ಸಂವಹನ ಸಚಿವ ಅಶ್ವಿನಿ ವೈಷ್ಣವ್ ಹಲಸೂರಿನ ಕೆಂಬ್ರಿಡ್ಜ್ ಲೇಔಟ್ ನಲ್ಲಿ ನಿರ್ಮಾಣವಾಗಿರುವ ಈ ಪೋಸ್ಟ್ ಆಫೀಸ್ ಗೆ ಆನ್ ಲೈನ್ ಮೂಲಕ ಚಾಲನೆ ನೀಡಿದರು.

ವಿಶೇಷತೆ

ಎಕ್ಸ್ (ಟ್ವಿಟರ್) ಮೂಲಕ ಅಂಚೆ ಕಚೇರಿಯ ವೀಡಿಯೋ ಹಂಚಿಕೊಂಡಿರುವ ಅಶ್ವಿನಿ ವೈಷ್ಣವ್ ಆತ್ಮ ನಿರ್ಭರ ಭಾರತದ ಸ್ಫೂರ್ತಿ ಎಂದು ಬರೆದುಕೊಂಡಿದ್ದಾರೆ. ಪ್ರಥಮ ಬಾರಿಗೆ 3ಡಿ ಟೆಕ್ನಾಲಜಿ ಬಳಸಿ ನಿರ್ಮಾಣ ಮಾಡಿದ ಕಟ್ಟಡ ಇದಾಗಿದ್ದು, ಮಾನವರಹಿತವಾಗಿ ರೋಬೋ ಮೂಲಕ ಕೆಲಸ ನಿರ್ವಹಿಸಲಾಗಿದೆ. ಎಲ್&ಟಿ ಕಂಪೆನಿ ಸಹಯೋಗದಲ್ಲಿ ಕೇವಲ 45 ದಿನಗಳಲ್ಲಿ ಈ ಅಂಚೆ ಕಚೇರಿ ತಲೆ ಎತ್ತಿದೆ.

1,021 ಚದರ ಅಡಿಯ ಈ ಕಟ್ಟಡ ನಿರ್ಮಾಣಕ್ಕೆ ಐಐಟಿ ಚೆನ್ನೈ ಮಾರ್ಗದರ್ಶನ ನೀಡಿದೆ. ನಿರ್ಮಾಣ ವೆಚ್ಚ, ಸಮಯ ಉಳಿತಾಯವಾಗಿದ್ದು, ಸಾಮಾನ್ಯ ಕಟ್ಟಡಗಳಿಗಿಂತ ಹೆಚ್ಚಿನ ಬಾಳಿಕೆ ಬರಲಿದೆ ಎಂದು ಎಲ್&ಟಿ ಕಂಪೆನಿ ಹೇಳಿದೆ.

ಪ್ರಧಾನಿ ಮೋದಿ ಮೆಚ್ಚುಗೆ

ಇನ್ನು ಈ ಕಟ್ಟಡ ನಿರ್ಮಾಣದ ಬಗ್ಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಕೂಡ ಹೆಮ್ಮೆ ವ್ಯಕ್ತಪಡಿಸಿದ್ದಾರೆ. ಎಕ್ಸ್ ಖಾತೆಯಲ್ಲಿ ಈ ಅಂಚೆ ಕಚೇರಿಯ ಫೋಟೋ ಹಂಚಿಕೊಂಡಿರುವ ಅವರು, ಬೆಂಗಳೂರಿನ ಕೇಂಬ್ರಿಡ್ಜ್ ಲೇಔಟ್ ನಲ್ಲಿ ಭಾರತದ ಮೊದಲ 3ಡಿ ಮುದ್ರಿತ ಅಂಚೆ ಕಚೇರಿಯನ್ನು ನೋಡಲು ಪ್ರತಿಯೊಬ್ಬ ಭಾರತೀಯನು ಹೆಮ್ಮೆ ಪಡುತ್ತಾನೆ. ಇದನ್ನು ಪೂರ್ಣಗೊಳಿಸುವಲ್ಲಿ ಶ್ರಮಿಸಿದ ಎಲ್ಲರಿಗೂ ಅಭಿನಂದನೆಗಳು ಎಂದು ಬರೆದುಕೊಂಡಿದ್ದಾರೆ.

Related post

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ ಮದುವೆ

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ…

ನ್ಯೂಸ್ ಆರೋ: ಬರೋಬ್ಬರಿ 25 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ಮಂತ್ರ ಮಾಂಗಲ್ಯ ಮೂಲಕ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ತುಮಕೂರಲ್ಲಿ ನಡೆದಿದೆ. ಹೌದು ಜನಾಂದೋಲನದಲ್ಲಿ…
ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು! ಏನಿದು ವಿಷಯ?

ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು!…

ನ್ಯೂಸ್ ಆರೋ: ಎಷ್ಟೋ ಬಾರಿ ನಾವು ಈ ಹೊಟೇಲ್ ಗಳಿಗೆ ಹೋದಾಗ, ಅಲ್ಲಿ ಜನರು ವೆಜ್ ಮಂಚೂರಿಯನ್ನು ಆರ್ಡರ್ ಮಾಡಿದರೆ ಚಿಕನ್ ಮಂಚೂರಿ ತಂದು ಟೇಬಲ್ ಮೇಲೆ ಇಟ್ಟಿರುವ…
ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ನ್ಯೂಸ್ ಆರೋ: ಬಾಲಿವುಡ್‌ನ ಖ್ಯಾತ ನಟಿ ಅನುಷ್ಕಾ ಶರ್ಮಾ ಹಾಗೂ ಟೀಂ ಇಂಡಿಯಾದ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರ ಪರಿಚಯ ಯಾರಿಗೂ ಅಗತ್ಯವಿಲ್ಲ. ಇತ್ತೀಚೆಗಷ್ಟೇ ಅಂದರೆ ಮೇ…

Leave a Reply

Your email address will not be published. Required fields are marked *