ನೆಹರು ಮಾಡಿದ “ಆ ಎರಡು ತಪ್ಪುಗಳೇ” ಸಂಪೂರ್ಣ ಕಾಶ್ಮೀರ ನಮ್ಮದಾಗದಿರಲು ಕಾರಣ – ಅಮಿತ್ ಷಾ ಅವರು ನೆಹರು ಬಗ್ಗೆ ಹೇಳಿದ್ದೇನು?

ನೆಹರು ಮಾಡಿದ “ಆ ಎರಡು ತಪ್ಪುಗಳೇ” ಸಂಪೂರ್ಣ ಕಾಶ್ಮೀರ ನಮ್ಮದಾಗದಿರಲು ಕಾರಣ – ಅಮಿತ್ ಷಾ ಅವರು ನೆಹರು ಬಗ್ಗೆ ಹೇಳಿದ್ದೇನು?

ನ್ಯೂಸ್ ಆ್ಯರೋ : ನೆಹರು ಅವರು ಎಸಗಿದ ಎರಡು ಪ್ರಮಾದಗಳಿಂದ ಜಮ್ಮು ಮತ್ತು ಕಾಶ್ಮೀರದ ಜನತೆ ಇಂದಿಗೂ ಕಷ್ಟ ಅನುಭವಿಸುತ್ತಿದ್ದಾರೆ. ಕಳೆದ 5 ದಶಕಗಳಲ್ಲಿ ಕಾಶ್ಮೀರಿಗಳು ಅನುಭವಿಸಿದ ಸಂಕಷ್ಟಕ್ಕೆ ನೆಹರು ಅವರೇ ಕಾರಣ ಎಂದು ಅಮಿತ್‌ ಶಾ ಟೀಕಿಸಿದ್ದಾರೆ.

ಪಾಕಿಸ್ತಾನ ಆಕ್ರಮಿತ ಕಾಶ್ಮೀರ (ಪಿಒಕೆ) ನಮ್ಮದೇ ಎಂದು ಮತ್ತೊಮ್ಮೆ ಪುನರುಚ್ಚರಿಸಿರುವ ಕೇಂದ್ರ ಗೃಹ ಸಚಿವ ಅಮಿತ್‌ ಶಾ, ಪಿಒಕೆ ಇಂದು ನಮ್ಮ ದೇಶದ ಭೂಭಾಗವಾಗದೇ ಇರುವುದಕ್ಕೆ ದೇಶದ ಮೊದಲ ಪ್ರಧಾನಿ ಜವಾಹರ ಲಾಲ್‌ ನೆಹರು ಎಸಗಿದ ಎರಡು ಪ್ರಮಾದಗಳೇ ಕಾರಣ ಎಂದು ಕಿಡಿಕಾರಿದ್ದಾರೆ. ಜೊತೆಗೆ ನೆಹರು ಮಾಡಿದ ತಪ್ಪಿನಿಂದಾಗಿ ಜಮ್ಮು ಮತ್ತು ಕಾಶ್ಮೀರದ ಜನರು ಕಷ್ಟ ಅನುಭವಿಸುವಂತಾಯಿತು ಎಂದು ದೂರಿದ್ದಾರೆ.

ಲೋಕಸಭೆಯಲ್ಲಿ ಕಾಶ್ಮೀರ ಮೀಸಲು ತಿದ್ದುಪಡಿ ಮಸೂದೆ ಬಗ್ಗೆ ಅಮಿತ್ ಷಾ ಹೇಳಿದ್ದೇನು..?

ಬುಧವಾರ ಲೋಕಸಭೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಮೀಸಲು (ತಿದ್ದುಪಡಿ) ಹಾಗೂ ಜಮ್ಮು ಮತ್ತು ಕಾಶ್ಮೀರ ಕ್ಷೇತ್ರ ಪುನರ್‌ವಿಂಗಡನಾ (ತಿದ್ದುಪಡಿ) ಮಸೂದೆ ಕುರಿತು ಮಾತನಾಡಿದ ಅಮಿತ್‌ ಶಾ, ಇದು ನ್ಯಾಯದ ಪ್ರಶ್ನೆಯೂ ಹೌದು. ಈ ಹಿಂದೆ ಜಮ್ಮುವಿನಲ್ಲಿ 37ಸ್ಥಾನಗಳಿದ್ದವು. ಈಗ ಅದನ್ನು 43ಕ್ಕೆ ಹೆಚ್ಚಿಸಲಾಗಿದೆ. ಈ ಹಿಂದೆ ಕಾಶ್ಮೀರದಲ್ಲಿ 46ಸ್ಥಾನಗಳಿದ್ದವು. ಇದೀಗ 47ನೇ ಸ್ಥಾನಕ್ಕೆ ಹೆಚ್ಚಿಸಲಾಗಿದೆ‌.

ಪಾಕ್ ಆಕ್ರಮಿತ ಕಾಶ್ಮೀರ ನಮ್ಮದಾಗಿರುವುದರಿಂದ ನಾವು ಅದಕ್ಕೆ 24ಸ್ಥಾನಗಳನ್ನು ಕಾಯ್ದಿರಿಸಿದ್ದೇವೆ‌. ತಿದ್ದುಪಡಿ ಮಸೂದೆಯು ಇಬ್ಬರು ಕಾಶ್ಮೀರಿ ಪಂಡಿತ ಸಮುದಾಯದ ವ್ಯಕ್ತಿಗಳನ್ನು ರಾಜ್ಯ ವಿಧಾನಸಭೆಗೆ ನಾಮನಿರ್ದೇಶನ ಮಾಡಲು ಅವಕಾಶ ಕಲ್ಪಿಸುತ್ತದೆ. ಜೊತೆಗೆ ಪಾಕ್ ಆಕ್ರಮಿತ ಕಾಶ್ಮೀರದಿಂದ ಹೊರಹಾಕಲ್ಪಟ್ಟ ವ್ಯಕ್ತಿಗಳಿಗೆ ಮೀಸಲಿಡಲಾಗುತ್ತದೆ. ಈ ಎರಡೂ ತಿದ್ದುಪಡಿಗಳು ಕಳೆದ 70 ವರ್ಷಗಳಿಂದ ತಮ್ಮ ಹಕ್ಕುಗಳಿಂದ ವಂಚಿತರಾದವರಿಗೆ ನ್ಯಾಯ ದೊರಕಿಸಿಕೊಡುತ್ತವೆ ಮತ್ತು ಸ್ಥಳಾಂತರಗೊಂಡವರಿಗೆ ಶಾಸನಸಭೆಯಲ್ಲಿ ತಮ್ಮ ಅವಕಾಶ ಕಲ್ಪಿಸುತ್ತವೆ ಎಂದರು.

ಅಮಿತ್ ಷಾ ಪ್ರಕಾರ ನೆಹರೂ ಎಸಗಿದ ಎರಡು ಪ್ರಮಾದವೇನು..?

‘ಇದೇ ವೇಳೆ ಕಳೆದ 5 ದಶಕಗಳಲ್ಲಿ ಕಾಶ್ಮೀರಿಗಳು ಅನುಭವಿಸಿದ ಸಂಕಷ್ಟಕ್ಕೆ ನೆಹರು ಅವರೇ ಕಾರಣ ಎಂದು ಟೀಕಿಸಿದ ಅಮಿತ್‌ ಶಾ, ‘ನೆಹರು ಅವರು ಎಸಗಿದ ಎರಡು ಪ್ರಮಾದಗಳಿಂದ ಜಮ್ಮು ಮತ್ತು ಕಾಶ್ಮೀರದ ಜನತೆ ಇಂದಿಗೂ ಕಷ್ಟ ಅನುಭವಿಸುತ್ತಿದ್ದಾರೆ. ನೆಹರು ಎಸಗಿದ ಮೊದಲ ತಪ್ಪೆಂದರೆ 1962ರ ಪಾಕಿಸ್ತಾನದ ವಿರುದ್ಧ ಯುದ್ಧದಲ್ಲಿ ಭಾರತ ಗೆಲುವಿನ ಹಂತದಲ್ಲಿದ್ದಾಗ ಮತ್ತು ಭಾರತೀಯ ಸೇನೆ ಹಾಲಿ ಪಾಕ್‌ನ ಭಾಗವಾಗಿರುವ ಪಂಜಾಬ್‌ ಪ್ರಾಂತ್ಯವನ್ನು ಪ್ರವೇಶಿಸಿದ್ದ ವೇಳೆ ನೆಹರು ಕದನ ವಿರಾಮ ಘೋಷಿಸಿದರು.

ಈ ಮೂಲಕ ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಜನನಕ್ಕೆ ಕಾರಣವಾದರು. ಒಂದು ವೇಳೆ 3 ದಿನಗಳ ಬಳಿಕ ಕದನ ವಿರಾಮ ಘೋಷಿಸಿದ್ದರೆ ಪಾಕ್‌ ಆಕ್ರಮಿತ ಕಾಶ್ಮೀರ ಕೂಡಾ ಭಾರತದ ವಶದಲ್ಲೇ ಇರುತ್ತಿತ್ತು. ಇಡೀ ಕಾಶ್ಮೀರವನ್ನು ಗೆಲ್ಲುವ ಮೊದಲೇ ನೆಹರು ಕದನ ವಿರಾಮ ಘೋಷಿಸಿದರು. ಇದು ಬಹುದೊಡ್ಡ ಪ್ರಮಾದ. ಕದನ ವಿರಾಮ ಘೋಷಿಸಿದ್ದು ತಪ್ಪು ನಿರ್ಧಾರ ಎಂದು ಬಳಿಕ ಸ್ವತಃ ನೆಹರು ಒಪ್ಪಿಕೊಂಡಿದ್ದರು’ ಎಂದು ಶಾ ಹೇಳಿದರು.

ಇನ್ನು, ‘2ನೇ ಪ್ರಮಾದವೆಂದರೆ ಕಾಶ್ಮೀರ ವಿಷಯವನ್ನು ಆತುರಾತುರವಾಗಿ ವಿಶ್ವಸಂಸ್ಥೆ ಬಳಿಗೆ ಕೊಂಡೊಯ್ದಿದ್ದು. ಈ ವಿಷಯವನ್ನು ಭಾರತ ವಿಶ್ವಸಂಸ್ಥೆಯ ಸಂವಿಧಾನದ 51ನೇ ವಿಧಿಯ ಅನ್ವಯ ದಾಖಲಿಸಬೇಕಿತ್ತೇ ವಿನಃ 35ನೇ ವಿಧಿಯ ಅನ್ವಯ ಅಲ್ಲ’ ಎಂದೂ ಅಮಿತ್‌ ಶಾ ಟೀಕಿಸಿದರು.

Related post

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…
ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…

Leave a Reply

Your email address will not be published. Required fields are marked *