ಆರು ತಿಂಗಳ ಬಳಿಕ ಬಾಗಿಲು ತೆರೆದ ಕೇದಾರನಾಥ ದೇಗುಲ – ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾದ ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ

ಆರು ತಿಂಗಳ ಬಳಿಕ ಬಾಗಿಲು ತೆರೆದ ಕೇದಾರನಾಥ ದೇಗುಲ – ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾದ ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ

ನ್ಯೂಸ್‌ ಆ್ಯರೋ : ಚಳಿಗಾಲದ ಹಿಮದಿಂದಾಗಿ ಕಳೆದ 6 ತಿಂಗಳು ಮುಚ್ಚಲಾಗಿದ್ದ ಕೇದಾರನಾಥ ದೇವಸ್ಥಾನದ ಬಾಗಿಲನ್ನು ಇಂದು ಬೆಳಗ್ಗೆ ತೆರೆಯಲಾಗಿದೆ. ಬೆಳಿಗ್ಗೆ 6 ಗಂಟೆ 20ನಿಮಿಷಕ್ಕೆ ವೇದಘೋಷದೊಂದಿಗೆ ಕೇದಾರನಾಥ ಧಾಮದ ಬಾಗಿಲು ಭಕ್ತರ ದರ್ಶನಕ್ಕಾಗಿ ತೆರೆಯಲಾಯಿತು.

ಈ ಸಂದರ್ಭದಲ್ಲಿ ಸಾವಿರಾರು ಭಕ್ತರಿಂದ ಹರಹರ ಮಹಾದೇವ್‌ ಎಂಬ ಘೋಷಣೆ ಮತ್ತು ದೈವ ಕೀರ್ತನೆಗಳು ಕೇದಾರ್ ಧಾಮ್‌ನಲ್ಲಿ ಪ್ರತಿಧ್ವನಿಸಿದವು. ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ ಕೂಡ ಕೇದಾರ್ ಧಾಮದಲ್ಲಿ ಹಾಜರಿದ್ದು, ಈ ಐತಿಹಾಸಿಕ ಕ್ಷಣಕ್ಕೆ ಅವರು ಸಾಕ್ಷಿಯಾದರು.

ಸಡಗರದ ನಡುವೆ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಯಿತು. ಕೇದಾರನಾಥ್ ಪಂಚಮುಖಿ ಭೋಗ್ ವಿಗ್ರಹ, ಚಾಲ್ ಉತ್ಸವ ವಿಗ್ರಹಗಳನ್ನ ಡೋಲಿಯಲ್ಲಿ ಇರಿಸಿ ರಾವಲ್ ನಿವಾಸದಿಂದ ದೇವಾಲಯದ ಆವರಣಕ್ಕೆ ತರಲಾಯಿತು. ಈ ವೇಳೆ ದಾರಿ ಉದ್ದಕ್ಕೂ ಭಕ್ತರ ಹರಹರ ಮಹಾದೇವ್ ಎಂಬ ಘೋಷಣೆಗಳು ಮೊಳಗಿದವು.

ಕೇದಾರನಾಥ ದೇಗುಲದ ದ್ವಾರಗಳನ್ನು ತೆರೆದ ನಂತರ, ಭಕ್ತರು ಕೇದಾರೇಶ್ವರನ ದರ್ಶನ ಪಡೆದರು. ಕೇದಾರನಾಥ್ ದೇವಸ್ಥಾನದ ಮಹಾದ್ವಾರ ತೆರೆಯುವ ಮುನ್ನ 23 ಕ್ವಿಂಟಲ್ ವಿವಿಧ ಹೂವುಗಳಿಂದ ಇಡೀ ದೇವಸ್ಥಾನವನ್ನು ಅಲಂಕಾರ ಮಾಡಲಾಗಿತ್ತು. ಹವಾಮಾನ ವೈಪರೀತ್ಯದ ನಡುವೆಯೂ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಕೇದಾರನಾಥ ಧಾಮಕ್ಕೆ ಆಗಮಿಸಿದ್ದರು. ಇನ್ನು ಕೇದಾರನಾಥ ಧಾಮದಲ್ಲಿ ಹಿಮಪಾತವು ಆಗುತ್ತಿದೆ. ಅಲ್ಲದೇ ಮುಂದಿನ ಕೆಲವು ದಿನಗಳಲ್ಲಿ ಮಳೆ ಮತ್ತು ಹಿಮಪಾತ ಆಗುವ ಬಗ್ಗೆ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ಸಹ ನೀಡಿದೆ.

ಇಲ್ಲಿಗೆ ಬರುವ ಭಕ್ತರಿಗೆ ಆರೋಗ್ಯದ ಸಮಸ್ಯೆ ಎದುರಾದಲ್ಲಿ ತಕ್ಷಣ ಚಿಕಿತ್ಸೆಗಾಗಿ ವೈದ್ಯರ ತಂಡವನ್ನ ನಿಯೋಜನೆ ಮಾಡಲಾಗಿದೆ. ಹಾಗೆಯೇ ಯಾತ್ರೆಯ ಮಾರ್ಗಗಳಲ್ಲಿ 130 ವೈದ್ಯರನ್ನು ನಿಯೋಜಿಸಲಾಗಿದೆ. ವೈದ್ಯರು, ಅರೆವೈದ್ಯಕೀಯ ಸಿಬ್ಬಂದಿ, ಆಕ್ಸಿಜನ್ ಸಿಲಿಂಡರ್ಗಳು ಮತ್ತು ಔಷಧಗಳಿಗೂ ಸೂಕ್ತ ವ್ಯವಸ್ಥೆ ಮಾಡಲಾಗಿದೆ. ಸದ್ಯ ಹಿಮಾಪಾತವಾಗುತ್ತಿರುವ ಹಿನ್ನೆಲೆ ಕೇದಾರನಾಥ ಯಾತ್ರೆಯ ಮುಂಗಡ ನೋಂದಣಿ ಸ್ಥಗಿತಗೊಳಿಸಲಾಗಿದೆ.

Related post

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…
ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…

Leave a Reply

Your email address will not be published. Required fields are marked *