ಕೇರಳದಲ್ಲಿ ಮತ್ತೆ ನಿಫಾ ವೈರಸ್ ಭೀತಿ ; ಜ್ವರದಿಂದ ಇಬ್ಬರು ಸಾವು

ಕೇರಳದಲ್ಲಿ ಮತ್ತೆ ನಿಫಾ ವೈರಸ್ ಭೀತಿ ; ಜ್ವರದಿಂದ ಇಬ್ಬರು ಸಾವು

ನ್ಯೂಸ್ ಆ್ಯರೋ‌ : 2018ರಲ್ಲಿ ಕೇರಳವನ್ನು ಬೆಚ್ಚಿ ಬೀಳಿಸಿದ್ದ ನಿಫಾ ವೈರಸ್ ಮತ್ತೊಮ್ಮೆ ಮಲೆಯಾಳಿಗರ ನಿದ್ದೆಗೆಡಿಸಿದೆ. ಕೇರಳದಲ್ಲಿ ಇಬ್ಬರು ಜ್ವರದಿಂದ ಸಾವನ್ನಪ್ಪಿದ್ದು, ಇದಕ್ಕೆ ನಿಫಾ ವೈರಸ್ ಕಾರಣ ಎನ್ನುವ ಶಂಕೆ ವ್ಯಕ್ತವಾಗಿದೆ.

ಅಸ್ವಾಭಾವಿಕ ಸಾವು

ಕೋಝಿಕ್ಕೋಡ್ ಖಾಸಗಿ ಆಸ್ಪತ್ರೆಯಲ್ಲಿ ಸೋಮವಾರ ಜ್ವರ ಬಾಧಿಸಿದ ಇಬ್ಬರು ಮೃತಪಟ್ಟಿರುವುದರಿಂದ ಜಿಲ್ಲೆಯಾದ್ಯಂತ ಎಚ್ಚರಿಕೆ ನೀಡಲಾಗಿದೆ. ಈ ಸಾವಿಗೆ ನಿಫಾ ವೈರಸ್ ಕಾರಣ ಎನ್ನಲಾಗಿದ್ದು, ಮೃತರಲ್ಲಿ ಒಬ್ಬರ ಸಂಬಂಧಿಕರು ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಚಿಕಿತ್ಸೆ ಪಡೆಯುತ್ತಿರುವ ವ್ಯಕ್ತಿಯ ವೈದ್ಯಕೀಯ ಪರೀಕ್ಷೆಯ ಫಲಿತಾಂಶ ಇನ್ನಷ್ಟೇ ಬರಬೇಕಿದೆ.

ನಿಫಾ ವೈರಸ್ ಬಾಧೆಯ ಭೀತಿಯ ಹಿನ್ನಲೆಯಲ್ಲಿ ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ ನಡೆಯಿತು. ಮುಂಜಾಗ್ರತಾ ಕ್ರಮಗಳ ಬಗ್ಗೆ ಚರ್ಚೆ ನಡೆಸಲಾಯಿತು.

ನಿಫಾ ವೈರಸ್ ಬಾವಲಿಗಳಿಂದ ಮನುಷ್ಯರಿಗೆ ಹರಡುತ್ತದೆ. ಬಾವಲಿಗಳು ಕಚ್ಚಿದ ಹಣ್ಣನ್ನು ತಿನ್ನುವುದರಿಂದ ಹರಡುತ್ತದೆ. 2018ರಲ್ಲಿ ಕೋಝಿಕ್ಕೋಡ್ ಮತ್ತು ಮಲಪ್ಪುರಂ ಜಿಲ್ಲೆಗಳಲ್ಲಿ ನಿಫಾ ಹಬ್ಬಿತ್ತು. 2021ರಲ್ಲಿಯೂ ನಿಫಾ ವೈರಸ್ ಹರಡಿತ್ತು. ಈವರೆಗೂ ಈ ರೋಗಕ್ಕೆ ಔಷಧ ಕಂಡುಹಿಡಿದಿಲ್ಲ ಈ ವೈರಸ್ ಪತ್ತೆಯಾದರೆ ಶೇ. 74ರಷ್ಟು ಸಾವು ಖಚಿತ ಎನ್ನಲಾಗಿದೆ. ಹೀಗಾಗಿ ಭೀತಿ ಸೃಷ್ಟಿಯಾಗಿದೆ.

Related post

ಅಕ್ಟೋಬರ್‌ನಲ್ಲಿ ಹಣಕಾಸಿನ ನಿಯಮಗಳಲ್ಲಿ ಭಾರೀ ಬದಲಾವಣೆ – ₹ 2000 ನೋಟು ರದ್ದು, ಹೊಸ ಟಿಸಿಎಸ್ ನಿಯಮ ಜಾರಿ

ಅಕ್ಟೋಬರ್‌ನಲ್ಲಿ ಹಣಕಾಸಿನ ನಿಯಮಗಳಲ್ಲಿ ಭಾರೀ ಬದಲಾವಣೆ – ₹ 2000 ನೋಟು…

ನ್ಯೂಸ್‌ ಆ್ಯರೋ : ತಿಂಗಳಿಗೊಮ್ಮೆ ಹಣಕಾಸಿನ ವ್ಯವಹಾರಗಳ ನಿಯಮಗಳಲ್ಲಿ ಬದಲಾವಣೆ ಆಗುವುದು ಸಹಜ ಪ್ರಕ್ರಿಯೆ. ಇದೀಗ ಅಕ್ಟೋಬರ್‌ ತಿಂಗಳು ಪ್ರಾರಂಭಕ್ಕೆ ಕೆಲ ದಿನವಿರುವಾಗಲೇ ಹಣಕಾಸಿಗೆ ಸಂಬಂಧಿಸಿದ ಕೆಲವು ನಿಯಮಗಳಲ್ಲಿ…
ಏನೂ ಕೆಲಸ ಮಾಡದೇ ಈ ತಾತ ವರ್ಷಕ್ಕೆ 6.5 ಲಕ್ಷ ದುಡೀತಾರೆ..!! – ಕೋಟ್ಯಾಂತರ ರೂಪಾಯಿ ಒಡೆಯ ಈ ತಾತ ಮಾಡೋದೇನು?

ಏನೂ ಕೆಲಸ ಮಾಡದೇ ಈ ತಾತ ವರ್ಷಕ್ಕೆ 6.5 ಲಕ್ಷ ದುಡೀತಾರೆ..!!…

ನ್ಯೂಸ್ ಆ್ಯರೋ : ಎಷ್ಟು ದುಡಿದರೂ ವರ್ಷಕ್ಕೆ 5- 6 ಲಕ್ಷ ಸಂಪಾದಿಸೋದೇ ಕಷ್ಟ ಎನ್ನುವವರ ಮಧ್ಯೆ ಏನೂ ಕೆಲಸವಿಲ್ಲದ ವೃದ್ಧರೊಬ್ಬರು 10 ಕೋಟಿ ರೂ. ಆದಾಯ ಗಳಿಸಿದ್ದಾರೆ.…
ಖಾಲಿ ಹೊಟ್ಟೆಯಲ್ಲಿ ಕರಿಬೇವು ತಿಂದ್ರೆ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ? – ಆರೋಗ್ಯದ ಮೇಲೆ ಕಾಳಜಿ ಇರುವವರು ಈ ವರದಿ ಓದಿ..

ಖಾಲಿ ಹೊಟ್ಟೆಯಲ್ಲಿ ಕರಿಬೇವು ತಿಂದ್ರೆ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ? – ಆರೋಗ್ಯದ…

ನ್ಯೂಸ್ ಆ್ಯರೋ : ಕರಿಬೇವಿನ ಎಲೆಗಳನ್ನು ಭಾರತೀಯ ಅಡುಗೆಮನೆಯಲ್ಲಿ ವ್ಯಾಪಕವಾಗಿ ಬಳಸಲಾಗುತ್ತದೆ. ಅದರಲ್ಲೂ ದಕ್ಷಿಣ ಭಾರತದ ಬಹುತೇಕ ಖಾದ್ಯಗಳಲ್ಲಿ ಕರಿಬೇವು ಮುಖ್ಯ. ಕರಿಬೇವಿನ ಎಲೆಗಳು ಯಾವುದೇ ಆಹಾರದ ರುಚಿಯನ್ನು…

Leave a Reply

Your email address will not be published. Required fields are marked *