ತನ್ನ ಕಿಡ್ನಿ ನೀಡಿ ತಂದೆಗೆ ಮರುಜೀವ ನೀಡಿದ ಲಾಲೂ ಪುತ್ರಿ ರೋಹಿಣಿ – ಲಾಲೂ ಕಿಡ್ನಿ ಶಸ್ತ್ರಚಿಕಿತ್ಸೆ ಯಶಸ್ವಿ

ತನ್ನ ಕಿಡ್ನಿ ನೀಡಿ ತಂದೆಗೆ ಮರುಜೀವ ನೀಡಿದ ಲಾಲೂ ಪುತ್ರಿ ರೋಹಿಣಿ – ಲಾಲೂ ಕಿಡ್ನಿ ಶಸ್ತ್ರಚಿಕಿತ್ಸೆ ಯಶಸ್ವಿ

ನ್ಯೂಸ್ ಆ್ಯರೋ : ಬಿಹಾರದ ಮಾಜಿ ಸಿಎಂ ಲಾಲೂ ಪ್ರಸಾದ್ ಯಾದವ್ ಅವರ ಕಿಡ್ನಿ ಕಸಿ ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿದೆ ಎಂದು ಪುತ್ರ ತೇಜಸ್ವಿ ಯಾದವ್ ತಿಳಿಸಿದ್ದಾರೆ.


ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ಲಾಲೂ ಪ್ರಸಾದ್ ಅವರಿಗೆ ಸಿಂಗಾಪುರದ ಮೌಂಟ್ ಎಲಿಜಬೆತ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಲಾಲೂ ಅವರ ಮಗಳು ರೋಹಿಣಿ ಆಚಾರ್ಯ ಒಂದು ಕಿಡ್ನಿ ನೀಡಲು ಮುಂದಾಗಿದ್ದರು. ಇದೀಗ ಕಿಡ್ನಿ ಕಸಿ ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿದೆ ಎಂದು ಪುತ್ರ ತೇಜಸ್ವಿ ಯಾದವ್ ಮಾಹಿತಿ ನೀಡಿದ್ದಾರೆ.

ಕಿಡ್ನಿ ನೀಡುತ್ತಿರುವ ರೋಹಿಣಿ ಆಚಾರ್ಯ ಟ್ವೀಟ್ ಮಾಡಿ, ಕೋಟ್ಯಾಂತರ ಜನರಿಗೆ ಧ್ವನಿ ನೀಡಿದವರು ಲಾಲು ಪ್ರಸಾದ್ ಅವರು. ಎಲ್ಲರೂ ಅವರ ಆರೋಗ್ಯಕ್ಕಾಗಿ ಪ್ರಾರ್ಥಿಸಬೇಕು. ಕೆಲವೇ ದಿನಗಳಲ್ಲಿ ಅವರು ಗುಣಮುಖರಾಗಲಿದ್ದಾರೆ ಎಂದು ಬರೆದುಕೊಂಡಿದ್ದಾರೆ.

ಕೆಲ ದಿನಗಳ ಹಿಂದೆ ಮೂತ್ರಪಿಂಡ ಪರೀಕ್ಷೆಗೆಂದು ಸಿಂಗಾಪುರಕ್ಕೆ ತೆರಳಿದ್ದ ವೇಳೆ ಲಾಲೂ ಅವರಿಗೆ ಅಲ್ಲಿನ ವೈದ್ಯರು ಕಿಡ್ನಿ ಕಸಿ ಮಾಡುವಂತೆ ಸೂಚಿಸಿದ್ದರು. ಆ ಬಳಿಕ ಅವರ ಪುತ್ರಿ ರೋಹಿಣಿ ಆಚಾರ್ಯ ಕಿಡ್ನಿ ದಾನ ಮಾಡಲು ನಿರ್ಧರಿಸಿದ್ದರು. ನನ್ನ ತಂದೆಗಾಗಿ ನಾನು ಏನು ಬೇಕಾದರೂ ಮಾಡುತ್ತೇನೆ ಎಂದು ರೋಹಿಣಿ ಟ್ವೀಟ್ ಮಾಡಿದ್ದರು.

ಭಾನುವಾರ ತಡರಾತ್ರಿ ಅವರನ್ನು ಕಿಡ್ನಿ ಕಸಿ ಶಸ್ತ್ರಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸದ್ಯ ರೋಹಿಣಿ ಅವರ ಕಿಡ್ನಿ ಶೇ.90ರಿಂದ 95ರಷ್ಟು ಕೆಲಸ ಮಾಡುತ್ತಿದೆ. ಲಾಲು ಅವರ ಎರಡೂ ಕಿಡ್ನಿಗಳು ಶೇ.28ರಷ್ಟು ಕೆಲಸ ಮಾಡುತ್ತಿವೆ. ಕಸಿ ಮಾಡಿದ ನಂತರ ಸುಮಾರು 70 ಪ್ರತಿಶತವು ಕೆಲಸ ಮಾಡಲು ಪ್ರಾರಂಭಿಸುತ್ತದೆ. ಆರೋಗ್ಯದ ದೃಷ್ಟಿಯಿಂದ ಇದು ಸಾಕಷ್ಟು ಉತ್ತಮ ಪ್ರಮಾಣ ಎಂದು ವೈದ್ಯರು ತಿಳಿಸಿದ್ದಾರೆ.

Related post

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…
ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…

Leave a Reply

Your email address will not be published. Required fields are marked *