ಪುರುಷನಾಗಿ ಬದಲಾಗಲು ಮಹಿಳಾ ಪೊಲೀಸ್ ಪೇದೆ ಮನವಿ – ಅಸ್ತು‌ ಎಂದ ಸರ್ಕಾರ : ಶೀಘ್ರ ಲಿಂಗ ಬದಲಾವಣೆ ಶಸ್ತ್ರಚಿಕಿತ್ಸೆ

ಪುರುಷನಾಗಿ ಬದಲಾಗಲು ಮಹಿಳಾ ಪೊಲೀಸ್ ಪೇದೆ ಮನವಿ – ಅಸ್ತು‌ ಎಂದ ಸರ್ಕಾರ : ಶೀಘ್ರ ಲಿಂಗ ಬದಲಾವಣೆ ಶಸ್ತ್ರಚಿಕಿತ್ಸೆ

ನ್ಯೂಸ್ ಆ್ಯರೋ‌ : ಲಿಂಗ ಪರಿವರ್ತನೆಯ ಸುದ್ದಿಗಳು ಆಗಾಗ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತವೆ. ಸದ್ಯ ಅಂತಹದ್ದೆ ಪ್ರಕರಣವೊಂದು ಮಧ್ಯಪ್ರದೇಶದಲ್ಲಿ ನಡೆದಿದೆ. ಪುರುಷನಾಗಿ ಬದಲಾಗುವ ಆಸೆ ವ್ಯಕ್ತಪಡಿಸಿ ಲಿಂಗ ಬದಲಾವಣೆ ಶಸ್ತ್ರಚಿಕಿತ್ಸೆಗೆ ಅನುಮತಿ ಕೋರಿದ್ದ ಮಹಿಳಾ ಕಾನ್ಸ್ ಟೇಬಲ್ ಗೆ ಮಧ್ಯಪ್ರದೇಶ ಸರಕಾರ ಸಮ್ಮತಿ ನೀಡಿದೆ.

ಯಾರು ಈ ಕಾನ್ಸ್ ಟೇಬಲ್?

ದೀಪಿಕಾ ಕೋಥಾರಿ ಈ ರೀತಿಯ ಮನವಿ ಸಲ್ಲಿಸಿದವರು. ಅವರು ಮಧ್ಯಪ್ರದೇಶದ ರಾತ್ಲಮ್ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಅಲ್ಲಿನ ಗೃಹ ಇಲಾಖೆಗೆ ಕಳೆದ ವರ್ಷ ದೀಪಿಕಾ ಸಲ್ಲಿಸಿದ್ದ ಅರ್ಜಿಗೆ ಈಗ ಅನುಮತಿ ಸಿಕ್ಕಿದೆ.

ವೈದ್ಯಕೀಯ ವರದಿಗಳ ಆಧಾರದಲ್ಲಿ ಲಿಂಗ ಪರಿವರ್ತನೆಗೆ ಅವಕಾಶ ನೀಡಲಾಗಿದೆ. ಡಾ. ರಾಜೀವ್ ಶರ್ಮಾ ಶಸ್ತ್ರಚಿಕಿತ್ಸೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಸರಕಾರಿ ನೌಕರರಿಗೆ ಲಿಂಗ ಪರಿವರ್ತನೆ ಅನುಮತಿಸಲು ಯಾವುದೇ ಸ್ಪಷ್ಟ ನಿಯಮಗಳಿಲ್ಲ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ. ಲಿಂಗ ಬದಲಾವಣೆ ಬಳಿಕ ದೀಪಿಕಾ ಅವರಿಗೆ ಮಹಿಳಾ ನೌಕರರಿಗೆ ಸಿಗುವ ಯಾವುದೇ ಸವಲತ್ತು ನೀಡಲಾಗುವುದಿಲ್ಲ ಎಂದು ತಿಳಿಸಲಾಗಿದೆ.

Related post

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ ಮದುವೆ

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ…

ನ್ಯೂಸ್ ಆರೋ: ಬರೋಬ್ಬರಿ 25 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ಮಂತ್ರ ಮಾಂಗಲ್ಯ ಮೂಲಕ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ತುಮಕೂರಲ್ಲಿ ನಡೆದಿದೆ. ಹೌದು ಜನಾಂದೋಲನದಲ್ಲಿ…
ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು! ಏನಿದು ವಿಷಯ?

ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು!…

ನ್ಯೂಸ್ ಆರೋ: ಎಷ್ಟೋ ಬಾರಿ ನಾವು ಈ ಹೊಟೇಲ್ ಗಳಿಗೆ ಹೋದಾಗ, ಅಲ್ಲಿ ಜನರು ವೆಜ್ ಮಂಚೂರಿಯನ್ನು ಆರ್ಡರ್ ಮಾಡಿದರೆ ಚಿಕನ್ ಮಂಚೂರಿ ತಂದು ಟೇಬಲ್ ಮೇಲೆ ಇಟ್ಟಿರುವ…
ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ನ್ಯೂಸ್ ಆರೋ: ಬಾಲಿವುಡ್‌ನ ಖ್ಯಾತ ನಟಿ ಅನುಷ್ಕಾ ಶರ್ಮಾ ಹಾಗೂ ಟೀಂ ಇಂಡಿಯಾದ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರ ಪರಿಚಯ ಯಾರಿಗೂ ಅಗತ್ಯವಿಲ್ಲ. ಇತ್ತೀಚೆಗಷ್ಟೇ ಅಂದರೆ ಮೇ…

Leave a Reply

Your email address will not be published. Required fields are marked *