ಅಂಬಾನಿ ಪುತ್ರಿಗೆ ಅವಳಿ ಮಕ್ಕಳ ಯೋಗ – ಪುಟಾಣಿಗಳಿಗೆ ಆದಿಯಾ, ಕೃಷ್ಣ ಎಂದು ನಾಮಕರಣ

ಅಂಬಾನಿ ಪುತ್ರಿಗೆ ಅವಳಿ ಮಕ್ಕಳ ಯೋಗ – ಪುಟಾಣಿಗಳಿಗೆ ಆದಿಯಾ, ಕೃಷ್ಣ ಎಂದು ನಾಮಕರಣ

ನ್ಯೂಸ್ ಆ್ಯರೋ : ಶ್ರೀಮಂತ ಉದ್ಯಮಿ ಮುಖೇಶ್ ಅಂಬಾನಿ ಮತ್ತು ನೀತಾ ಅಂಬಾನಿ ಪುತ್ರಿ ಇಶಾ ಅಂಬಾನಿ ಅವರು ಅವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ. ಅದರಲ್ಲಿ ಗಂಡು ಮತ್ತು ಹೆಣ್ಣು ಮಗುವನ್ನು ಸ್ವಾಗತಿಸಲಾಗಿದೆ ಎಂದು ಕುಟುಂಬದವರು ಹೇಳಿಕೆ ಕೊಟ್ಟಿದ್ದು ಮಕ್ಕಳಿಗೆ ಆದಿಯಾ ಮತ್ತು ಕೃಷ್ಣ ಎಂದು ಹೆಸರಿಡಲಾಗಿದೆ.

‘ನಮ್ಮ ಮಕ್ಕಳಾದ ಇಶಾ ಮತ್ತು ಆನಂದ್ ಅವರು 19 ನವೆಂಬರ್ 2022 ರಂದು ಅವಳಿ ಮಕ್ಕಳಿಗೆ ಜನ್ಮನೀಡಿದ್ದಾರೆ. ತಾಯಿ ಮತ್ತು ಮಕ್ಕಳಿಬ್ಬರು ಆರೋಗ್ಯವಾಗಿದ್ದು ಅವರಿಗೆ ಆದಿಯಾ, ಕೃಷ್ಣ ಎಂದು ನಾಮಕರಣ ಮಾಡಲಾಗಿದೆ. ಇಶಾ ಮತ್ತು ಆನಂದ್ ಅವರ ಜೀವನದ ಈ ಪ್ರಮುಖ ಘಟ್ಟವಾದ ಈ ಸಂದರ್ಭದಲ್ಲಿ ನಾವು ನಿಮ್ಮ ಆಶೀರ್ವಾದ ಮತ್ತು ಶುಭ ಹಾರೈಕೆಗಳನ್ನು ಬಯಸುತ್ತೇವೆ” ಎಂದು ಅಧಿಕೃತ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

2018ರಲ್ಲಿ ರಿಲಯನ್ಸ್ ಅಧ್ಯಕ್ಷ ಮುಖೇಶ್ ಅಂಬಾನಿ ಮತ್ತು ನೀತಾ ಅಂಬಾನಿ ಅವರ ಪುತ್ರಿ ಇಶಾ ಅಂಬಾನಿ ಮತ್ತು ಕೈಗಾರಿಕೋದ್ಯಮಿ ಅಜಯ್ ಪಿರಾಮಲ್ ಮತ್ತು ಸ್ವಾತಿ ಪಿರಾಮಲ್ ಅವರ ಪುತ್ರ ಆನಂದ್ ಪಿರಮಾಲ್ ಅವರ ವಿವಾಹವು ಮುಂಬೈನಲ್ಲಿ ಬಹಳ ಅದ್ಧೂರಿಯಾಗಿ ನಡೆದಿತ್ತು. ವಿಶ್ವದ ಖ್ಯಾತನಾಮ ಉದ್ಯಮಿಗಳು ಸೇರಿದಂತೆ ಅನೇಕ ರಾಜಕೀಯ ಮುಖಂಡರು, ಬಾಲಿವುಡ್ ತಾರೆಯರು ಆಗಮಿಸಿದ್ದರು.

ರಿಲಯನ್ಸ್ ರೀಟೆಲ್ ವೆಂಚರ್​ನ ಎಕ್ಸ್​ಕ್ಯೂಟಿವ್ ಡೈರೆಕ್ಟರ್ ಇಶಾ ಅಂಬಾನಿ

ರಿಲಯನ್ಸ್ ರೀಟೆಲ್ ವೆಂಚರ್​ನ ಎಕ್ಸ್​ಕ್ಯೂಟಿವ್ ಡೈರೆಕ್ಟರ್ ಆಗಿ ಸದ್ಯ ಇಶಾ ಅಂಬಾನಿ ಜವಾಬ್ದಾರಿ ನಿರ್ವಹಿಸುತ್ತಿದ್ದಾರೆ. ಆನಂದ ಪಿರಮಲ್ ಅವರು ಪಿರಮಲ್ ಗ್ರೂಪ್​ನ ಆರ್ಥಿಕ ವಿಭಾಗವನ್ನು ಮುನ್ನಡೆಸುತ್ತಿದ್ದಾರೆ.

Related post

ದಿನ‌ ಭವಿಷ್ಯ 15-04-2024 ಸೋಮವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 15-04-2024 ಸೋಮವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ದಯಾಳು ಪ್ರಕೃತಿ ಇಂದು ಅನೇಕ ಸಂತೋಷದ ಕ್ಷಣಗಳನ್ನು ತರುತ್ತದೆ. ಲೋನ್ ತೆಗೆದುಕೊಂಡಿರುವ ಜನರಿಗೆ ಲೋನ್ ನ ಮೊತ್ತವನ್ನು ಮರುಪಾವತಿಸುವಲ್ಲಿ ತೊಂದರೆಗಳು ಉಂಟಾಗಬಹುದು. ಮನೆಯಲ್ಲಿ ನಿಮ್ಮ ಮಕ್ಕಳು ಅತಿಶಯೋಕ್ತಿಯಿರುವ…
ದಿನ‌ ಭವಿಷ್ಯ 14-04-2024 ಭಾನುವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 14-04-2024 ಭಾನುವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನೀವು ಧೀರ್ಘಕಾಲೀನ ಅನಾರೋಗ್ಯದಿಂದ ಬಳಲಬಹುದು. ಇಂದು ಯಾವುದೇ ಸಹಾಯವಿಲ್ಲದೆ, ನೀವು ಹಣವನ್ನು ಗಳಿಸುವಲ್ಲಿ ಸಾಮರ್ತ್ಯರಾಗಿರುತ್ತೀರಿ. ಯಾರಾದರೂ ನಿಮಗೆ ಹಾನಿ ಮಾಡಲು ಪ್ರಯತ್ನಿಸಬಹುದು – ಬಲವಾದ ಶಕ್ತಿಗಳು ನಿಮ್ಮ ವಿರುದ್ಧ…
ರಾಮೇಶ್ವರ ಕೆಫೆ ಬಾಂಬ್ ಸ್ಫೋಟ ಪ್ರಕರಣ – ಇಬ್ಬರು ಬಂಧಿತ ಉಗ್ರರನ್ನು ಬೆಂಗಳೂರಿಗೆ ಕರೆತಂದ NIA ಅಧಿಕಾರಿಗಳು

ರಾಮೇಶ್ವರ ಕೆಫೆ ಬಾಂಬ್ ಸ್ಫೋಟ ಪ್ರಕರಣ – ಇಬ್ಬರು ಬಂಧಿತ ಉಗ್ರರನ್ನು…

ನ್ಯೂಸ್ ಆ್ಯರೋ : ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಉಗ್ರರನ್ನು NIA ಅಧಿಕಾರಿಗಳು ಬೆಂಗಳೂರಿಗೆ ಕರೆತಂದಿದ್ದಾರೆ. ಅಬ್ದುಲ್ ಮತೀನ್ ತಾಹಾ ಹಾಗೂ ಮುಜಾವಿರ್ ಹುಸೇನ್…

Leave a Reply

Your email address will not be published. Required fields are marked *