ಮೇಘಾಲಯ, ನಾಗಾಲ್ಯಾಂಡ್ ವಿಧಾನಸಭೆ ಚುನಾವಣೆಗೆ ಮತದಾನ ಆರಂಭ – ಮತ್ತೆ ಬಿಜೆಪಿಯ ಕೈ ಹಿಡಿಯುತ್ತಾರಾ ಈಶಾನ್ಯದ ಮತದಾರರು?

ಮೇಘಾಲಯ, ನಾಗಾಲ್ಯಾಂಡ್ ವಿಧಾನಸಭೆ ಚುನಾವಣೆಗೆ ಮತದಾನ ಆರಂಭ – ಮತ್ತೆ ಬಿಜೆಪಿಯ ಕೈ ಹಿಡಿಯುತ್ತಾರಾ ಈಶಾನ್ಯದ ಮತದಾರರು?

ನ್ಯೂಸ್‌ ಆ್ಯರೋ : ಐದು ವರ್ಷಗಳ ಹಿಂದೆ ಮೇಘಾಲಯ ಹಾಗೂ ನಾಗಾಲ್ಯಾಂಡ್‌ನಲ್ಲಿ ಪ್ರಾದೇಶಿಕ ಪಕ್ಷಗಳ ಜತೆ ಸೇರಿಕೊಂಡು ಮೊದಲ ಬಾರಿಗೆ ಸರ್ಕಾರ ರಚಿಸಿದ್ದ ಬಿಜೆಪಿಗೆ ಈ ಬಾರಿ ನಿಜವಾದ ಅಗ್ನಿಪರೀಕ್ಷೆ ಎದುರಾಗಿದೆ. ಇಂದು ತ್ರಿಪುರ, ಮೇಘಾಲಯ ಮತ್ತು ನಾಗಾಲ್ಯಾಂಡ್‌ ರಾಜ್ಯಗಳಲ್ಲಿ ಮತದಾನ ಆರಂಭವಾಗಿದೆ.

ಕ್ರೈಸ್ತ ಮತದಾರರ ಪ್ರಾಬಲ್ಯ ಇರುವ ಉಭಯ ಬುಡಕಟ್ಟು ರಾಜ್ಯಗಳಲ್ಲಿ ಬಿಜೆಪಿ ಸ್ವಂತ ಬಲದಲ್ಲಿ ಸರ್ಕಾರ ರಚಿಸುವ ವಿಶ್ವಾಸದಲ್ಲಿದೆ. ಅಸ್ಸಾಂ, ಮಣಿಪುರದಂತೆ ಈ ಎರಡು ರಾಜ್ಯಗಳು ಕೂಡಾ ಪಕ್ಷದ ಕೈಯಲ್ಲೇ ಉಳಿಯಲಿದೆ ಎಂಬ ನಿರೀಕ್ಷೆ ಬಿಜೆಪಿ ಮುಖಂಡರದ್ದು. ಎಲ್ಲ ಎಂಟು ಈಶಾನ್ಯ ರಾಜ್ಯಗಳ ಸರ್ಕಾರದಲ್ಲಿ ಬಿಜೆಪಿ ಪಾಲುದಾರಿಕೆ ಹೊಂದಿದೆ ಎನ್ನುವುದು ಗಮನಾರ್ಹ.

ಮೂರು ರಾಜ್ಯದಲ್ಲಿ ಮತ್ತೆ ಪಕ್ಷವನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭರ್ಜರಿ ಚುನಾವಣಾ ರೋಡ್‌ಶೋ ನಡೆಸಿದ್ದು, ಈಶಾನ್ಯ ರಾಜ್ಯಗಳಲ್ಲಿ ಶಾಂತಿ, ಅಭಿವೃದ್ಧಿ ಮತ್ತು ಆರ್ಥಿಕ ಪ್ರಗತಿಯ ಭರವಸೆ ನೀಡಿದ್ದಾರೆ.

ನಾಗಾಲ್ಯಾಂಡ್ ಸಿಎಂ ನಿಂಫು ರಿಯೊ ಅವರ ನ್ಯಾಷನಲಿಸ್ಟ್ ಡೆಮಾಕ್ರಟಿಕ್ ಪ್ರೋಗ್ರೆಸಿವ್ ಪಾರ್ಟಿ (ಎನ್‌ಡಿಪಿಪಿ) ನೇತೃತ್ವದ ಮೈತ್ರಿ ಸರ್ಕಾರದಲ್ಲಿ ಕಳೆದ ಬಾರಿ 12 ಸ್ಥಾನ ಗೆದ್ದಿದ್ದ ಬಿಜೆಪಿಯೂ ಇದೆ. 60 ಸದಸ್ಯಬಲದ ಸದನದಲ್ಲಿ ಬಿಜೆಪಿ-ಎನ್‌ಡಿಪಿಪಿಗೆ ಧನಾತ್ಮಕ ವಾತಾವರಣ ಕಾಣುತ್ತಿದ್ದು, ಬಿಜೆಪಿ ಅಭ್ಯರ್ಥಿ ಅಕುಲುಟೊ ಈಗಾಗಲೇ ಅವಿರೋಧ ಆಯ್ಕೆಯಾಗಿದ್ದಾರೆ.

ಮೇಘಾಲಯದಲ್ಲಿ ಸಿಎಂ ಕೊರ್ನಾಡ್ ಸಂಗ್ಮಾ ನೇತೃತ್ವದ ಸರ್ಕಾರದಿಂದ ಬಿಜೆಪಿ ಒಂದು ವರ್ಷ ಮೊದಲು ಕಳಚಿಕೊಂಡಿದೆ. 60 ಸದಸ್ಯರ ವಿಧಾನಸಭೆಯಲ್ಲಿ ಕಾಂಗ್ರೆಸ್ 21, ಬಿಜೆಪಿ ಹಾಗೂ ಎನ್ಪಿ ತಲಾ 2 ಸ್ಥಾನಗಳನ್ನು ಗೆದ್ದಿದ್ದವು. ಉಳಿದ ಸ್ಥಾನಗಳು ಪ್ರಾದೇಶಿಕ ಪಕ್ಷಗಳು ಹಾಗೂ ಪಕ್ಷೇತರರ ಪಾಲಾಗಿದ್ದವು. ಆದರೆ, 20 ಶಾಸಕರು ತಮ್ಮ ಪಕ್ಷಗಳನ್ನು ಬದಲಿಸಿದ್ದರು. ಮೇಘಾಲಯದಲ್ಲಿ ಕಾಂಗ್ರೆಸ್ ಹಾಗೂ ಹೊಸದಾಗಿ ಕಣದಲ್ಲಿರುವ ಟಿಎಂಸಿಗೆ ಕೂಡಾ ನೈಜ ಪರೀಕ್ಷೆ ಎದುರಾಗಿದೆ.

ತ್ರಿಪುರ, ಮೇಘಾಲಯ ಮತ್ತು ನಾಗಾಲ್ಯಾಂಡ್ ರಾಜ್ಯಗಳ ವಿಧಾನಸಭೆ ಚುನಾವಣೆಯ ಫಲಿತಾಂಶ ಮಾರ್ಚ್ 2ರಂದು ಪ್ರಕಟಗೊಳ್ಳಲಿದೆ.

Related post

Loksabha Election 2024 : ಇಂದು ಮೊದಲ ಹಂತದ ಮತದಾನ ಆರಂಭ – 102 ಕ್ಷೇತ್ರಗಳಲ್ಲಿ ಅದೃಷ್ಟ ಪರೀಕ್ಷೆಗಿಳಿದ 1625 ಅಭ್ಯರ್ಥಿಗಳು

Loksabha Election 2024 : ಇಂದು ಮೊದಲ ಹಂತದ ಮತದಾನ ಆರಂಭ…

ನ್ಯೂಸ್ ಆ್ಯರೋ : ದೇಶದ ಚುಕ್ಕಾಣಿ ಹಿಡಿಯಲು ಐದು ವರ್ಷಗಳಿಗೊಮ್ಮೆ ನಡೆಯುವ ಲೋಕಸಭಾ ಚುನಾವಣೆಯಲ್ಲಿ ಈ ಬಾರಿಯ 7 ಹಂತದ ಸಾರ್ವತ್ರಿಕ ಲೋಕಸಭೆ ಚುನಾವಣೆಗೆ ಶುಕ್ರವಾರ ಚಾಲನೆ ಸಿಗಲಿದ್ದು,…
ದಿನ‌ ಭವಿಷ್ಯ 19-04-2024 ಶುಕ್ರವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 19-04-2024 ಶುಕ್ರವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಆಹಾರವನ್ನು ನಿಯಂತ್ರಣದಲ್ಲಿರಿಸಿಕೊಳ್ಳಿ ಮತ್ತು ಫಿಟ್ ಆಗಿ ಉಳಿಯಲು ವ್ಯಾಯಾಮ ಮಾಡಿ. ದಿನದಲ್ಲಿ ನಂತರ ಹಣಕಾಸು ಪರಿಸ್ಥಿತಿಗಳು ಸುಧಾರಿಸುತ್ತವೆ. ಒಂದು ಒಳ್ಳೆಯ ಸುದ್ದಿ ಪಡೆಯುವ ಸಾಧ್ಯತೆಯಿದ್ದು ಇದು ನಿಮ್ಮನ್ನಷ್ಟೇ…
ದಿನ‌ ಭವಿಷ್ಯ 15-04-2024 ಸೋಮವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 15-04-2024 ಸೋಮವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ದಯಾಳು ಪ್ರಕೃತಿ ಇಂದು ಅನೇಕ ಸಂತೋಷದ ಕ್ಷಣಗಳನ್ನು ತರುತ್ತದೆ. ಲೋನ್ ತೆಗೆದುಕೊಂಡಿರುವ ಜನರಿಗೆ ಲೋನ್ ನ ಮೊತ್ತವನ್ನು ಮರುಪಾವತಿಸುವಲ್ಲಿ ತೊಂದರೆಗಳು ಉಂಟಾಗಬಹುದು. ಮನೆಯಲ್ಲಿ ನಿಮ್ಮ ಮಕ್ಕಳು ಅತಿಶಯೋಕ್ತಿಯಿರುವ…

Leave a Reply

Your email address will not be published. Required fields are marked *