ಪಿಎಫ್‌ಐ ನಾಯಕರಿಗೆ ಬೆಳ್ಳಂಬೆಳಗ್ಗೆ ಎನ್‌ಐಎ ಶಾಕ್: ನಿಷೇಧಿತ ಸಂಘಟನೆ ಹೆಸರಲ್ಲಿ ಮತ್ತೇ ತಲೆಯೆತ್ತಿದ ಚಟುವಟಿಕೆ, ಕೇರಳದ 28ಕಡೆ ದಾಳಿ

ಪಿಎಫ್‌ಐ ನಾಯಕರಿಗೆ ಬೆಳ್ಳಂಬೆಳಗ್ಗೆ ಎನ್‌ಐಎ ಶಾಕ್: ನಿಷೇಧಿತ ಸಂಘಟನೆ ಹೆಸರಲ್ಲಿ ಮತ್ತೇ ತಲೆಯೆತ್ತಿದ ಚಟುವಟಿಕೆ, ಕೇರಳದ 28ಕಡೆ ದಾಳಿ

ನ್ಯೂಸ್ ಆ್ಯರೋ: ಕೇರಳದಲ್ಲಿ ಇಂದು ಬೆಳ್ಳಂಬೆಳಗೆ ಪಿಎಫ್‌ಐನ ನಾಯಕರಿಗೆ ಸೇರಿದ ಮನೆ, ಆಫೀಸ್‌ಗಳು ಸೇರಿದಂತೆ ಒಟ್ಟು 28 ಕಡೆಗಳಲ್ಲಿನಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ದಾಳಿ ನಡೆಸಿದೆ.

ಪಿಎಫ್‌ಐ ಸಂಘಟನೆಯನ್ನು ಬೇರೊಂದು ಹೆಸರಿನಲ್ಲಿ ಕಾರ್ಯಚರಿಸಲು ಯೋಜನೆ ರೂಪಿಸಿದ ಮಾಹಿತಿ ತಿಳಿದು ಈ ದಾಳಿ ನಡೆಸಲಾಗಿದೆ.

ಇಂದು ಬೆಳ್ಳಂಬೆಳಗ್ಗೆ 4 ಗಂಟೆಗೆ ನಡೆದ ದಾಳಿಯಲ್ಲಿ ಎರ್ನಾಕುಲಂನ 8 ಪ್ರದೇಶ ಹಾಗೂ ತಿರುವನಂತಪುರಂನ ಎಂಟು ಪ್ರದೇಶಗಳಲ್ಲಿ ದಾಳಿ ನಡೆಸಲಾಗಿದೆ.

ಪಿಎಫ್‌ಐ ಸಂಘಟನೆ ಹಿನ್ನೆಲೆ: 2006ರಲ್ಲಿ ಕೇರಳದಲ್ಲಿ ಪ್ರಾರಂಭಗೊಂಡ ಪಿಎಫ್‌ಐ ಸಂಘಟನೆ, ಸೋಷಿಯಲ್‌ ಡೆಮೊಕ್ರಟಿಕ್‌ ಪಾರ್ಟಿ ಆಫ್‌ ಇಂಡಿಯಾ ರೂಪದಲ್ಲಿ 2009ರಲ್ಲಿ ರಾಜಕೀಯಕ್ಕೆ ಇಳಿದಿದೆ. ಬಳಿಕ ಪಿಎಫ್‌ಐಯು ಕರ್ನಾಟಕ ಸೇರಿದಂತೆ ದೇಶದ ವಿವಿಧೆಡೆ ವ್ಯಾಪಿಸಿದೆ.

ದೇಶದ ಹಲವಾರು ರಾಜ್ಯಗಳಲ್ಲಿ ನಡೆದ ದಾಳಿಯಲ್ಲಿ ಪಿಎಫ್‌ಐ ಸಂಘಟನೆ ನಾಯಕರುಗಳ ಹೆಸರು ಕೇಳಿ ಬಂದ ಹಿನ್ನೆಲೆ ಕೇಂದ್ರ ಸರ್ಕಾರ ಮುಂದಿನ ಐದು ವರ್ಷಗಳ ಕಾಲ ಪಿಎಫ್‌ಐ ಹಾಗೂ ಅದರ ಅಂಗಸಂಸ್ಥೆಗಳನ್ನು ನಿಷೇಧಿಸಿ ಆದೇಶ ಹೊರಡಿಸಿತ್ತು.

ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (PFI) ಮೇಲಿನ ನಿಷೇಧವನ್ನು ಕರ್ನಾಟಕ ಹೈಕೋರ್ಟ್ ಇತ್ತೀಚೆಗೆ ಎತ್ತಿಹಿಡಿದಿದೆ. ನಿಷೇಧದ ಕುರಿತು ಕೇಂದ್ರದ ಅಧಿಸೂಚನೆಯನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ರಾಜ್ಯ ಹೈಕೋರ್ಟ್‌ ವಜಾಗೊಳಿಸಿದೆ. ಸಂಘಟನೆ ನಿಷೇಧ ಕುರಿತ ಕೇಂದ್ರದ ನಿರ್ಧಾರವನ್ನು ಪ್ರಶ್ನಿಸಿ, ರಾಜ್ಯದ ಪಿಎಫ್‌ಐ ಮುಖಂಡರೊಬ್ಬರು ಹೈಕೋರ್ಟ್‌ ಮೆಟ್ಟಿಲೇರಿದ್ದರು.

ಸೆಪ್ಟೆಂಬರ್ 22ರಂದು ದೇಶದ ವಿವಿಧ ಭಾಗಗಳಲ್ಲಿ ಎನ್‌ಐಎ, ಇಡಿ ಮತ್ತು ರಾಜ್ಯ ಪೊಲೀಸರು ದಾಳಿ ನಡೆಸಿದ್ದರು. ಪಿಎಫ್‌ಐ ಹಾಗೂ ಎಸ್‌ಡಿಪಿಐ ಮುಖಂಡರನ್ನು ಗುರಿಯಾಗಿಸಿ ಈ ದಾಳಿ ನಡೆದಿತ್ತು. ಈ ದಾಳಿ ನಡೆಸುವುದಕ್ಕೂ ಮುನ್ನ, ಅಂದರೆ ಸೆಪ್ಟೆಂಬರ್ 17ರಂದು ಪ್ರಮುಖ ಮುಸ್ಲಿಂ ಸಂಘಟನೆಯ ಮುಖಂಡರನ್ನು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಭೇಟಿಯಾಗಿದ್ದರು ಎಂದು ತಿಳಿದುಬಂದಿದೆ.

ಪಾಪ್ಯುಲರ್‌ ಫ್ರಂಟ್‌ ಆಫ್‌ ಇಂಡಿಯಾ(ಪಿಎಫ್‌ಐ) ಜತೆಗೆ ಅದರ ಇತರೆ ಸಂಘಟನೆಗಳಾದ ರೆಹಾಬ್‌ ಇಂಡಿಯಾ ಫೌಂಡೇಷನ್‌ (ಆರ್‌ಐಎಫ್‌), ಕ್ಯಾಪಸ್‌ ಫ್ರಂಟ್‌ ಆಫ್‌ ಇಂಡಿಯಾ (ಸಿಎಫ್‌ಐ), ಆಲ್‌ ಇಂಡಿಯಾ ಇಮಾಮ್ಸ್‌ ಕೌನ್ಸಿಲ್‌ (ಎಐಐಸಿ), ನ್ಯಾಷನಲ್‌ ಕಾನ್‌ಫೆಡರೇಷನ್‌ ಆಪ್‌ ಹ್ಯೂಮನ್‌ ರೈಟ್ಸ್‌ ಆರ್ಗನೈಜೇಷನ್‌ (ಎನ್‌ಸಿಎಚ್‌ಆರ್‌ಒ), ನ್ಯಾಷನಲ್‌ ವುಮೆನ್ಸ್‌ ಫ್ರಂಟ್‌, ಜೂನಿಯರ್‌ ಫ್ರಂಟ್‌, ಎಂಪವರ್‌ ಇಂಡಿಯಾ ಫೌಂಡೇಷನ್‌ ಮತ್ತು ರೆಹಾಬ್‌ ಫೌಂಡೇಷನ್‌, ಜತೆಗೆ ಕೇರಳದಲ್ಲಿ ಪಿಎಫ್‌ಐ ಜತೆಗೆ ನಂಟು ಹೊಂದಿರುವ ಇತರೆ ಸಂಘಟನೆಗಳಿಗೆ ನಿಷೇಧ ಹೇರಲಾಗಿದೆ.

Related post

ದಿನ‌ ಭವಿಷ್ಯ 21-05-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 21-05-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷಸಂತೃಪ್ತಿಯ ಜೀವನಕ್ಕಾಗಿ ನಿಮ್ಮ ಮಾನಸಿಕ ದೃಢತೆಯನ್ನು ಸುಧಾರಿಸಿ. ನೀವು ಇಂದು ಗಣನೀಯ ಪ್ರಮಾಣದ ಹಣವನ್ನು ಸಹ ಹೊಂದಿರುತ್ತೀರಿ ಮತ್ತು ಅದರೊಂದಿಗೆ ಮನಸ್ಸಿನ ಶಾಂತಿ ಇರುತ್ತದೆ. ಸ್ನೇಹಿತರು ಸಂತೋಷದ ಸಂಜೆಗಾಗಿ…
ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ ಮದುವೆ

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ…

ನ್ಯೂಸ್ ಆರೋ: ಬರೋಬ್ಬರಿ 25 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ಮಂತ್ರ ಮಾಂಗಲ್ಯ ಮೂಲಕ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ತುಮಕೂರಲ್ಲಿ ನಡೆದಿದೆ. ಹೌದು ಜನಾಂದೋಲನದಲ್ಲಿ…
ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು! ಏನಿದು ವಿಷಯ?

ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು!…

ನ್ಯೂಸ್ ಆರೋ: ಎಷ್ಟೋ ಬಾರಿ ನಾವು ಈ ಹೊಟೇಲ್ ಗಳಿಗೆ ಹೋದಾಗ, ಅಲ್ಲಿ ಜನರು ವೆಜ್ ಮಂಚೂರಿಯನ್ನು ಆರ್ಡರ್ ಮಾಡಿದರೆ ಚಿಕನ್ ಮಂಚೂರಿ ತಂದು ಟೇಬಲ್ ಮೇಲೆ ಇಟ್ಟಿರುವ…

Leave a Reply

Your email address will not be published. Required fields are marked *