ಸಂಸತ್ ಸದನದಲ್ಲಿ ಭದ್ರತಾ ಲೋಪದ ಹಿಂದೆ ಖಲೀಸ್ತಾನ್ ಕೈವಾಡ ಶಂಕೆ – ಮೈಸೂರು ಸಂಸದ ಪ್ರತಾಪ್ ಸಿಂಹ ಕಚೇರಿಯಿಂದ ಪಾಸ್ ಪಡೆದಿದ್ದ ಶಂಕಿತ ಉಗ್ರರು..!!

ಸಂಸತ್ ಸದನದಲ್ಲಿ ಭದ್ರತಾ ಲೋಪದ ಹಿಂದೆ ಖಲೀಸ್ತಾನ್ ಕೈವಾಡ ಶಂಕೆ – ಮೈಸೂರು ಸಂಸದ ಪ್ರತಾಪ್ ಸಿಂಹ ಕಚೇರಿಯಿಂದ ಪಾಸ್ ಪಡೆದಿದ್ದ ಶಂಕಿತ ಉಗ್ರರು..!!

ನ್ಯೂಸ್ ಆ್ಯರೋ : ಇಂದು ಮಧ್ಯಾಹ್ನ ಲೋಕಸಭೆಯಲ್ಲಿ ಗ್ಯಾಲರಿಯಿಂದ ಜಿಗಿದು ಸಂಸದರ ಮಧ್ಯೆ ಓಡಾಡಿ ಕಲರ್‌ ಬಾಂಬ್‌ ಸಿಡಿಸಿದ ದುಷ್ಕರ್ಮಿಗಳನ್ನು ಬಂಧಿಸಲಾಗಿದ್ದು, ಇವರಿಬ್ಬರೂ ಮೈಸೂರು ಸಂಸದ ಪ್ರತಾಪ್‌ ಸಿಂಹ ಅವರ ಕಚೇರಿಯಿಂದ ಪಾಸ್‌ ಪಡೆದಿದ್ದರು ಎಂದು ಸುದ್ದಿ ಮಾಧ್ಯಮಗಳು ವರದಿ ಮಾಡಿವೆ.

ಈ ಬಗ್ಗೆ ಮಾತನಾಡಿದ ಸಂಸದ ಪ್ರತಾಪ್ ಸಿಂಹ, ಸುಳ್ಳು ಹೇಳಿ ಮೈಸೂರ ಸಂಸದರ ಕಚೇರಿಯಿಂದ ಪಾಸ್‌ಗಳನ್ನು ಪಡೆದಿದ್ದರು. “ತುಂಬಾ ಒತ್ತಾಯಿಸಿ ನಮ್ಮ ಕಚೇರಿಯಿಂದ ಪಾಸ್‌ ಪಡೆದಿದ್ದರು” ಎಂದು ಸಂಸದ ಪ್ರತಾಪ್‌ ಸಿಂಹ ಹೇಳಿದ್ದಾರೆ.

ಇತಿಹಾಸದಲ್ಲೇ ಭಾರಿ ಭದ್ರತಾ ಲೋಪ ಎನಿಸಿಕೊಂಡ ಈ ಪ್ರಕರಣದಲ್ಲಿ ಇಬ್ಬರನ್ನು ಬಂಧಿಸಲಾಗಿದೆ. ಕ್ಯಾನಿಸ್ಟರ್‌ಗಳನ್ನು ಹೊತ್ತಿದ್ದ ಒಬ್ಬಾತ ಲೋಕಸಭೆಯ ಒಳಗೆ ಕಲರ್‌ ಬಾಂಬ್‌ ಸಿಡಿಸಿದ್ದಾನೆ. ಇನ್ನಿಬ್ಬರು ಲೋಕಸಭೆಯ ಹೊರಗೆ ಕಲರ್‌ ಬಾಂಬ್‌ ಸಿಡಿಸಿದ್ದಾರೆ. ಇಬ್ಬರನ್ನೂ ಬಂಧಿಸಿ ವಿಚಾರಣೆಗೆ ಒಳಪಡಿಸಲಾಗಿದೆ.

ದುಷ್ಕರ್ಮಿಗಳು ಲೋಕಸಭೆಯ ಸಭಾಂಗಣಕ್ಕೆ ಜಿಗಿದ ಕ್ಷಣದ ಸಂಸದರ ನಡುವೆ ಕೋಲಾಹಲ ಉಂಟಾಗಿದ್ದು, ಕೆಲವು ಸಂಸದರು ಹಾಗೂ ಲೋಕಸಭೆ ಸಿಬ್ಬಂದಿ ಆತನನ್ನು ಹಿಡಿದರು. ಕೂಡಲೇ ಸ್ಪೀಕರ್‌ ಸದನವನ್ನು ಮುಂದೂಡಿದರು.

ಭದ್ರತಾ ಲೋಪದ ಮುಖ್ಯ ಅಂಶಗಳು

ಸಂಸತ್ತಿನ ಶೂನ್ಯ ವೇಳೆಯಲ್ಲಿ ಈ ಘಟನೆ ನಡೆದಿದೆ.

ಲೋಕಸಭೆಯ ನೇರ ಕಲಾಪದ ವಿಡಿಯೋದಲ್ಲಿ, ಒಬ್ಬ ವ್ಯಕ್ತಿ ಬೆಂಚುಗಳ ಮೇಲೆ ಜಿಗಿಯುತ್ತಿರುವುದನ್ನು ಕಾಣಬಹುದು ಮತ್ತು ಇನ್ನೊಬ್ಬ ಸಂದರ್ಶಕರ ಗ್ಯಾಲರಿಯಿಂದ ತೂಗಾಡುತ್ತಾ ಹೊಗೆಯನ್ನು ಸಿಂಪಡಿಸಿದ. ನಂತರ ಲೋಕಸಭಾ ಸದಸ್ಯರು ಹಾಗೂ ಸಿಬ್ಬಂದಿ ಇವರನ್ನು ಹಿಡಿದು ಥಳಿಸಿದರು.

ಇಬ್ಬರೂ ಶೂಗಳ ಒಳಗೆ ಗ್ಯಾಸ್ ಕ್ಯಾನಿಸ್ಟರ್‌ಗಳನ್ನು ಇಟ್ಟುಕೊಂಡು ಒಳಗೆ ಕೊಂಡೊಯ್ದಿದ್ದಾರೆ. ಅವರು ಬಿಟ್ಟದ್ದು ಹಳದಿ ಹೊಗೆಯಾಗಿದೆ.

ಸಂದರ್ಶಕರ ಗ್ಯಾಲರಿಯಿಂದ ಯಾರೋ ಕೆಳಗೆ ಬಿದ್ದಿದ್ದಾರೆ ಎಂದು ಆರಂಭದಲ್ಲಿ ಭಾವಿಸಿದ್ದೆ ಎಂದು ಕಾಂಗ್ರೆಸ್ ಸಂಸದ ಕಾರ್ತಿ ಚಿದಂಬರಂ ಹೇಳಿದ್ದಾರೆ. “ಎರಡನೇ ವ್ಯಕ್ತಿ ಜಿಗಿದ ನಂತರವೇ ಅದು ಭದ್ರತಾ ಲೋಪ ಎಂದು ನಾನು ಅರಿತುಕೊಂಡೆ. ಅನಿಲವು ವಿಷಕಾರಿಯಾಗಿದ್ದಿರಬಹುದು” ಎಂದು ಅವರು ಹೇಳಿದ್ದು, ಸಂಪೂರ್ಣ ತನಿಖೆಗೆ ಕರೆ ನೀಡಿದರು.

ಇಬ್ಬರು ವ್ಯಕ್ತಿಗಳು ಒಳನುಗ್ಗಿದಾಗ ಸದನದಲ್ಲಿದ್ದ ಸಮಾಜವಾದಿ ಪಕ್ಷದ ಸಂಸದ ಡಿಂಪಲ್ ಯಾದವ್, “ಇಲ್ಲಿಗೆ ಬರುವವರೆಲ್ಲರೂ- ಸಂದರ್ಶಕರಾಗಲಿ ಅಥವಾ ವರದಿಗಾರರಾಗಲಿ- ಟ್ಯಾಗ್‌ಗಳನ್ನು ಧರಿಸುವುದಿಲ್ಲ. ಆ ಬಗ್ಗೆ ಸರ್ಕಾರ ಗಮನ ಹರಿಸಬೇಕು. ಇದು ಸಂಪೂರ್ಣ ಭದ್ರತಾ ಲೋಪ ಎಂದು ನಾನು ಭಾವಿಸುತ್ತೇನೆ. ಲೋಕಸಭೆಯೊಳಗೆ ಏನು ಬೇಕಾದರೂ ನಡೆದಿರಬಹುದು” ಎಂದು ಆತಂಕ ವ್ಯಕ್ತಪಡಿಸಿದರು.

ಇತರ ಇಬ್ಬರು ವ್ಯಕ್ತಿಗಳು – ಒಬ್ಬ ಪುರುಷ ಮತ್ತು ಮಹಿಳೆ – ಹಳದಿ ಹೊಗೆಯನ್ನು ಹೊರಸೂಸುವ ಕ್ಯಾನ್‌ಗಳನ್ನು ಸಂಸತ್ತಿನ ಕಟ್ಟಡದ ಹೊರಗೆ ಸಿಡಿಸಿ ಪ್ರತಿಭಟಿಸಿದರು. ಅವರನ್ನು ಬಂಧಿಸಲಾಗಿದೆ.

ಹೊರಗಡೆಯ ಬಂಧಿತರನ್ನು ನೀಲಂ (42) ಮತ್ತು ಅಮೋಲ್ ಶಿಂಧೆ (25) ಎಂದು ಗುರುತಿಸಲಾಗಿದೆ. ಇಬ್ಬರನ್ನೂ ಸಾರಿಗೆ ಭವನದ ಮುಂಭಾಗದಲ್ಲಿ ಬಂಧಿಸಲಾಗಿದೆ.

ಡಿ.13ರ ಸಂಸತ್‌ ಭವನದ ಮೇಲಿನ ದಾಳಿಯ ನೆನಪಿನಲ್ಲಿ, ಸಂಸತ್‌ ಮೇಲೆ ಮತ್ತೊಮ್ಮೆ ದಾಳಿ ನಡೆಸುವುದಾಗಿ ಖಲಿಸ್ತಾನ್‌ ಉಗ್ರ ಸತ್ವಂತ್‌ ಸಿಂಗ್‌ ಪನ್ನುನ್‌ ಬೆದರಿಕೆ ಹಾಕಿದ್ದ. ಆತನಿಗೂ ಈ ಘಟನೆಗೂ ಇರಬಹುದಾದ ಲಿಂಕ್‌ ಬಗ್ಗೆಯೂ ತನಿಖೆ ನಡೆಸಲಾಗುತ್ತಿದೆ.

Related post

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…
ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…

Leave a Reply

Your email address will not be published. Required fields are marked *