ಪ್ರಧಾನಿ ಮೋದಿ ತಾಯಿ ಹೀರಾ ಬೆನ್ ವಿಧಿವಶ – ಶತಮಾನದ ದೀಪ ಪರಮಾತ್ಮನ ಪಾದಕ್ಕೆ ಶರಣಾಗಿದೆ : ಮೋದಿ ಟ್ವೀಟ್

ಪ್ರಧಾನಿ ಮೋದಿ ತಾಯಿ ಹೀರಾ ಬೆನ್ ವಿಧಿವಶ – ಶತಮಾನದ ದೀಪ ಪರಮಾತ್ಮನ ಪಾದಕ್ಕೆ ಶರಣಾಗಿದೆ : ಮೋದಿ ಟ್ವೀಟ್

ನ್ಯೂಸ್ ಆ್ಯರೋ : ಕಳೆದ ಎರಡು ದಿನಗಳಿಂದ ಅಹ್ಮದಾಬಾದ್ ಆಸ್ಪತ್ರೆಯಲ್ಲಿ ಅನಾರೋಗ್ಯದಿಂದ ದಾಖಲಾಗಿ, ಚಿಕಿತ್ಸೆ ಪಡೆಯುತ್ತಿದ್ದ ಪ್ರಧಾನಿ ನರೇಂದ್ರ ಮೋದಿಯವರ ತಾಯಿ ಹೀರಾ ಬೇನ್ ಮೋದಿ ಅವರು, ಇಂದು ಚಿಕಿತ್ಸೆ ಫಲಿಸದೇ ನಿಧನರಾಗಿದ್ದಾರೆ.

ಹೀರಾ ಬೆನ್ ಅವರು ಗುಜರಾತ್ ನ ಅಹಮದಾಬಾದ್ ನಲ್ಲಿರುವ ಯುಎನ್ ಮೆಹ್ತಾ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದರು.

1920 ಮೆಹ್ಸಾನ ಜಿಲ್ಲೆಯ ವಿಸ್ ನಗರದಲ್ಲಿ ಅವರು ಜನಿಸಿದ್ದರು. ದಾಮೋದರ ದಾಸ್ ಅವರ ಮದುವೆಯಾಗಿದ್ದ ಹೀರಾಬೆನ್ ಅವರಿಗೆ 6 ಜನ ಮಕ್ಕಳಿದ್ದಾರೆ. ಐವರು ಪುತ್ರರು, ಓರ್ವ ಪುತ್ರಿಯನ್ನು ಹೀರಾ ಬೆನ್ ಅಗಲಿದ್ದಾರೆ. ಎರಡು ದಿನಗಳ ಹಿಂದೆ ಪ್ರಧಾನಿ ಮೋದಿ ಆಸ್ಪತ್ರೆಗೆ ಭೇಟಿ ನೀಡಿ ತಾಯಿಯವರ ಆರೋಗ್ಯ ವಿಚಾರಿಸಿದ್ದರು.

ಶತಮಾನದ ದೀಪ ಪರಮಾತ್ಮನ ಪಾದಕ್ಕೆ ಶರಣಾಗಿದೆ. ನನ್ನ ತಾಯಿಯಲ್ಲಿ ಮೂರು ಗುಣಗಳನ್ನು ಕಂಡಿದ್ದೇನೆ. ತಪಸ್ವಿಯ ಪ್ರಯಾಣ, ನಿಸ್ವಾರ್ಥ ಕರ್ಮ ಯೋಗಿ ಅವರಾಗಿದ್ದರು. ಮೌಲ್ಯಗಳಿಗೆ ಬದ್ಧವಾದ ಜೀವನ ನಡೆಸಿದರು ಎಂದು ಮೋದಿ ಸಂತಾಪ ಸೂಚಿಸಿದ್ದಾರೆ. ಅವರ 100 ನೇ ಹುಟ್ಟುಹಬ್ಬದಂದು ನಾನು ಅವರನ್ನು ಭೇಟಿಯಾದಾಗ, ಬದ್ಧತೆ, ಬುದ್ಧಿವಂತಿಕೆಯಿಂದ ಕೆಲಸ ಮಾಡಿ, ಶುದ್ಧತೆಯಿಂದ ಜೀವನ ಮಾಡಿ ಎಂದು ಹೇಳಿದ್ದರು ಎಂದು ಮೋದಿ ಟ್ವೀಟ್ ಮಾಡಿದ್ದಾರೆ.

Related post

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…
ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…

Leave a Reply

Your email address will not be published. Required fields are marked *