Seema Heider : ಪಾಕಿಸ್ತಾನ ಮುರ್ದಾಬಾದ್ ಘೋಷಣೆ ಕೂಗಿದ ಸೀಮಾ – ಪ್ರೀತಿ ಅರಸಿ ಭಾರತಕ್ಕೆ ಬಂದವಳಿಗೆ ಭಾರತದ ಮೇಲೆ ಉಕ್ಕಿತಾ ಪ್ರೀತಿ? ವಿಡಿಯೋ ವೈರಲ್..

Seema Heider : ಪಾಕಿಸ್ತಾನ ಮುರ್ದಾಬಾದ್ ಘೋಷಣೆ ಕೂಗಿದ ಸೀಮಾ – ಪ್ರೀತಿ ಅರಸಿ ಭಾರತಕ್ಕೆ ಬಂದವಳಿಗೆ ಭಾರತದ ಮೇಲೆ ಉಕ್ಕಿತಾ ಪ್ರೀತಿ? ವಿಡಿಯೋ ವೈರಲ್..

ನ್ಯೂಸ್ ಆ್ಯರೋ : ಪ್ರೀತಿಸಿದ ವ್ಯಕ್ತಿಗಾಗಿ ಪಾಕಿಸ್ತಾನದಿಂದ ಭಾರತಕ್ಕೆ ಬಂದಿರುವ ಸೀಮಾ ಹೈದರ್ ಇಂದು ನಡೆದ ಸ್ವಾತಂತ್ರ್ಯ ದಿನಾಚರಣೆಯ ಶುಭ ಸಂದರ್ಭದಂದು ಭಾರತದ ತ್ರಿವರ್ಣ ಧ್ವಜ ಹಾರಿಸುವ ಮೂಲಕ ಸ್ವಾತಂತ್ರ್ಯ ದಿನಾಚರಣೆ ಆಚರಿಸಿದ್ದು, ಪಾಕಿಸ್ತಾನ ಮುರ್ದಾಬಾದ್ ಎಂದು ಪಾಕಿಸ್ತಾನ ವಿರೋಧಿ ಘೋಷಣೆಯನ್ನು ಕೂಗಿದ್ದಾರೆ. ಸದ್ಯ ಈ ವಿಚಾರ ಭಾರೀ‌ ಚರ್ಚೆಗೆ ಕಾರಣವಾಗಿದೆ.

ಪಾಕಿಸ್ತಾನ ಮೂಲದ ಸೀಮಾ ಹೈದರ್ ಅವರು ಮೋದಿ ಕರೆಕೊಟ್ಟಿರುವ ಹರ್ ಘರ್ ತಿರಂಗಾ ಅಭಿಯಾನದಲ್ಲಿ ಪಾಲ್ಗೊಂಡಿದ್ದು ಪತಿ ಸಚಿನ್ ಅವರೊಂದಿಗೆ ನೋಯ್ಡಾದಲ್ಲಿ ತ್ರಿವರ್ಣ ಧ್ವಜವನ್ನು ಹಾರಿಸಿದರು. ಈ ಸಮಯದಲ್ಲಿ, ಅವರು ತ್ರಿವರ್ಣ ಸೀರೆಯನ್ನು ಧರಿಸಿ ಸಂಭ್ರಮಿಸಿದ್ದಾರೆ.

ಇದಕ್ಕೂ ಮೊದಲು ಸೀಮಾ ಹೈದರ್ ಅವರು ತಮ್ಮ ವಕೀಲ ಎ.ಪಿ ಸಿಂಗ್ ಅವರ ಸಮ್ಮುಖದಲ್ಲಿ ಮನೆಯ ಛಾವಣಿಯ ಮೇಲೆ ತ್ರಿವರ್ಣ ಧ್ವಜವನ್ನು ಹಾರಿಸಿದರು. ಈ ವೇಳೆ ಸುತ್ತಮುತ್ತಲಿನ ಮನೆಗಳ ಜನರು ತಮ್ಮ ಮನೆಯ ಛಾವಣಿಯ ಮೇಲೆ ಜಮಾಯಿಸಿ ಈ ಅಭಿಯಾನದ ಭಾಗವಾದರು. ಇದೀಗ ವೈರಲ್ ಆಗುತ್ತಿರುವ ವೀಡಿಯೋದಲ್ಲಿ ಸೀಮಾ ಪಾಕಿಸ್ತಾನ್ ಮುರ್ದಾಬಾದ್ ಮತ್ತು ಹಿಂದೂಸ್ತಾನ್ ಜಿಂದಾಬಾದ್ ಎಂಬ ಘೋಷಣೆಗಳನ್ನು ಕೂಗುತ್ತಿರುವುದು ಕಂಡುಬಂದಿದೆ.

ಕೊರೊನಾ ಲಾಕ್ ಡೌನ್ ಸಂದರ್ಭದಲ್ಲಿ PUBG ಗೇಮ್ ಆಡುವಾಗ ಸೀಮಾ ಅವರಿಗೆ ಸಚಿನ್ ಜೊತೆ ಪರಿಚಯವಾಗಿದ್ದು, ನಂತರ ಇಬ್ಬರ ನಡುವೆ ಸಂಭಾಷಣೆ ಹೆಚ್ಚಾಗಿ ಪ್ರೀತಿ ಮೊಳಕೆಯೊಡೆದಿತ್ತು, ಬಳಿಕ ಮದುವೆಯಾಗಲು ನಿರ್ಧರಿಸಿದ್ದರು. ಆದರೆ ಭಾರತದ ಭದ್ರತಾ ಇಲಾಖೆ ಸೀಮಾ ಅವರ ಮೇಲೆ ಕಣ್ಣಿಟ್ಟಿದೆ.

Related post

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ ಮದುವೆ

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ…

ನ್ಯೂಸ್ ಆರೋ: ಬರೋಬ್ಬರಿ 25 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ಮಂತ್ರ ಮಾಂಗಲ್ಯ ಮೂಲಕ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ತುಮಕೂರಲ್ಲಿ ನಡೆದಿದೆ. ಹೌದು ಜನಾಂದೋಲನದಲ್ಲಿ…
ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು! ಏನಿದು ವಿಷಯ?

ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು!…

ನ್ಯೂಸ್ ಆರೋ: ಎಷ್ಟೋ ಬಾರಿ ನಾವು ಈ ಹೊಟೇಲ್ ಗಳಿಗೆ ಹೋದಾಗ, ಅಲ್ಲಿ ಜನರು ವೆಜ್ ಮಂಚೂರಿಯನ್ನು ಆರ್ಡರ್ ಮಾಡಿದರೆ ಚಿಕನ್ ಮಂಚೂರಿ ತಂದು ಟೇಬಲ್ ಮೇಲೆ ಇಟ್ಟಿರುವ…
ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ನ್ಯೂಸ್ ಆರೋ: ಬಾಲಿವುಡ್‌ನ ಖ್ಯಾತ ನಟಿ ಅನುಷ್ಕಾ ಶರ್ಮಾ ಹಾಗೂ ಟೀಂ ಇಂಡಿಯಾದ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರ ಪರಿಚಯ ಯಾರಿಗೂ ಅಗತ್ಯವಿಲ್ಲ. ಇತ್ತೀಚೆಗಷ್ಟೇ ಅಂದರೆ ಮೇ…

Leave a Reply

Your email address will not be published. Required fields are marked *