16-18 ವರ್ಷದೊಳಗಿನ ಸಮ್ಮತಿ ಲೈಂಗಿಕ ಕ್ರಿಯೆ ವಿಚಾರ – ಕೇಂದ್ರ ಸರ್ಕಾರದ ಅಭಿಪ್ರಾಯ ಕೇಳಿದ ಸುಪ್ರೀಂ ಕೋರ್ಟ್‌

16-18 ವರ್ಷದೊಳಗಿನ ಸಮ್ಮತಿ ಲೈಂಗಿಕ ಕ್ರಿಯೆ ವಿಚಾರ – ಕೇಂದ್ರ ಸರ್ಕಾರದ ಅಭಿಪ್ರಾಯ ಕೇಳಿದ ಸುಪ್ರೀಂ ಕೋರ್ಟ್‌

ನ್ಯೂಸ್‌ ಆ್ಯರೋ : 16 ರಿಂದ 18 ವರ್ಷ ವಯಸ್ಸಿನ ಹದಿಹರೆಯದವರು ಸಮ್ಮತಿಯಿಂದ ಲೈಂಗಿಕ ಕ್ರಿಯೆ ತೊಡಗಿಸಿಕೊಂಡರೆ ಅದು ಅಪರಾಧವಲ್ಲ ಎಂದು ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಷಯಕ್ಕೆ ಕೇಂದ್ರ ಸರ್ಕಾರದ ಅಭಿಪ್ರಾಯವನ್ನು ಕೇಳಿ ಸುಪ್ರೀಂ ಕೋರ್ಟ್‌ ನೋಟಿಸ್ ನೀಡಿದೆ.

ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಜೆಬಿ ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ಪೀಠವು ವಕೀಲ ಹರ್ಷ ವಿಭೋರ್ ಸಿಂಘಾಲ್ ಅವರು ತಮ್ಮ ವೈಯಕ್ತಿಕ ಸಾಮರ್ಥ್ಯದಲ್ಲಿ ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಿಚಾರಣೆ ನಡೆಸಲು ಸಮ್ಮತಿ ನೀಡಿದೆ. ಈ ಬಗ್ಗೆ ಸರ್ಕಾರದ ಅಭಿಪ್ರಾಯ ಮುಖ್ಯ ಎಂದು ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರದ ಅಭಿಪ್ರಾಯವನ್ನು ತಿಳಿಸುವಂತೆ ನೋಟಿಸ್​ ನೀಡಿದೆ.

ಈ ಅರ್ಜಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್, ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವಾಲಯ, ಗೃಹ ವ್ಯವಹಾರಗಳು ಮತ್ತು ರಾಷ್ಟ್ರೀಯ ಮಹಿಳಾ ಆಯೋಗ ಸೇರಿದಂತೆ ಇತರ ಕೆಲವು ಶಾಸನಬದ್ಧ ಸಂಸ್ಥೆಗಳಿಗೆ ನೋಟಿಸ್ ನೀಡಿದೆ.

ಇನ್ನು ಈ ಅರ್ಜಿಯಲ್ಲಿ ತಿಳಿಸಿರುವಂತೆ 16 ವರ್ಷಕ್ಕಿಂತ ಮೇಲ್ಪಟ್ಟ ಮತ್ತು 18 ವರ್ಷಕ್ಕಿಂತ ಕಡಿಮೆ ವಯಸ್ಸಿನ ಹದಿಹರೆಯದವರ ನಡುವಿನ ಸಮ್ಮತಿಯ ಲೈಂಗಿಕತೆಯನ್ನು ಅತ್ಯಾಚಾರ ಕಾನೂನಿನಡಿಯಲ್ಲಿ ಪ್ರಶ್ನಿಸಲಾಗುತ್ತದೆ. ಆದರೆ ಅವರ ಒಪ್ಪಿಗೆ ಇದ್ದು ನಡೆದ ಲೈಂಗಿಕ ಕ್ರಿಯೆಯನ್ನು ಕಾನೂನಿನ ಮೂಲಕ ಅತ್ಯಾಚಾರ ಅಪರಾಧ ಎಂದು ಪರಿಗಣಿಸುವುದು ಸರಿಯಲ್ಲ, ಈ ಕಾನೂನನ್ನು ಶಾಸನಬದ್ಧವಾಗಿ ಅಮಾನ್ಯಗೊಳಿಸುವುದು ಸರಿ ಎಂದು ಹೇಳಲಾಗಿದೆ.

ಆರ್ಟಿಕಲ್ 32 ಅಡಿಯಲ್ಲಿ ಮ್ಯಾಂಡಮಸ್ ರಿಟ್​​ನ್ನು ಪಾಸ್ ಮಾಡಿ ಆ ಮೂಲಕ 16+ ರಿಂದ 18 ವಯಸ್ಕರ ನಡುವಿನ ಸ್ವಯಂಪ್ರೇರಿತ ಸಮ್ಮತಿಯ ಲೈಂಗಿಕ ಸಂಪರ್ಕದ ಎಲ್ಲಾ ಪ್ರಕರಣಗಳಿಗೆ ಅನ್ವಯಿಸಿದಂತೆ ಶಾಸನಬದ್ಧವಾಗಿ ಅತ್ಯಾಚಾರದ ಕಾನೂನನ್ನು ಅಪರಾಧೀಕರಿಸಲು 142 ಅಡಿಯಲ್ಲಿ ಅದರ ಅಧಿಕಾರವನ್ನು ಚಲಾಯಿಸಿ ಎಂದು ಈ ಅರ್ಜಿಯಲ್ಲಿ ತಿಳಿಸಲಾಗಿದೆ.

Related post

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ ಮದುವೆ

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ…

ನ್ಯೂಸ್ ಆರೋ: ಬರೋಬ್ಬರಿ 25 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ಮಂತ್ರ ಮಾಂಗಲ್ಯ ಮೂಲಕ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ತುಮಕೂರಲ್ಲಿ ನಡೆದಿದೆ. ಹೌದು ಜನಾಂದೋಲನದಲ್ಲಿ…
ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು! ಏನಿದು ವಿಷಯ?

ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು!…

ನ್ಯೂಸ್ ಆರೋ: ಎಷ್ಟೋ ಬಾರಿ ನಾವು ಈ ಹೊಟೇಲ್ ಗಳಿಗೆ ಹೋದಾಗ, ಅಲ್ಲಿ ಜನರು ವೆಜ್ ಮಂಚೂರಿಯನ್ನು ಆರ್ಡರ್ ಮಾಡಿದರೆ ಚಿಕನ್ ಮಂಚೂರಿ ತಂದು ಟೇಬಲ್ ಮೇಲೆ ಇಟ್ಟಿರುವ…
ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ನ್ಯೂಸ್ ಆರೋ: ಬಾಲಿವುಡ್‌ನ ಖ್ಯಾತ ನಟಿ ಅನುಷ್ಕಾ ಶರ್ಮಾ ಹಾಗೂ ಟೀಂ ಇಂಡಿಯಾದ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರ ಪರಿಚಯ ಯಾರಿಗೂ ಅಗತ್ಯವಿಲ್ಲ. ಇತ್ತೀಚೆಗಷ್ಟೇ ಅಂದರೆ ಮೇ…

Leave a Reply

Your email address will not be published. Required fields are marked *